ಡಿಎಂಕೆ 'ಡಿವೈಡ್, ಡಿವೈಡ್ ಮತ್ತು ಡಿವೈಡ್' ಮೇಲೆ ಸ್ಥಾಪಿಸಿದೆ ಮತ್ತು 'ಸನಾತನ'ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ವೆಲ್ಲೂರಿನಲ್ಲಿ ಪ್ರಧಾನಿ ಮೋದಿ
April 10th, 02:50 pm
ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೆಲ್ಲೂರಿನ ರೋಮಾಂಚಕ ಜನರು ಆತ್ಮೀಯ ಸ್ವಾಗತ ಕೋರಿದರು. ವೆಲ್ಲೂರಿನ ಇತಿಹಾಸ, ಪುರಾಣ, ಶೌರ್ಯಕ್ಕೆ ನಾನು ತಲೆಬಾಗುತ್ತೇನೆ ಎಂದರು. ವೆಲ್ಲೂರು ಬ್ರಿಟಿಷರ ವಿರುದ್ಧ ಒಂದು ಪ್ರಮುಖ ಕ್ರಾಂತಿಯನ್ನು ಸೃಷ್ಟಿಸಿತು ಮತ್ತು ಪ್ರಸ್ತುತ, ಎನ್.ಡಿ.ಎ.ಗೆ ಅದರ ದೃಢವಾದ ಬೆಂಬಲವು 'ಫಿರ್ ಏಕ್ ಬಾರ್ ಮೋದಿ ಸರ್ಕಾರ್'ನ ಮನೋಭಾವವನ್ನು ಪ್ರದರ್ಶಿಸುತ್ತದೆ.ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವಾಗ ವೆಲ್ಲೂರು ಮತ್ತು ಮೆಟ್ಟುಪಾಳ್ಯಂನಲ್ಲಿ ಭಾರೀ ಜನ ಬೆಂಬಲ
April 10th, 10:30 am
ಲೋಕಸಭೆ ಚುನಾವಣೆಗೆ ಮುನ್ನ, ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೆಲ್ಲೂರು ಮತ್ತು ಮೆಟ್ಟುಪಾಳ್ಯಂನಲ್ಲಿ ಭಾರೀ ಜನ ಬೆಂಬಲದಿಂದ ಆತ್ಮೀಯ ಸ್ವಾಗತ ನೀಡಲಾಯಿತು. ವೆಲ್ಲೂರಿನ ಇತಿಹಾಸ, ಪುರಾಣ, ಶೌರ್ಯಕ್ಕೆ ನಾನು ತಲೆಬಾಗುತ್ತೇನೆ ಎಂದರು. ವೆಲ್ಲೂರು ಬ್ರಿಟಿಷರ ವಿರುದ್ಧ ಒಂದು ಪ್ರಮುಖ ಕ್ರಾಂತಿಯನ್ನು ಸೃಷ್ಟಿಸಿತು ಮತ್ತು ಪ್ರಸ್ತುತ, ಎನ್.ಡಿ.ಎಗೆ ಅದರ ದೃಢವಾದ ಬೆಂಬಲವು 'ಫಿರ್ ಏಕ್ ಬಾರ್ ಮೋದಿ ಸರ್ಕಾರ್'ನ ಮನೋಭಾವವನ್ನು ಪ್ರದರ್ಶಿಸುತ್ತದೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 12:00 pm
ಪೊಂಗಲ್ ಹಬ್ಬದ ಶುಭ ದಿನದಂದು, ತಮಿಳುನಾಡಿನ ಪ್ರತಿ ಮನೆಯಲ್ಲೂ ಪೊಂಗಲ್ ಹಬ್ಬದ ಹರಿವು ಕಂಡುಬರುತ್ತದೆ. ನಿಮ್ಮ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿಯ ಹರಿವು ಅಡೆತಡೆಯಿಲ್ಲದೆ ಮುಂದುವರಿಯಲಿ ಎಂಬುದು ನನ್ನ ಆಸೆ. ನಿನ್ನೆಯಷ್ಟೇ, ದೇಶವು ಲೋಹ್ರಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿ-ಉತ್ತರಾಯಣವನ್ನು ಆಚರಿಸುತ್ತಿದ್ದರೆ, ಇತರರು ನಾಳೆ ಆಚರಿಸಬಹುದು. ಮಾಘ್ ಬಿಹು ಕೂಡ ಹತ್ತಿರದಲ್ಲಿದೆ. ಈ ಹಬ್ಬಗಳಿಗಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ
