ಶಿರಡಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 26th, 03:46 pm
ಇಂದು, ಸಾಯಿಬಾಬಾ ಅವರ ಆಶೀರ್ವಾದದಿಂದ, 7500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಅಥವಾ ಅವುಗಳ ಅಡಿಪಾಯ ಹಾಕಲಾಗಿದೆ. ಕಳೆದ ಐದು ದಶಕಗಳಿಂದ ಮಹಾರಾಷ್ಟ್ರ ಕಾಯುತ್ತಿದ್ದ ನಿಲ್ವಾಂಡೆ ಅಣೆಕಟ್ಟು ಸಹ ಪೂರ್ಣಗೊಂಡಿದೆ; ಮತ್ತು ಅಲ್ಲಿ ' ಜಲ ಪೂಜೆ ' ಮಾಡುವ ಸೌಭಾಗ್ಯ ನನಗೆ ಸಿಕ್ಕಿದ್ದು ನನ್ನ ಅದೃಷ್ಟ. ಇಂದು ಉದ್ಘಾಟಿಸಲಾದ ದೇವಾಲಯಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಅವಕಾಶವೂ ನನಗೆ ಸಿಕ್ಕಿತು. 'ದರ್ಶನ ಕ್ಯೂ' ಯೋಜನೆ ಪೂರ್ಣಗೊಂಡ ನಂತರ, ದೇಶಾದ್ಯಂತ ಮತ್ತು ವಿದೇಶಗಳ ಭಕ್ತರಿಗೆ ಪ್ರಯೋಜನವಾಗಲಿದೆ.ಮಹಾರಾಷ್ಟ್ರದ ಶಿರಡಿಯಲ್ಲಿ ಸುಮಾರು 7500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ / ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 26th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಅಹ್ಮದ್ನಗರದ ಶಿರಡಿಯಲ್ಲಿ ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರಗಳಲ್ಲಿ ಸುಮಾರು 7500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಲೋಕಾರ್ಪಣೆ ನೆರವೇರಿಸಿದರು. ಬಹು ಅಭಿವೃದ್ಧಿ ಯೋಜನೆಗಳಲ್ಲಿ ಅಹ್ಮದ್ನಗರ ಸಿವಿಲ್ ಆಸ್ಪತ್ರೆಯ ಆಯುಷ್ ಆಸ್ಪತ್ರೆ; ಕುರ್ದುವಾಡಿ-ಲಾತೂರ್ ರಸ್ತೆ ರೈಲ್ವೆ ವಿಭಾಗದ ವಿದ್ಯುದ್ದೀಕರಣ (186 ಕಿ.ಮೀ); ಜಲ್ಗಾಂವ್ -ಭೂಸಾವಲ್ ಸಂಪರ್ಕಿಸುವ 3ನೇ ಮತ್ತು 4ನೇ ರೈಲ್ವೆ ಮಾರ್ಗಗಳು (24.46 ಕಿ.ಮೀ); ರಾಷ್ಟ್ರೀಯ ಹೆದ್ದಾರಿ 166ರ ಸಾಂಗ್ಲಿ-ಬೋರ್ಗಾಂವ್ ಚತುಷ್ಪಥ ರಸ್ತೆ (ಪ್ಯಾಕೇಜ್-1); ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ಮನ್ಮಾಡ್ ಟರ್ಮಿನಲ್ನಲ್ಲಿ ಹೆಚ್ಚುವರಿ ಸೌಲಭ್ಯಗಳು ಸೇರಿವೆ. ಅಹ್ಮದ್ನಗರ ಸಿವಿಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಶ್ರೀ ಮೋದಿ ಅವರು ಫಲಾನುಭವಿಗಳಿಗೆ ʻಆಯುಷ್ಮಾನ್ ಕಾರ್ಡ್ʼ ಮತ್ತು ʻಸ್ವಾಮಿತ್ವ ಕಾರ್ಡ್ʼ ಗಳನ್ನು ವಿತರಿಸಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ʻಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 04th, 11:00 am
