ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರಿಗೆ ಪ್ರಧಾನಮಂತ್ರಿ ನಮನ
October 05th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶ್ರೀ ಸೇವಾಲಾಲ್ ಮಹಾರಾಜರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಸೇವಾ ಲಾಲ್ ಅವರು ಸಮಾಜ ಸುಧಾರಣೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನದ ಸೆಲೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.ಮಹಾರಾಷ್ಟ್ರದ ವಾಶಿಮ್ ನಲ್ಲಿ ಕೃಷಿ ಮತ್ತು ಪಶುಸಂಗೋಪನಾ ವಲಯದ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 05th, 12:05 pm
ದೇಶಾದ್ಯಂತದಿಂದ ಬಂದು ಭಾಗವಹಿಸುತ್ತಿರುವವರನ್ನು ನಾನು ಅಭಿವಂದಿಸುತ್ತೇನೆ - ನಮ್ಮ ಗೌರವಾನ್ವಿತ ಸಹೋದರ ಸಹೋದರಿಯರೇ ! ಜೈ ಸೇವಾಲಾಲ್! ಜೈ ಸೇವಾಲಾಲ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾಶಿಮ್ ನಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು
October 05th, 12:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾಶಿಮ್ ನಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 18 ನೇ ಕಂತಿನ ವಿತರಣೆ, ನಮೋ ಶೆಟ್ಕರಿ ಮಹಾಸನ್ಮಾನ್ ನಿಧಿ ಯೋಜನೆಯ 5 ನೇ ಕಂತಿನ ಪ್ರಾರಂಭ, ಕೃಷಿ ಮೂಲಸೌಕರ್ಯ ನಿಧಿ (ಎಐಎಫ್) ಅಡಿಯಲ್ಲಿ 7,500 ಕ್ಕೂ ಹೆಚ್ಚು ಯೋಜನೆಗಳ ಸಮರ್ಪಣೆ, 9,200 ರೈತ ಉತ್ಪಾದಕ ಸಂಸ್ಥೆಗಳು, ಮಹಾರಾಷ್ಟ್ರದಾದ್ಯಂತ ಒಟ್ಟು 19 ಮೆಗಾವ್ಯಾಟ್ ಸಾಮರ್ಥ್ಯದ ಐದು ಸೌರ ಉದ್ಯಾನಗಳು ಮತ್ತು ಜಾನುವಾರು ಮತ್ತು ಸ್ಥಳೀಯ ಲಿಂಗ-ವಿಂಗಡಿಸಲಾದ ವೀರ್ಯ ತಂತ್ರಜ್ಞಾನಕ್ಕಾಗಿ ಏಕೀಕೃತ ಜೀನೋಮಿಕ್ ಚಿಪ್ ಅನ್ನು ಪ್ರಾರಂಭಿಸುವುದು ಈ ಉಪಕ್ರಮಗಳಲ್ಲಿ ಸೇರಿವೆ.ಅಕ್ಟೋಬರ್ 5ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 04th, 05:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 5 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:15 ರ ಸುಮಾರಿಗೆ ಅವರು ಪೊಹರಾದೇವಿಯ ಜಗದಂಬಾ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ. ವಾಶಿಮ್ ನಲ್ಲಿ ಸಂತ ಸೇವಾಲಾಲ್ ಮಹಾರಾಜ್ ಮತ್ತು ಸಂತ ರಾಮರಾವ್ ಮಹಾರಾಜ್ ಅವರ ಸಮಾಧಿಗಳಿಗೂ ಅವರು ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ಬೆಳಗ್ಗೆ 11.30ಕ್ಕೆ ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಸಾರುವ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ಸುಮಾರು 23,300 ಕೋಟಿ ರೂ.ಗಳ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಮಂತ್ರಿ ಅವರು ಥಾಣೆಯಲ್ಲಿ 32,800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬಿಕೆಸಿ ಮೆಟ್ರೋ ನಿಲ್ದಾಣದಿಂದ ಬಿಕೆಸಿಯಿಂದ ಮುಂಬೈನ ಆರೆ ಜೆವಿಎಲ್ಆರ್ ಗೆ ಚಲಿಸುವ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬಿಕೆಸಿ ಮತ್ತು ಸಾಂತಾಕ್ರೂಜ್ ನಿಲ್ದಾಣಗಳ ನಡುವಿನ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ.