ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ

August 20th, 11:01 am

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.

ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ

August 20th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 20 ರಂದು ಸೋಮನಾಥದಲ್ಲಿ ಪ್ರಧಾನ ಮಂತ್ರಿ ಅವರು ಬಹು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ

August 18th, 05:57 pm

ಪ್ರಧಾನ ಮಂತ್ರಿ ಶೀ ನರೇಂದ್ರ ಮೋದಿ ಅವರು ಆಗಸ್ಟ್‌ 20 ರಂದು 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೋಮನಾಥದಲ್ಲಿ ಬಹು ಯೋಜನೆಗಳನ್ನು ಕಾರ್ಯಾರಂಭಗೊಳಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೋಮನಾಥ ವಾಯುವಿಹಾರ, ಸೋಮನಾಥ ವಸ್ತು ಪ್ರದರ್ಶನ ಕೇಂದ್ರ ಮತ್ತು ದೇವಾಲಯದ ಹಳೆಯ ಮರುನಿರ್ಮಾಣ ಮಾಡಲಾದ ಸುತ್ತು ಪೌಳಿಯನ್ನು ಪ್ರಧಾನ ಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಪ್ರಧಾನ ಮಂತ್ರಿ ಅವರು ಶ್ರೀ ಪಾರ್ವತಿ ದೇವಾಲಯಕ್ಕೆ ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸುವರು.