ಎಸ್.ಸಿ.ಒ 2022 ರ ಶೃಂಗ ಸಭೆಯಲ್ಲಿ ಮೊದಲ ಬಾರಿಗೆ ವಾರಾಣಸಿಯನ್ನು ಎಸ್.ಸಿ.ಒ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿಯಾಗಿ ನಾಮನಿರ್ದೇಶನ
September 16th, 11:50 pm
ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ 2022 ರ ಸೆಪ್ಟೆಂಬರ್ 16 ರಂದು ನಡೆದ 22 ನೇ ಶಾಂಘೈ ಸಹಕಾರ ಸಂಘಟನೆ [ಎಸ್.ಸಿ.ಒ] ಮಂಡಳಿಯ ಮುಖ್ಯಸ್ಥರ ಸಭೆಯಲ್ಲಿ 2022 – 2023 ರ ಅವಧಿಯಲ್ಲಿ ವಾರಾಣಸಿ ನಗರವನ್ನು ಮೊದಲ ಎಸ್.ಸಿ.ಒ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿ ಎಂದು ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
September 16th, 01:30 pm
ಇಂದು, ಇಡೀ ಜಗತ್ತು ಸಾಂಕ್ರಾಮಿಕ ರೋಗದ ನಂತರ ಆರ್ಥಿಕ ಚೇತರಿಕೆಯ ಸವಾಲುಗಳನ್ನು ಎದುರಿಸುತ್ತಿರುವಾಗ ಎಸ್‌ಸಿಒ ಪಾತ್ರವು ಬಹಳ ಮುಖ್ಯವಾಗಿದೆ. ಎಸ್ ಸಿ ಒ ಸದಸ್ಯ ರಾಷ್ಟ್ರಗಳು ಜಾಗತಿಕ ಜಿಡಿಪಿಯ ಸುಮಾರು 30 ಪ್ರತಿಶತದಷ್ಟು ಕೊಡುಗೆ ನೀಡುತ್ತವೆ ಮತ್ತು ವಿಶ್ವದ ಜನಸಂಖ್ಯೆಯ 40 ಪ್ರತಿಶತದಷ್ಟು ಜನರು ಎಸ್‌ಸಿಒ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಭಾರತವು ಎಸ್‌ಸಿಒ ಸದಸ್ಯರ ನಡುವೆ ಹೆಚ್ಚಿನ ಸಹಕಾರ ಮತ್ತು ಪರಸ್ಪರ ನಂಬಿಕೆಯನ್ನು ಬೆಂಬಲಿಸುತ್ತದೆ. ಉಕ್ರೇನ್‌ನಲ್ಲಿನ ಸಾಂಕ್ರಾಮಿಕ ಮತ್ತು ಬಿಕ್ಕಟ್ಟು ಜಾಗತಿಕ ಪೂರೈಕೆ ಸರಪಳಿಯಲ್ಲಿ ಅನೇಕ ಅಡೆತಡೆಗಳನ್ನು ಉಂಟುಮಾಡಿತು, ಈ ಕಾರಣದಿಂದಾಗಿ ಇಡೀ ಪ್ರಪಂಚವು ಹಿಂದೆಂದೂ ಕಾಣದಂತಹ ಇಂಧನ ಮತ್ತು ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಮ್ಮ ಪ್ರದೇಶದಲ್ಲಿ ವಿಶ್ವಾಸಾರ್ಹ, ಚೇತರಿಸಿಕೊಳ್ಳಬಲ್ಲ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಅಭಿವೃದ್ಧಿಪಡಿಸಲು ಎಸ್ ಸಿ ಒ ಪ್ರಯತ್ನಗಳನ್ನು ಮಾಡಬೇಕು. ಇದಕ್ಕೆ ಉತ್ತಮ ಸಂಪರ್ಕದ ಅಗತ್ಯವಿರುತ್ತದೆ, ಜೊತೆಗೆ ನಾವೆಲ್ಲರೂ ಪರಸ್ಪರ ಸಾರಿಗೆಯ ಸಂಪೂರ್ಣ ಹಕ್ಕುಗಳನ್ನು ನೀಡುವುದು ಸಹ ಮುಖ್ಯವಾಗಿದೆ.ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಶ್ರೀ ಪುಟಿನ್ ಪರಸ್ಪರ ಶುಭಾಶಯ ವಿನಿಮಯ.
January 07th, 06:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ರಶ್ಯಾ ಅಧ್ಯಕ್ಷ ಶ್ರೀ ವ್ಲಾದಮೀರ್ ಪುಟಿನ್ ಅವರು ಇಂದು ದೂರವಾಣಿ ಸಂಭಾಷಣೆಯ ಮೂಲಕ 2019ನೇ ವರ್ಷದ ಹಾರ್ದಿಕ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಧಾನಮಂತ್ರಿ ಅವರು ರಶ್ಯಾದಲ್ಲಿ ಇಂದು ಕ್ರಿಸ್ಮಸ್ ಆಚರಣೆಯ ಹಿನ್ನೆಲೆಯಲ್ಲಿ ಅಧ್ಯಕ್ಷರಿಗೆ ಮತ್ತು ರಶ್ಯಾದ ಜನತೆಗೆ ಕ್ರಿಸ್ಮಸ್ ಶುಭಾಶಯ ಕೋರಿದರು.ಭಾರತ ಮತ್ತು ರಷ್ಯಾ ನಡುವೆ ಅನೌಪಚಾರಿಕ ಶೃಂಗಸಭೆ
May 21st, 10:10 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡುವೆ ರಷ್ಯಾ ಒಕ್ಕೂಟದ ಸೂಚಿ ಪಟ್ಟಣದಲ್ಲಿ 2018ರ ಮೇ 21ರಂದು ಮೊದಲ ಅನೌಪಚಾರಿಕ ಶೃಂಗಸಭೆ ನಡೆಯಿತು. ಈ ಶೃಂಗಸಭೆ ಉಭಯ ನಾಯಕರ ಸ್ನೇಹ ಸಂಬಂಧ ಗಟ್ಟಿಗೊಳಿಸಲು ಮತ್ತು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಅಲ್ಲದೆ ಭಾರತ ಮತ್ತು ರಷ್ಯಾ ನಡುವಿನ ಉನ್ನತ ಮಟ್ಟದ ರಾಜಕೀಯ ವಿನಿಮಯ ಪರಂಪರೆ ಮುಂದುವರಿಸಲು ಸಹಕಾರಿಯಾಯಿತು.PM Modi holds talks with President Putin of Russia
May 21st, 04:40 pm
Prime Minister Narendra Modi today held talks with President Vladimir Putin of Russia in Sochi.