January 14th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಪೊಂಗಲ್ ಹಬ್ಬದಲ್ಲಿ ಆಚರಣೆಯಲ್ಲಿ ಭಾಗವಹಿಸಿದರು.ಮನ್ ಕಿ ಬಾತ್‌ಗಾಗಿ ಜನರು ತೋರಿದ ಪ್ರೀತಿ ಅಭೂತಪೂರ್ವ: ಪ್ರಧಾನಿ ಮೋದಿ
May 28th, 11:30 am
ನನ್ನ ಪ್ರೀತಿಯ ದೇಶಬಾಂಧವರೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಬಾರಿಯ 'ಮನದ ಮಾತಿನ' ಸಂಚಿಕೆ 2ನೇ ಶತಕದ ಆರಂಭವಾಗಿದೆ. ಕಳೆದ ತಿಂಗಳು ನಾವೆಲ್ಲರೂ ಶತಕದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದೇವೆ. ನಿಮ್ಮ ಭಾಗವಹಿಸುವಿಕೆ ಈ ಕಾರ್ಯಕ್ರಮದ ಬಹು ದೊಡ್ಡ ಶಕ್ತಿಯಾಗಿದೆ. 100ನೇ ಸಂಚಿಕೆ ಪ್ರಸಾರವಾಗುವ ಸಮಯದಲ್ಲಿ ಸಂಪೂರ್ಣ ದೇಶ ಒಂದು ಸೂತ್ರದಲ್ಲಿ ಬಂಧಿಸಿದಂತಾಗಿತ್ತು. ನಮ್ಮ ಸ್ವಚ್ಛತಾ ಕರ್ಮಚಾರಿ ಸಹೋದರ ಮತ್ತು ಸಹೋದರಿಯರು ಅಥವಾ ವಿವಿಧ ಕ್ಷೇತ್ರಗಳ ಅನುಭವಿಗಳಾಗಿರಲಿ, 'ಮನದ ಮಾತು' ಎಲ್ಲರನ್ನೂ ಒಟ್ಟಿಗೆ ಸೇರಿಸುವ ಕೆಲಸ ಮಾಡಿದೆ. 'ಮನದ ಮಾತಿಗೆ' ನೀವೆಲ್ಲರೂ ತೋರಿದ ಆತ್ಮೀಯತೆ ಮತ್ತು ಪ್ರೀತಿ ಅಭೂತಪೂರ್ವವಾಗಿದೆ, ಅದು ಭಾವುಕರನ್ನಾಗಿಸುವಂತಿದೆ. 'ಮನದ ಮಾತು' ಪ್ರಸಾರವಾದಾಗ, ಪ್ರಪಂಚದ ವಿವಿಧ ದೇಶಗಳಲ್ಲಿ, ಬೇರೆ ಬೇರೆ ಸಮಯಕ್ಕೆ ಅಂದರೆ, ಎಲ್ಲೋ ಸಂಜೆ ಮತ್ತು ಎಲ್ಲೋ ತಡರಾತ್ರಿಯಾಗಿತ್ತು, ಇದನ್ನು ಲೆಕ್ಕಿಸದೆ, 100 ನೇ ಸಂಚಿಕೆಯನ್ನು ಹೆಚ್ಚಿನ ಸಂಖ್ಯೆಯ ಜನರು ಆಲಿಸಲು ಸಮಯ ಮೀಸಲಿಟ್ಟರು. ನಾನು ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ನ್ಯೂಜಿಲೆಂಡ್‌ನ ಆ ವೀಡಿಯೊವನ್ನು ಕೂಡ ನೋಡಿದೆ, ಅದರಲ್ಲಿ 100 ವರ್ಷದ ತಾಯಿಯೊಬ್ಬರು ಆಶೀರ್ವಾದ ನೀಡುತ್ತಿದ್ದರು. ದೇಶ ವಿದೇಶದ ಜನರು 'ಮನದ ಮಾತಿನ' ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಜನರು ರಚನಾತ್ಮಕ ವಿಶ್ಲೇಷಣೆಯನ್ನು ಸಹ ಮಾಡಿದ್ದಾರೆ. ‘ಮನದ ಮಾತಿನಲ್ಲಿ’ ದೇಶ ಮತ್ತು ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತ್ರ ಚರ್ಚೆಯಾಗಿರುವುದನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ಗೌರವಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ.ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 29th, 07:46 pm
