ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ

July 21st, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ

July 21st, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

July 30th, 11:30 am

'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದ ಪ್ರಧಾನಮಂತ್ರಿ

April 05th, 02:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಲಾವಿದ ಅರುಣ್ ಯೋಗಿರಾಜ್ ಅವರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದರು.