ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ

ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ

September 29th, 11:11 am

ಉತ್ತರಾಖಂಡದ ರಾಜ್ಯಪಾಲರಾದ ಶ್ರೀಮತಿ ಬೇಬಿ ರಾಣಿ ಮೌರ್ಯ ಜಿ, ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜಿ, ಡಾ. ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಶ್ರೀ ರತನ್ ಲಾಲ್ ಕಟಾರಿಯಾ ಜಿ ಮತ್ತು ಇತರೆ ಅಧಿಕಾರಿಗಳೇ ಹಾಗೂ ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೇ. ನಾಲ್ಕು ಧಾಮಗಳಿಂದ ಸುತ್ತುವರಿದ ಪವಿತ್ರ ಉತ್ತರಾಖಂಡಕ್ಕೆ ನಾನು ನಮಿಸುತ್ತೇನೆ.

ನಿರ್ಮಲ ಮತ್ತು ನಿರಂತರ ಗಂಗಾ ನದಿಗಾಗಿ ಉತ್ತರಾಖಂಡದಲ್ಲಿ ಆರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಚಾಲನೆ

ನಿರ್ಮಲ ಮತ್ತು ನಿರಂತರ ಗಂಗಾ ನದಿಗಾಗಿ ಉತ್ತರಾಖಂಡದಲ್ಲಿ ಆರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಚಾಲನೆ

September 29th, 11:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರಾಖಂಡದಲ್ಲಿ ನಮಾಮಿ ಗಂಗೆ ಅಭಿಯಾನದ ಅಡಿಯಲ್ಲಿ 6 ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.

ಸರಿಯಾದ ಸಂಪರ್ಕವು ಹೆಚ್ಚಿನ ಅಭಿವೃದ್ಧಿಗೆ ಕಾರಣವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

ಸರಿಯಾದ ಸಂಪರ್ಕವು ಹೆಚ್ಚಿನ ಅಭಿವೃದ್ಧಿಗೆ ಕಾರಣವಾಗಲಿದೆ: ಪ್ರಧಾನಿ ನರೇಂದ್ರ ಮೋದಿ

October 14th, 02:17 pm

ನಮಾಮಿ ಗಾಂಗೆ ಕಾರ್ಯಕ್ರಮದಡಿಯಲ್ಲಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮೊಕಮಾದಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಬಿಹಾರದ ಮೊಕಾಮಾದಲ್ಲಿ 3,769 ಕೋಟಿ ರೂಪಾಯಿ ಮೌಲ್ಯದ ರಸ್ತೆ ಮತ್ತು ಒಳಚರಂಡಿ ಯೋಜನೆಗಳನ್ನು ಅವರು ಪ್ರಾರಂಭಿಸಿದರು.

ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಮೋಕಾಮಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ

October 14th, 02:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬಿಹಾರದ ಮೋಕಾಮಾದಲ್ಲಿ ನಮಾಮಿ ಗಂಗೆ ಕಾರ್ಯಕ್ರಮದ ಅಡಿಯಲ್ಲಿ ನಾಲ್ಕು ಒಳಚರಂಡಿ; ಮತ್ತು ನಾಲ್ಕು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳ ಒಟ್ಟು ಅಂದಾಜು 3700 ಕೋಟಿ ರೂಪಾಯಿ ಆಗಿದೆ. ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಶ್ರೇಷ್ಠ ಕವಿ, ರಾಮಧಾರಿ ಸಿಂಗ್ ದಿನಕರ್ ಅವರು ನಿಕಟ ಸಂಪರ್ಕ ಹೊಂದಿದ್ದ ನಾಡಿಗೆ ಆಗಮಿಸಿರುವುದಕ್ಕೆ ತಮಗೆ ಅತೀವ ಸಂತಸವಾಗಿದೆ ಎಂದರು. ಬಿಹಾರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡೂ ಏನೇನು ಸಾಧ್ಯವೋ ಅದೆಲ್ಲವನ್ನೂ ಮಾಡಲಿವೆ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡಿದರು.

ನಾಳೆ ಬಿಹಾರಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ

October 13th, 04:29 pm

ಅಕ್ಟೋಬರ್ 14, 2017 ರಂದು ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.