ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸಲು ನಾಗರಿಕರಿಗೆ ಪ್ರಧಾನ ಮಂತ್ರಿ ಮನವಿ

August 09th, 09:01 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸುಕೊಳ್ಳುವಂತೆ ನಾಗರಿಕರನ್ನು ಕೋರಿದ್ದಾರೆ. ಸ್ವಾತಂತ್ರ್ಯ ದಿನ ಆಚರಿಸಲು ಶ್ರೀ ಮೋದಿ ಅವರು ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಆಂದೋಲನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡಲು ಪ್ರತಿಯೊಬ್ಬರೂ ಅದೇ ರೀತಿ ಮಾಡಬೇಕೆಂದು ಅವರು ತಿಳಿಸಿದ್ದಾರೆ.