ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ

September 16th, 01:30 pm

ಇಂದು, ಇಡೀ ಜಗತ್ತು ಸಾಂಕ್ರಾಮಿಕ ರೋಗದ ನಂತರ ಆರ್ಥಿಕ ಚೇತರಿಕೆಯ ಸವಾಲುಗಳನ್ನು ಎದುರಿಸುತ್ತಿರುವಾಗ ಎಸ್‌ಸಿಒ ಪಾತ್ರವು ಬಹಳ ಮುಖ್ಯವಾಗಿದೆ. ಎಸ್‌ ಸಿ ಒ ಸದಸ್ಯ ರಾಷ್ಟ್ರಗಳು ಜಾಗತಿಕ ಜಿಡಿಪಿಯ ಸುಮಾರು 30 ಪ್ರತಿಶತದಷ್ಟು ಕೊಡುಗೆ ನೀಡುತ್ತವೆ ಮತ್ತು ವಿಶ್ವದ ಜನಸಂಖ್ಯೆಯ 40 ಪ್ರತಿಶತದಷ್ಟು ಜನರು ಎಸ್‌ಸಿಒ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಭಾರತವು ಎಸ್‌ಸಿಒ ಸದಸ್ಯರ ನಡುವೆ ಹೆಚ್ಚಿನ ಸಹಕಾರ ಮತ್ತು ಪರಸ್ಪರ ನಂಬಿಕೆಯನ್ನು ಬೆಂಬಲಿಸುತ್ತದೆ. ಉಕ್ರೇನ್‌ನಲ್ಲಿನ ಸಾಂಕ್ರಾಮಿಕ ಮತ್ತು ಬಿಕ್ಕಟ್ಟು ಜಾಗತಿಕ ಪೂರೈಕೆ ಸರಪಳಿಯಲ್ಲಿ ಅನೇಕ ಅಡೆತಡೆಗಳನ್ನು ಉಂಟುಮಾಡಿತು, ಈ ಕಾರಣದಿಂದಾಗಿ ಇಡೀ ಪ್ರಪಂಚವು ಹಿಂದೆಂದೂ ಕಾಣದಂತಹ ಇಂಧನ ಮತ್ತು ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಮ್ಮ ಪ್ರದೇಶದಲ್ಲಿ ವಿಶ್ವಾಸಾರ್ಹ, ಚೇತರಿಸಿಕೊಳ್ಳಬಲ್ಲ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಅಭಿವೃದ್ಧಿಪಡಿಸಲು ಎಸ್‌ ಸಿ ಒ ಪ್ರಯತ್ನಗಳನ್ನು ಮಾಡಬೇಕು. ಇದಕ್ಕೆ ಉತ್ತಮ ಸಂಪರ್ಕದ ಅಗತ್ಯವಿರುತ್ತದೆ, ಜೊತೆಗೆ ನಾವೆಲ್ಲರೂ ಪರಸ್ಪರ ಸಾರಿಗೆಯ ಸಂಪೂರ್ಣ ಹಕ್ಕುಗಳನ್ನು ನೀಡುವುದು ಸಹ ಮುಖ್ಯವಾಗಿದೆ.

ಎಸ್.ಸಿ.ಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಮರ್ಕಂಡ್ ಗೆ ಆಗಮಿಸಿದ ಪ್ರಧಾನಮಂತ್ರಿ

September 15th, 10:01 pm

ಉಜ್ಬೇಕಿಸ್ತಾನದ ಅಧ್ಯಕ್ಷ ಗೌರವಾನ್ವಿತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ ಶಾಂಘೈ ಸಹಕಾರ ಸಂಘಟನೆ [ಎಸ್.ಸಿ.ಒ] ಮುಖ್ಯಸ್ಥರ 22 ನೇ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉಜ್ಬೇಕಿಸ್ತಾನದ ಸಮರ್ಕಂಡ್ಗೆ ಇಂದು ಆಗಮಿಸಿದರು.

ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

September 15th, 02:15 pm

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.