ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.ಶೂಟಿಂಗ್ ನಲ್ಲಿ ಚಿನ್ನ ಗೆದ್ದ 10 ಮೀಟರ್ ಏರ್ ಪಿಸ್ತೂಲ್ ಪುರುಷರ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 28th, 11:05 am
ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದ 10 ಮೀಟರ್ ಏರ್ ಪಿಸ್ತೂಲ್ ಪುರುಷರ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶೂಟರ್ ಗಳಾದ ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ತಮ್ಮ ನಿಖರತೆ ಮತ್ತು ಕೌಶಲ್ಯದಿಂದ ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರಿಗೆ ಪ್ರಧಾನಿ ಅಭಿನಂದನೆ
September 27th, 09:30 pm
ಏಷ್ಯನ್ ಕ್ರೀಡಾಕೂಟದಲ್ಲಿ 50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಸಿಫ್ಟ್ ಕೌರ್ ಸಮ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.50 ಮೀಟರ್ ರೈಫಲ್ 3 ಪೊಸಿಷನ್ಸ್ ಮಹಿಳೆಯರ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಆಶಿ ಚೌಕ್ಸಿಯವರಿಗೆ ಪ್ರಧಾನಿ ಅಭಿನಂದನೆ
September 27th, 09:29 pm
ಏಷ್ಯನ್ ಕ್ರೀಡಾಕೂಟದಲ್ಲಿ 50 ಮೀ ರೈಫಲ್ 3 ಸ್ಥಾನಗಳ ಮಹಿಳೆಯರ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಆಶಿ ಚೌಕ್ಸೆ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 27th, 09:25 pm
ಏಷ್ಯನ್ ಗೇಮ್ಸ್ ನ ಪುರುಷರ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅನಂತ್ ಜೀತ್ ಸಿಂಗ್ ನರುಕಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟ ಶೂಟರ್ ಗಳನ್ನು ಶ್ಲಾಘಿಸಿದ ಪ್ರಧಾನಿ
September 25th, 02:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ 10 ಮೀಟರ್ ಏರ್ ರೈಫಲ್ ಫುರುಷರ ತಂಡವನ್ನು ಅಭಿನಂದಿಸಿದ್ದಾರೆ.ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ನಲ್ಲಿ ಭಾರತೀಯ ಶೂಟರ್‌ಗಳ ಪ್ರದರ್ಶನಕ್ಕಾಗಿ ಪ್ರಧಾನಮಂತ್ರಿಯವರಿಂದ ಅಭಿನಂದನೆ
June 10th, 04:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ 2023 ರಲ್ಲಿ ಭಾರತೀಯ ಶೂಟರ್ ಗಳ ಸಾಧನೆಗಾಗಿ ಅಭಿನಂದಿಸಿದ್ದಾರೆ. ಇದರಲ್ಲಿ 15 ಪದಕಗಳೊಂದಿಗೆ ಭಾರತವು ಪದಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರಿಗೆ ಪ್ರಧಾನಿ ಅಭಿನಂದನೆ
June 08th, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ದಾಖಲೆಯ ಅಂಕಗಳೊಂದಿಗೆ ಚಿನ್ನದ ಪದಕ ಗದ್ದು ಸಾಧನೆ ಮಾಡಿದ್ದಕ್ಕಾಗಿ ಭಾರತದ ಶೂಟರ್ ಅವನಿ ಲೇಖರ ಅವರನ್ನು ಅಭಿನಂದಿಸಿದ್ದಾರೆ.ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ಭಾರತದ ಶೂಟರ್ ಶ್ರೀಹರ್ಷ ದೇವರಡ್ಡಿ ಅವರಿಗೆ ಪ್ರಧಾನಿ ಅಭಿನಂದನೆ
June 08th, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಶೂಟರ್ ಶ್ರೀಹರ್ಷ ದೇವರಡ್ಡಿ ಅವರನ್ನು ಅಭಿನಂದಿಸಿದ್ದಾರೆ.ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ
September 09th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!
September 09th, 10:00 am
2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶೂಟರ್ ಮನೀಶ್ ನರ್ವಾಲ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿ
September 04th, 10:58 am
ಟೋಕಿಯಾದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಗೆದ್ದ ಶೂಟರ್ ಮನೀಶ್ ನರ್ವಾಲ್ ಅವರನ್ನು ಪ್ರಧಾನ ಮತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಗರಾಜ್ ಅಧಾನಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ
September 04th, 10:54 am
ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಗರಾಜ್ ಅಧಾನ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.