ನಿಮ್ಮೆಲ್ಲರಿಗೂ ಗಂಗಾ-ಪುಷ್ಕರಾಳು ಹಬ್ಬದ ಶುಭಾಶಯಗಳು! ನೀವೆಲ್ಲರೂ ಕಾಶಿಗೆ ಬಂದಿರುವುದರಿಂದ ಈ ಭೇಟಿಯಲ್ಲಿ ನೀವೆಲ್ಲರೂ ವೈಯಕ್ತಿಕವಾಗಿ ನನ್ನ ಅತಿಥಿಗಳು. ಅತಿಥಿಗಳು ದೇವರಿಗೆ ಸಮಾನ ಎಂದು ನಾವು ನಂಬುತ್ತೇವೆ. ಕೆಲವು ಕಾರ್ಯ ನಿಮಿತ್ತ ನಿಮ್ಮನ್ನು ಸ್ವಾಗತಿಸಲು ನಾನು ಅಲ್ಲಿ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ನಾನು ನಿಮ್ಮೆಲ್ಲರ ನಡುವೆ ಇರಬಹುದೆಂದು ಬಯಸುತ್ತೇನೆ. ಈ ಕಾರ್ಯಕ್ರಮಕ್ಕಾಗಿ ನಾನು ಕಾಶಿ-ತೆಲುಗು ಸಮಿತಿ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಜಿ.ವಿ.ಎಲ್. ನರಸಿಂಹರಾವ್ ಜಿ ಅವರನ್ನು ಅಭಿನಂದಿಸುತ್ತೇನೆ. ಕಾಶಿಯ ಘಟ್ಟಗಳಲ್ಲಿ ನಡೆಯುವ ಈ ಗಂಗಾ-ಪುಷ್ಕರಾಳು ಉತ್ಸವವು ಗಂಗಾ ಮತ್ತು ಗೋದಾವರಿ ಸಂಗಮದಂತೆ. ಇದು ಭಾರತದ ಪ್ರಾಚೀನ ನಾಗರಿಕತೆಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳ ಸಂಗಮದ ಆಚರಣೆಯಾಗಿದೆ. ಕೆಲವು ತಿಂಗಳ ಹಿಂದೆ ಕಾಶಿ-ತಮಿಳು ಸಂಗಮವನ್ನು ಇದೇ ಕಾಶಿ ಭೂಮಿಯಲ್ಲಿ ಆಯೋಜಿಸಿದ್ದು ನಿಮಗೆ ನೆನಪಿರಬಹುದು. ಕೆಲವೇ ದಿನಗಳ ಹಿಂದೆ ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿತ್ತು. ಈ ‘ಆಜಾದಿ ಕಾ ಅಮೃತ ಕಾಲ್’ ದೇಶದ ವೈವಿಧ್ಯತೆ ಮತ್ತು ವಿವಿಧ ವಿಚಾರಧಾರೆಗಳ ಸಂಗಮ ಎಂದು ಆಗ ಹೇಳಿದ್ದೆ. ಈ ವೈವಿಧ್ಯಗಳ ಸಂಗಮದಿಂದ ರಾಷ್ಟ್ರೀಯತೆಯ ಅಮೃತವು ಹೊರಹೊಮ್ಮುತ್ತಿದೆ, ಇದು ಭಾರತವನ್ನು ಅನಂತ ಭವಿಷ್ಯದವರೆಗೆ ಜೀವಂತವಾಗಿರಿಸುತ್ತದೆ.ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 29th, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಭಾಷಣ ಮಾಡಿದರು.ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ
April 26th, 02:30 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ ಗಣೇಶನ್ ಅವರೇ, ಜಾರ್ಖಂಡ್ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಪುರುಷೋತ್ತಮ ರೂಪಾಲಾ ಅವರೇ, ಎಲ್. ಮುರುಗನ್ ಅವರೇ ಮತ್ತು ಮೀನಾಕ್ಷಿ ಲೇಖಿ ಅವರೇ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಸೌರಾಷ್ಟ್ರ ತಮಿಳು ಸಂಗಮದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 10:30 am
