ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ
October 26th, 05:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದರು.ಅಕ್ಟೋಬರ್ 26ರಂದು ಪ್ರಧಾನಿ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ
October 25th, 11:21 am
ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಹ್ಮದ್‌ನಗರ ಜಿಲ್ಲೆಯ ಶಿರಡಿ ತಲುಪಲಿರುವ ಪ್ರಧಾನಿ, ಅಲ್ಲಿ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದ ದರ್ಶನ ಮಾಡಿ, ಪೂಜೆ ನೆರವೇರಿಸಲಿದ್ದಾರೆ. ದೇವಸ್ಥಾನದಲ್ಲಿ ನೂತನ ದರ್ಶನ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಅವರು ನೀಲವಾಂಡೆ ಅಣೆಕಟ್ಟಿಗೆ ಜಲಪೂಜೆ ನೆರವೇರಿಸಲಿದ್ದಾರೆ. ಜತೆಗೆ, ಅಣೆಕಟ್ಟಿನ ಕಾಲುವೆ ಜಾಲವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3.15ರ ಸುಮಾರಿಗೆ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ಅವರು ಆರೋಗ್ಯ, ರೈಲು, ರಸ್ತೆ ಮತ್ತು ತೈಲ, ಅನಿಲ ಸೇರಿದಂತೆ ಸುಮಾರು 7,500 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.