ರಷ್ಯಾದ ಪ್ರಥಮ ಉಪ ಪ್ರಧಾನಮಂತ್ರಿಯಾದ ಡೆನಿಸ್ ಮಾಂಟುರೊವ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದರು

November 11th, 08:55 pm

ರಷ್ಯಾ ಒಕ್ಕೂಟದ ಮೊದಲ ಉಪ ಪ್ರಧಾನ ಮಂತ್ರಿಯಾದ ಘನತೆವೆತ್ತ ಡೆನಿಸ್ ಮಾಂಟುರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

October 22nd, 10:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಇಂದು ಕಜಾನ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು. ಈ ವರ್ಷ ಇದು ಅವರ ಎರಡನೇ ಭೇಟಿಯಾಗಿದ್ದು, ಜುಲೈ 2024ರಲ್ಲಿ ನಡೆದ 22ನೇ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಈ ಹಿಂದೆ ಮಾಸ್ಕೋದಲ್ಲಿ ಭೇಟಿಯಾಗಿದ್ದರು.

Prime Minister meets with the President of the Islamic Republic of Iran

October 22nd, 09:24 pm

PM Modi met Iran's President Dr. Masoud Pezeshkian on the sidelines of the 16th BRICS Summit in Kazan. PM Modi congratulated Pezeshkian on his election and welcomed Iran to BRICS. They discussed strengthening bilateral ties, emphasizing the Chabahar Port's importance for trade and regional stability. The leaders also addressed the situation in West Asia, with PM Modi urging de-escalation and protection of civilians through diplomacy.

ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಹೇಳಿಕೆ (ಅಕ್ಟೋಬರ್ 22, 2024)

October 22nd, 07:39 pm

ನಿಮ್ಮ ಸ್ನೇಹ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಗಾಗಿ ಕಜಾನ್ ನಂತಹ ಸುಂದರ ನಗರಕ್ಕೆ ಭೇಟಿ ನೀಡುವ ಅವಕಾಶ ದೊರೆತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ನಗರವು ಭಾರತದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಕಜನ್ ನಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದರಿಂದ ಈ ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ.

ರಷ್ಯಾದ ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

October 22nd, 01:00 pm

ಪ್ರಧಾನಿ ಮೋದಿ ರಷ್ಯಾದ ಕಜಾನ್‌ಗೆ ಆಗಮಿಸಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಹಲವು ವಿಶ್ವ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ

October 22nd, 07:36 am

ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ.

ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 27th, 03:25 pm

ತಮ್ಮ ಉಕ್ರೇನ್ ಭೇಟಿಯ ಒಳನೋಟಗಳನ್ನು ಹಂಚಿಕೊಂಡರು ಮತ್ತು ರಷ್ಯಾ-ಉಕ್ರೇನ್ ಸಂಘರ್ಷ ಕೊನೆಗೊಳಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ದಾರಿ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದರು.

ಫಲಿತಾಂಶಗಳ ಪಟ್ಟಿ: ರಷ್ಯಾಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ

July 09th, 09:59 pm

2024 ರಿಂದ 2029 ರವರೆಗಿನ ರಷ್ಯಾದ ದೂರಪ್ರಾಚ್ಯದಲ್ಲಿ ವ್ಯಾಪಾರ, ಆರ್ಥಿಕ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರದ ಕಾರ್ಯಕ್ರಮ ಮತ್ತು ರಷ್ಯಾದ ಒಕ್ಕೂಟದ ಆರ್ಕ್ಟಿಕ್ ವಲಯದಲ್ಲಿ ಸಹಕಾರ ತತ್ವಗಳು

2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ

July 09th, 09:49 pm

2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಮಂತ್ರಿ

July 09th, 08:12 pm

ಕ್ರೆಮ್ಲಿನ್ ನ ಸೇಂಟ್ ಆಂಡ್ರ್ಯೂ ಹಾಲ್ ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ರವರು ಭಾರತ-ರಷ್ಯಾ ಸಂಬಂಧಗಳ ಉತ್ತಮಗೊಳಿಸುವಿಕೆಗೆ ನೀಡಿದ ಕೊಡುಗೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ದಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು 2019ರಲ್ಲಿ ಘೋಷಿಸಲಾಗಿತ್ತು.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಂಡ ಗೌರವಾನ್ವಿತ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ

July 08th, 09:49 am

ನಾನು 22ನೇ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ಪ್ರಾರಂಭಿಸುತ್ತಿದ್ದೇನೆ ಮತ್ತು ಮುಂದಿನ ಮೂರು ದಿನಗಳಲ್ಲಿ ಆಸ್ಟ್ರಿಯಾ ಗಣರಾಜ್ಯಕ್ಕೆ ನನ್ನ ಮೊದಲ ಭೇಟಿ ನೀಡಲಿದ್ದೇನೆ.

ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 08-10, 2024)

July 04th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8-10ರಂದು ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮರು ಆಯ್ಕೆಗೆ ರಷ್ಯಾ ಅಧ್ಯಕ್ಷ ಪುಟಿನ್‌ ಅಭಿನಂದನೆ

June 05th, 08:01 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಅವರ ದೂರವಾಣಿ ಕರೆ ಸ್ವೀಕರಿಸಿದ್ದು, ಸಾರ್ವತ್ರಿಕ ಚುನಾವಣೆ ಯಶಸ್ಸಿಗೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಆಯ್ಕೆಗೆ ಶುಭ ಕೋರಿದ್ದಾರೆ.

ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

March 20th, 03:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

PM congratulates H.E. Mr. Vladimir Putin on his re-election as the President of the Russian Federation

March 18th, 06:53 pm

Prime Minister Narendra Modi has congratulated H.E. Mr. Vladimir Putin on his re-election as the President of the Russian Federation. The Prime Minister said, Warm congratulations to H.E. Mr. Vladimir Putin on his re-election as the President of the Russian Federation. Look forward to working together to further strengthen the time-tested Special & Privileged Strategic Partnership between India and Russia in the years to come.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷ ಶ್ರೀ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದರು.

January 15th, 06:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷ ಎಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.