Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ
September 24th, 11:30 am
ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.