ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525 ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 23rd, 07:00 pm
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬ್ರಜ್ ನ ಗೌರವಾನ್ವಿತ ಸಂತರು, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳು, ಸಂಪುಟದ ಹಲವಾರು ಸದಸ್ಯರು, ಮಥುರಾದ ಸಂಸತ್ ಸದಸ್ಯರು, ಸಹೋದರಿ ಹೇಮಾ ಮಾಲಿನಿ ಜೀ ಮತ್ತು ಬ್ರಜ್ ನ ನನ್ನ ಪ್ರೀತಿಯ ನಿವಾಸಿಗಳೇ!ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
November 23rd, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ಮೀರಾ ಬಾಯಿ ಅವರ ಗೌರವಾರ್ಥ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ವಸ್ತುಪ್ರದರ್ಶನದಲ್ಲಿ ಹೆಜ್ಜೆ ಹಾಕಿದ ಅವರು ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಾಕ್ಷಿಯಾದರು. ಈ ಸಂದರ್ಭವು ಸಂತ ಮೀರಾಬಾಯಿ ಅವರ ಸ್ಮರಣಾರ್ಥ ವರ್ಷವಿಡೀ ಕಾರ್ಯಕ್ರಮಗಳ ಸರಣಿಯ ಚಾಲನೆಗೂ ನಾಂದಿ ಹಾಡಿತು.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.ಮೀರಾಬಾಯಿಯವರ ಜಯಂತಿಯಂದು ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ
October 28th, 06:32 pm
ಮೀರಾಬಾಯಿ ಅವರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ಮರಿಸಿಸಿದ್ದಾರೆ. ಮೀರಾಬಾಯಿ ಶ್ರೀಕೃಷ್ಣನ ಅಪ್ರತಿಮ ಭಕ್ತೆ. ಮತ್ತು ಅವರ ಶ್ಲೋಕಗಳು ಪ್ರತಿ ಮನೆಯಲ್ಲೂ ಅನುರಣಿಸುತ್ತವೆ ಮತ್ತು ಅವರ ಜೀವನವು ಸಮಾಜಕ್ಕೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ಹೇಳಿದರು.