Joint Statement: Official visit of Shri Narendra Modi, Prime Minister of India to Kuwait (December 21-22, 2024)

December 22nd, 07:46 pm

PM Modi paid an official visit to Kuwait, at the invitation of His Highness the Amir of the State of Kuwait, Sheikh Meshal Al-Ahmad Al-Jaber Al-Sabah. During his first visit to the country, PM Modi attended the opening ceremony of the 26th Arabian Gulf Cup as the 'Guest of Honour' and held comprehensive talks to deepen bilateral ties.

PM Modi meets Prime Minister of Kuwait

December 22nd, 06:38 pm

PM Modi held talks with His Highness Sheikh Ahmad Al-Abdullah Al-Ahmad Al-Sabah, PM of the State of Kuwait. The two leaders discussed a roadmap to strengthen the strategic partnership in areas including political, trade, investment, energy, defence, security, health, education, technology, cultural, and people-to-people ties.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಯುಎಇ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವರ ಸ್ವಾಗತ

December 12th, 08:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ - ಯುಎಇ ಯ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವರಾದ ಶೇಖ್ ಅಬ್ದುಲ್ಲಾ ಬಿನ್ ಝಾ಼ಯೆದ್ ಅಲ್ ನಹ್ಯಾನ್ ಅವರನ್ನು ಬರಮಾಡಿಕೊಂಡರು.

ನವೋದಯ ಯೋಜನೆಯ ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ

December 06th, 08:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆಯ (ಕೇಂದ್ರ ವಲಯದ ಯೋಜನೆ) ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ನವೋದಯ ವಿದ್ಯಾಲಯಗಳನ್ನು (ಎನ್‌ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. ಈ 28 ಎನ್‌ ವಿ ಗಳ ಪಟ್ಟಿಯನ್ನು ಅನುಬಂಧದಲ್ಲಿ ಲಗತ್ತಿಸಲಾಗಿದೆ.

ಭಾರತೀಯ ನೌಕಾಪಡೆಯ ವೀರ ಸಿಬ್ಬಂದಿಗೆ ನೌಕಾಪಡೆ ದಿನದಂದು ಪ್ರಧಾನಮಂತ್ರಿ ಶುಭಾಶಯ

December 04th, 10:22 am

ಭಾರತೀಯ ನೌಕಾಪಡೆಯ ವೀರ ಸಿಬ್ಬಂದಿಗೆ ನೌಕಾಪಡೆಯ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ನಮ್ಮ ರಾಷ್ಟ್ರದ ಸುರಕ್ಷತೆ, ಭದ್ರತೆ ಮತ್ತು ಸಮೃದ್ಧಿಯನ್ನು ಖಾತರಿ ಪಡಿಸುವ ಸಿಬ್ಬಂದಿಯ ಬದ್ಧತೆಗೆ ಅವರನ್ನು ಶ್ಲಾಘಿಸಿದ್ದಾರೆ.

ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳ ಅಂಗೀಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ

December 03rd, 08:17 pm

ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ಇಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಮಹತ್ವದ ಶಾಸನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

November 29th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಮಂತ್ರಿಯವರ ಭೇಟಿ

November 21st, 10:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ನವೆಂಬರ್ 20 ರಂದು ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಿ ಡಾ ಕೀತ್ ರೌಲಿ ಅವರನ್ನು ಭೇಟಿಯಾದರು.

ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ

November 20th, 08:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರು ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ 2ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಿದರು. ಪ್ರಥಮ ವಾರ್ಷಿಕ ಶೃಂಗಸಭೆಯನ್ನು 2023ರ ಮಾರ್ಚ್ 10ರಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಅಲ್ಬನೀಸ್ ಅವರ ಭಾರತದ ಭೇಟಿಯ ಸಮಯದಲ್ಲಿ ನಡೆಸಲಾಗಿತ್ತು.

ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 06:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತು

ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)

October 28th, 06:32 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

ಪದಾತಿದಳ ದಿನದ ಅಂಗವಾಗಿ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯಕ್ಕೆ ಪ್ರಧಾನಮಂತ್ರಿ ಅವರಿಂದ ವಂದನೆ

October 27th, 09:07 am

ಪದಾತಿ ದಳ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದಾತಿದಳದ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ

October 11th, 08:15 am

ಭಾರತವು ಆಸಿಯಾನ್‌ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.

19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ

October 11th, 08:10 am

ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.

ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ

September 22nd, 11:51 am

ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.

ಈಶಾನ್ಯ ಭಾಗದಲ್ಲಿ ಜಲವಿದ್ಯುತ್ ಯೋಜನೆಗಳ ಅಭಿವೃದ್ಧಿಗಾಗಿ ಈಶಾನ್ಯ ಪ್ರದೇಶದ ರಾಜ್ಯ ಸರ್ಕಾರಗಳು ಸಮಾನ (ಈಕ್ವಿಟಿ) ಭಾಗವಹಿಸುವಿಕೆಯ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಹಾಯ ನೀಡಲು ಸಂಪುಟ ಅನುಮೋದನೆ

August 28th, 05:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಈಶಾನ್ಯ ಭಾಗದಲ್ಲಿ ಜಲವಿದ್ಯುತ್ ಯೋಜನೆಗಳ ಅಭಿವೃದ್ಧಿಗೆ ತಮ್ಮ ಸಮಾನ(ಈಕ್ವಿಟಿ) ಭಾಗವಹಿಸುವಿಕೆಗಾಗಿ ಎನ್ ಇಆರ್ ನ ರಾಜ್ಯ ಸರ್ಕಾರಗಳಿಗೆ ( ಎನ್ ಇಆರ್), ರಾಜ್ಯ ಘಟಕಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ ನಡುವಿನ ಜಂಟಿ ಉದ್ಯಮ (ಜೆವಿ) ಸಹಯೋಗದ ಮೂಲಕ ಕೇಂದ್ರ ಹಣಕಾಸು ನೆರವು (ಸಿಎಫ್ ಎ) ಒದಗಿಸುವ ಇಂಧನ ಸಚಿವಾಲಯದ ಪ್ರಸ್ತಾವನೆಯನ್ನು ಅನುಮೋದಿಸಿದೆ.

ಬಾಂಗ್ಲಾದೇಶದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ನೊಬೆಲ್‌ ಪುರಸ್ಕೃತ ಪ್ರೊಫೆಸರ್‌ ಮೊಹಮದ್‌ ಯೂನಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

August 08th, 10:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ರಚನೆಯಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಅಭಿನಂದಿಸಿದರು.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.