Our government's intentions, policies and decisions are empowering rural India with new energy: PM
January 04th, 11:15 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.ಕುವೈತ್ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 13th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.ನೈಜೀರಿಯಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅಧಿಕೃತ ಮಾತುಕತೆ
November 17th, 06:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 17-18 ನವೆಂಬರ್ 2024 ರಿಂದ ನೈಜೀರಿಯಾಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ನೈಜೀರಿಯಾದ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರೊಂದಿಗೆ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಇಂದು ಅಬುಜಾದಲ್ಲಿ ರಾಜ್ಯ ಭವನಕ್ಕೆ ಆಗಮಿಸಿದ ಪ್ರಧಾನಿಯವರಿಗೆ 21 ಗನ್ ಸೆಲ್ಯೂಟ್ನೊಂದಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು.