ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ: ಪ್ರಧಾನಿ ಮೋದಿ ಸ್ಮರಣೆ
October 31st, 08:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಟೇಲ್ ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅಸಾಧಾರಣ ಸಮರ್ಪಣೆ ಮನೋಭಾವದಿಂದ ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದವರು ಎಂದು ಸ್ಮರಿಸಿಕೊಂಡಿದ್ದಾರೆ.ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.