ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 11th, 11:01 am
ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
September 11th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.ಸೆಪ್ಟೆಂಬರ್ 11ರಂದು ಸರ್ದಾರ್‌ಧಾಮ್ ಭವನದ ಲೋಕಾರ್ಪಣೆ ಮತ್ತು ಸರ್ಧಾರ್‌ದಾಮ್ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ
September 10th, 01:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಸರ್ದಾರ್ ಧಾಮ್‌ಭವನದ ಲೋಕಾರ್ಪಣೆ ಮತ್ತು ಸರ್ದಾರ್‌ಧಾಮ್ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ.