ಶಿವಗಿರಿ ತೀರ್ಥಯಾತ್ರೆಯ 90 ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 26th, 10:31 am

ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ ಅಧ್ಯಕ್ಷ ಸ್ವಾಮಿ ಸಚ್ಚಿದಾನಂದ ಜೀ, ಪ್ರಧಾನ ಕಾರ್ಯದರ್ಶಿ ಸ್ವಾಮಿ ರಿತಂಭರಾನಂದ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು ಮತ್ತು ಕೇರಳದ ಮಣ್ಣಿನ ಮಕ್ಕಳು, ಶ್ರೀ ವಿ. ಮುರಳೀಧರನ್ ಜಿ ಮತ್ತು ರಾಜೀವ್ ಚಂದ್ರಶೇಖರ್ ಜೀ, ಶ್ರೀ ನಾರಾಯಣ ಗುರು ಧರ್ಮ ಸಂಘಂ ಟ್ರಸ್ಟ್ ನ ಅಧಿಕಾರಿಗಳು, ದೇಶ ವಿದೇಶಗಳ ಎಲ್ಲಾ ಭಕ್ತರು, ಮಹಿಳೆಯರು ಮತ್ತು ಮಹನೀಯರೇ,

ಶಿವಗಿರಿಯ 90 ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಒಂದು ವರ್ಷದ ಜಂಟಿ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ

April 26th, 10:30 am

ನಂ 7, ಲೋಕ ಕಲ್ಯಾಣ ಮಾರ್ಗದಲ್ಲಿ ನಡೆದ ಶಿವಗಿರಿಯ 90 ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಒಂದು ವರ್ಷದ ಜಂಟಿ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಇಡೀ ವರ್ಷದ ಜಂಟಿ ಆಚರಣೆಗೆ ಅವರು ಚಾಲನೆ ನೀಡಿದರು. ಶಿವಗಿರಿ ತೀರ್ಥಯಾತ್ರೆ ಮತ್ತು ಬ್ರಹ್ಮ ವಿದ್ಯಾಲಯವನ್ನು ಶ್ರೇಷ್ಠ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಆಶಿರ್ವಾದ ಮತ್ತು ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಈ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಗಿರಿ ಮಠದ ಆಧ್ಯಾತ್ಮಿಕ ಮುಖಂಡರು ಮತ್ತು ಭಕ್ತರು, ಕೇಂದ್ರ ಸಚಿವರಾದ ಶ್ರೀ ರಾಜೀವ್ ಚಂದ್ರಶೇಖರ್ ಮತ್ತು ಶ್ರೀ ವಿ. ಮುರಳೀಧರನ್ ಅವರು ಪಾಲ್ಗೊಂಡರು.

ಶಿವಗಿರಿ ತೀರ್ಥಯಾತ್ರೆಯ 90 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ಮೋದಿಯವರಿಗಾಗಿ ನಿಮ್ಮ ಒಳಹರಿವನ್ನು ಹಂಚಿಕೊಳ್ಳಿ

April 25th, 01:13 pm

ಶಿವಗಿರಿ ಯಾತ್ರೆಯ 90ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಶಿವಗಿರಿ ಮಠವು ಶಿವಗಿರಿ ತೀರ್ಥಯಾತ್ರೆಯ 'ನವತಿ' ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಒಂದು ವರ್ಷದ ಕಾರ್ಯಕ್ರಮವನ್ನು ಏಪ್ರಿಲ್, 2022 ರಿಂದ ಜಂಟಿಯಾಗಿ ಆಚರಿಸುತ್ತದೆ.