ಕುವೈತ್ ಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ (ಡಿಸೆಂಬರ್ 21-22, 2024): ಜಂಟಿ ಹೇಳಿಕೆ
December 22nd, 07:46 pm
ಕುವೈತ್ ದೇಶದ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21-22 ಡಿಸೆಂಬರ್ 2024 ರಂದು ಕುವೈಟ್ ಗೆ ಅಧಿಕೃತ ಭೇಟಿ ನೀಡಿದರು. ಕುವೈತ್ ಗೆ ಅವರ ಮೊದಲ ಭೇಟಿಯಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಡಿಸೆಂಬರ್ 2024 ರಂದು ಅಮೀರ್ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಗೌರವಾನ್ವಿತ ಅತಿಥಿಯಾಗಿ ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ
December 22nd, 05:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು.ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
December 22nd, 04:37 pm
ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕುವೈತ್ ನ ಅಮೀರ್ ಅವರ ಗೌರವಾನ್ವಿತ ಅತಿಥಿಯಾಗಿ ಅರೇಬಿಯನ್ ಗಲ್ಫ್ ಕಪ್ ನಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
December 21st, 10:24 pm
ಕುವೈತ್ ನ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದಲ್ಲಿ ‘ಗೌರವ ಅತಿಥಿ’ಯಾಗಿ ಭಾಗವಹಿಸಿದರು. ಘನತೆವೆತ್ತ ಕುವೈತ್ ದೊರೆ (ಅಮೀರ್), ಘನತೆವೆತ್ತ ಕುವೈತ್ ಯುವರಾಜ, ಮತ್ತು ಘನತೆವೆತ್ತ ಕುವೈತ್ ಪ್ರಧಾನಮಂತ್ರಿಯವರೊಂದಿಗೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಕುವೈತ್ ನ ಉನ್ನತ ನಾಯಕತ್ವದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅನೌಪಚಾರಿಕ ಸಂವಾದಕ್ಕೆ ಕೂಡಾ ಈ ಕಾರ್ಯಕ್ರಮವು ಅವಕಾಶವನ್ನು ಒದಗಿಸಿಕೊಟ್ಟಿತು.ಕುವೈತ್‌ಗೆ ಆಗಮಿಸಿದ ಪ್ರಧಾನಿ ಮೋದಿ
December 21st, 03:39 pm
ಕುವೈತ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಅಮೀರ್, ಕ್ರೌನ್ ಪ್ರಿನ್ಸ್ ಮತ್ತು ಕುವೈತ್ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದಾರೆ. ಅವರು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
December 21st, 09:21 am
ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ.2024 ರ ಡಿಸೆಂಬರ್ 21-22 ರವರೆಗೆ ಪ್ರಧಾನಿ ಮೋದಿ ಕುವೈತ್‌ಗೆ ಭೇಟಿ ನೀಡಲಿದ್ದಾರೆ
December 19th, 11:45 am
ಕುವೈತ್ ರಾಜ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21-22 ಡಿಸೆಂಬರ್ 2024 ರಂದು ಕುವೈತ್‌ಗೆ ಭೇಟಿ ನೀಡಲಿದ್ದಾರೆ . 43 ವರ್ಷಗಳಲ್ಲಿ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.ಕುವೈತ್ ನ ನೂತನ ಎಮಿರ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
December 20th, 10:22 pm
ಕುವೈತ್ ನ ನೂತನ ಎಮಿರ್ ಆಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಶ್ರೀ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.