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅತಿಥಿಗೆ ಆತಿಥ್ಯ ನೀಡುವುದು ವಿಶೇಷ ಅನುಭವ, ಆದರೆ ದಶಕಗಳ ನಂತರ ಮನೆಗೆ ಮರಳುವ ಅನುಭವ ಮತ್ತು ಸಂತೋಷಕ್ಕೆ ಸಾಟಿಯಿಲ್ಲ ಎಂಬ ಅಂಶದ ಬಗ್ಗೆ ಗಮನ ಸೆಳೆದರು. ಅದೇ ಉತ್ಸಾಹದಿಂದ ರಾಜ್ಯಕ್ಕೆ ಭೇಟಿ ನೀಡುತ್ತಿರುವ ತಮಿಳುನಾಡಿನ ಸ್ನೇಹಿತರಿಗೆ ಸೌರಾಷ್ಟ್ರದ ಜನರು ಕೆಂಪು ಹಾಸಿನ ಸ್ವಾಗತ ನೀಡುತ್ತಿದ್ದಾರೆ ಎಂಬುದನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.ಏಪ್ರಿಲ್ 26ರಂದು ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿಯವರು
April 25th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ಬೆಳಿಗ್ಗೆ 10:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಸೌರಾಷ್ಟ್ರ ತಮಿಳು ಸಂಗಮದ ವೀಡಿಯೊವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ
April 18th, 10:35 am
ಸೌರಾಷ್ಟ್ರ ತಮಿಳು ಸಂಗಮದ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.ಸೌರಾಷ್ಟ್ರ ತಮಿಳು ಸಂಗಮದಲ್ಲಿ ಭಾಗವಹಿಸಿದವರಿಗೆ ಶುಭ ಕೋರಿದ ಪ್ರಧಾನಮಂತ್ರಿ
April 17th, 10:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸೌರಾಷ್ಟ್ರ ತಮಿಳು ಸಂಗಮದಲ್ಲಿ ಪಾಲ್ಗೊಂಡ ಜನತೆಗೆ ಶುಭ ಕೋರಿದ್ದಾರೆ.ಸೌರಾಷ್ಟ್ರ ತಮಿಳು ಸಂಗಮವು ಅತ್ಯಂತ ಧನಾತ್ಮಕ ವಾತಾವರಣವನ್ನು ಸೃಷ್ಟಿಸಿದೆ: ಪ್ರಧಾನಮಂತ್ರಿ
April 15th, 10:09 am
ಮಧುರೈನಿಂದ ಎಸ್.ಟಿ. ಸಂಗಮಂಗೆ ಮೊದಲ ತಂಡವನ್ನು ಕರೆದೊಯ್ಯಲು ಮಧುರೈನಿಂದ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದ್ದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಎಸ್ಟಿ ಸಂಗಮಂ ಗುಜರಾತ್ ಮತ್ತು ತಮಿಳುನಾಡು ನಡುವೆ ಶತಮಾನಗಳ ಹಳೆಯ ಬಾಂಧವ್ಯ ಬಲವರ್ಧನೆಗೊಳಿಸುತ್ತದೆ: ಪ್ರಧಾನಮಂತ್ರಿ
March 26th, 10:49 am
ಸೌರಾಷ್ಟ್ರಮತ್ತು ತಮಿಳುನಾಡು ಸಂಗಮಂ (ಎಸ್ಟಿ ಸಂಗಮಂ) ಗುಜರಾತ್ ಮತ್ತು ತಮಿಳುನಾಡು ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯ ಬಲವರ್ಧನೆಗೊಳಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.