ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯಂದು ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಅವತರಣಿಕೆ
July 25th, 04:31 pm
ದಿವಂಗತ ಹರ್ಮೋಹನ್ ಸಿಂಗ್ ಯಾದವ್ ಅವರ ಪುಣ್ಯತಿಥಿಯಂದು ಅವರಿಗೆ ನಾನು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಈ ಕಾರ್ಯಕ್ರಮಕ್ಕೆ ನನ್ನನ್ನು ತುಂಬಾ ಪ್ರೀತಿಯಿಂದ ಆಹ್ವಾನಿಸಿದ್ದಕ್ಕಾಗಿ ನಾನು ಸುಖರಾಮ್ ಜೀ ಅವರಿಗೆ ಆಭಾರಿಯಾಗಿದ್ದೇನೆ. ಇದಲ್ಲದೆ, ನಿಮ್ಮೆಲ್ಲರ ನಡುವೆ ಇರುವುದಕ್ಕಾಗಿ ಈ ಕಾರ್ಯಕ್ರಮಕ್ಕಾಗಿ ಕಾನ್ಪುರಕ್ಕೆ ಬರಬೇಕೆಂಬುದು ನನ್ನ ಬಯಕೆಯಾಗಿತ್ತು. ಆದರೆ ಇಂದು, ನಮ್ಮ ದೇಶದ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ಒಂದು ದೊಡ್ಡ ಕಾರ್ಯಕ್ರಮ ನಡೆಯುವ ಸಂದರ್ಭವಾಗಿದೆ. ಇಂದು ನಮ್ಮ ಹೊಸ ರಾಷ್ಟ್ರಪತಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮಾಜದ ಮಹಿಳಾ ರಾಷ್ಟ್ರಪತಿ ಅವರು ದೇಶದ ನಾಯಕತ್ವವನ್ನು ವಹಿಸುತ್ತಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವದ ಶಕ್ತಿ ಮತ್ತು ಒಳಗೊಳ್ಳುವಿಕೆಯ ಜೀವಂತ ಉದಾಹರಣೆಯಾಗಿದೆ. ಈ ಸಂದರ್ಭದಲ್ಲಿ ಇಂದು ದಿಲ್ಲಿಯಲ್ಲಿ ವಿವಿಧ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾಂವಿಧಾನಿಕ ಬಾಧ್ಯತೆಗಳಿಗಾಗಿ ನಾನು ದೆಹಲಿಯಲ್ಲಿ ಇರುವುದು ಅನಿವಾರ್ಯ ಮತ್ತು ಅಗತ್ಯವೂ ಆಗಿದೆ. ಆದ್ದರಿಂದ, ನಾನು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಿಮ್ಮೊಂದಿಗೆ ಸೇರುತ್ತಿದ್ದೇನೆ.ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
July 25th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಸಂಸದ, ವಿಧಾನ ಪರಿಷತ್ ಸದಸ್ಯ, ಶಾಸಕಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಹಾಗೂ ಯಾದವ ಸಮುದಾಯದ ಅತ್ಯಂತ ಪ್ರಭಾವೀ ವ್ಯಕ್ತಿ ಮತ್ತು ನಾಯಕರಾದ ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು.ಜುಲೈ 25 ರಂದು ದಿವಂಗತ ಶ್ರೀ ಹರ್ ಮೋಹನ್ ಸಿಂಗ್ ಯಾದವ್ ಅವರ 10 ನೇ ಪುಣ್ಯತಿಥಿಯ ಅಂಗವಾಗಿ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ
July 24th, 02:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜುಲೈ 25ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದಿವಂಗತ ಶ್ರೀ ಹರ್ ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ.