ಜಾರ್ಖಂಡ್ ನ ಸಿಂದ್ರಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
March 01st, 11:30 am
ಜಾರ್ಖಂಡ್ ನ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಚಂಪೈ ಸೊರೆನ್ ಜೀ, ಗೌರವಾನ್ವಿತ ಕ್ಯಾಬಿನೆಟ್ ಸಹೋದ್ಯೋಗಿ ಅರ್ಜುನ್ ಮುಂಡಾ ಜೀ, ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಇತರ ಗಣ್ಯರು ಮತ್ತು ಜಾರ್ಖಂಡ್ ನ ಪ್ರೀತಿಯ ಸಹೋದರ ಸಹೋದರಿಯರೇ, ಜೋಹರ್ (ನಮಸ್ಕಾರ)! ಇಂದು, ಜಾರ್ಖಂಡ್ 35 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಉಪಕ್ರಮಗಳಿಗಾಗಿ ನಾನು ನನ್ನ ರೈತ ಸಹೋದರರು, ಬುಡಕಟ್ಟು ಸಮುದಾಯದ ಸದಸ್ಯರು ಮತ್ತು ಜಾರ್ಖಂಡ್ ಜನರನ್ನು ಅಭಿನಂದಿಸುತ್ತೇನೆ.ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 01st, 11:04 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಸಿಂದ್ರಿ, ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳನ್ನು ಒಳಗೊಂಡಿವೆ. ಶ್ರೀ ಮೋದಿ ಅವರು ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್ ಲಿಮಿಟೆಡ್ (HURL) ಸಿಂಡ್ರಿ ರಸಗೊಬ್ಬರ ಸ್ಥಾವರ ಮಾದರಿಯನ್ನು ಪರಿಶೀಲಿಸಿದರು ಮತ್ತು ಸಿಂದ್ರಿ ಪ್ಲಾಂಟ್ ಕಂಟ್ರೋಲ್ ರೂಮ್ ವೀಕ್ಷಿಸಿದರು.