ಪುಟ್ಟಪರ್ತಿಗೆ ಹಲವು ಬಾರಿ ಭೇಟಿ ನೀಡುವ ಸೌಭಾಗ್ಯ ನನಗೆ ದೊರೆತಿದೆ. ನಾನು ಮತ್ತೊಮ್ಮೆ ನಿಮ್ಮೆಲ್ಲರ ನಡುವೆ ಇರಲು ಬಯಸಿದ್ದೆ, ನಿಮ್ಮನ್ನು ಭೇಟಿಯಾಗಲು ಮತ್ತು ಇಂದು ಅಲ್ಲಿ ಉಪಸ್ಥಿತರಿರುವ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆ. ಆದರೆ, ನನ್ನ ಬಿಡುವುರಹಿತ ವೇಳಾಪಟ್ಟಿಯಿಂದಾಗಿ, ನನಗೆ ಇದು ಸಾಧ್ಯವಾಗಲಿಲ್ಲ. ನನ್ನನ್ನು ಆಹ್ವಾನಿಸುವಾಗ, ಭಾಯಿ ರತ್ನಾಕರ್ ಅವರು 'ನೀವು ಒಮ್ಮೆ ಬಂದು ಆಶೀರ್ವಾದ ನೀಡಬೇಕು' ಎಂದು ಹೇಳಿದರು. ರತ್ನಾಕರ್ ಅವರ ಹೇಳಿಕೆಯನ್ನು ಸರಿಪಡಿಸುವ ಅಗತ್ಯವಿದೆ ನಾನು ಭಾವಿಸುತ್ತೇನೆ. ನಾನು ಖಂಡಿತವಾಗಿಯೂ ಅಲ್ಲಿಗೆ ಬರುತ್ತೇನೆ, ಆದರೆ ಆಶೀರ್ವಾದ ನೀಡಲು ಅಲ್ಲ, ಬದಲಾಗಿ ಆಶೀರ್ವಾದ ಪಡೆಯಲು. ತಂತ್ರಜ್ಞಾನದ ಸಹಾಯದಿಂದ ನಾನು ಇಂದು ನಿಮ್ಮೆಲ್ಲರ ನಡುವೆ ಇದ್ದೇನೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಜೊತೆ ಸಂಬಂಧ ಹೊಂದಿರುವ ಎಲ್ಲಾ ಸದಸ್ಯರು ಮತ್ತು ಸತ್ಯ ಸಾಯಿ ಬಾಬಾ ಅವರ ಎಲ್ಲಾ ಭಕ್ತರನ್ನು ಇಂದು ಈ ಕಾರ್ಯಕ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ಇಡೀ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಅವರ ಸ್ಫೂರ್ತಿ ಮತ್ತು ಆಶೀರ್ವಾದ ನಮ್ಮೊಂದಿಗಿದೆ. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಧ್ಯೇಯದ ವಿಸ್ತರಣೆಯನ್ನು ನೋಡಿ ನನಗೆ ಸಂತಸವಾಗಿದೆ. ದೇಶವು ʻಶ್ರೀ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ರೂಪದಲ್ಲಿ ಪ್ರಮುಖ ಚಿಂತಕರ ಚಾವಡಿಯನ್ನು ಪಡೆಯುತ್ತಿದೆ. ನಾನು ಈ ಸಮಾವೇಶ ಕೇಂದ್ರದ ಚಿತ್ರಗಳನ್ನು ಮತ್ತು ಅದರ ಇಣುಕುನೋಟಗಳನ್ನು ಈಗ ಪ್ರದರ್ಶಿಸಲಾದ ಕಿರುಚಿತ್ರದಲ್ಲಿ ನೋಡಿದ್ದೇನೆ. ಇದು ಆಧುನಿಕತೆಯ ಸ್ಪರ್ಶದೊಂದಿಗೆ ಆಧ್ಯಾತ್ಮಿಕ ಅನುಭವವನ್ನು ಒದಗಿಸುತ್ತದೆ. ಇದು ಸಾಂಸ್ಕೃತಿಕ ದೈವತ್ವದ ಜೊತೆಗೆ, ಬೌದ್ಧಿಕ ಭವ್ಯತೆಯನ್ನು ಒಳಗೊಂಡಿದೆ. ಈ ಕೇಂದ್ರವು ಆಧ್ಯಾತ್ಮಿಕ ಸಮ್ಮೇಳನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಪ್ರಪಂಚದಾದ್ಯಂತದ ವಿವಿಧ ಕ್ಷೇತ್ರಗಳ ವಿದ್ವಾಂಸರು ಮತ್ತು ತಜ್ಞರು ಇಲ್ಲಿ ಒಟ್ಟುಗೂಡುತ್ತಾರೆ. ಈ ಕೇಂದ್ರವು ಯುವಕರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ.ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ
July 04th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಶ್ರೀ ಸಾಯಿ ಹಿರಾ ಜಾಗತಿಕ ಸಮ್ಮೇಳನ ಸಭಾಂಗಣ (ಗ್ಲೋಬಲ್ ಕನ್ವೆನ್ಷನ್ ಸೆಂಟರ್) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತದಿಂದ ಆಗಮಿಸಿರುವ ಪ್ರಮುಖ ಗಣ್ಯರು ಮತ್ತು ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.PM offers prayers at Shri Saibaba's Samadhi Temple in Shirdi
October 19th, 11:30 am
PM Narendra Modi offered prayers at Shri Saibaba's Samadhi Temple in Shirdi, Maharashtra.