ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ
November 20th, 07:52 am
G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ
November 12th, 07:44 pm
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 16-21 ರವರೆಗೆ ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾಗೆ ಅಧಿಕೃತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ನೈಜೀರಿಯಾದಲ್ಲಿ, ಅವರು ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಉನ್ನತ ಮಟ್ಟದ ಚರ್ಚೆಗಳಲ್ಲಿ ತೊಡಗುತ್ತಾರೆ. ಬ್ರೆಜಿಲ್‌ನಲ್ಲಿ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಗಯಾನಾದಲ್ಲಿ, ಪ್ರಧಾನ ಮಂತ್ರಿಗಳು ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಾರೆ, ಸಂಸತ್ತನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಕ್ಯಾರಿಕಾಮ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ, ಕೆರಿಬಿಯನ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಗಾಢಗೊಳಿಸುವ ಭಾರತದ ಬದ್ಧತೆಯನ್ನು ಒತ್ತಿಹೇಳಿದ್ದಾರೆ.ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಮಾಫೋಸಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
June 17th, 05:11 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಾಮಾಫೋಸಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲುಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಜಲಿ ಅಸ್ಸೌಮಾನಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
January 29th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಝಲಿ ಅಸ್ಸೌಮಾನಿ ಅವರನ್ನು ಅಭಿನಂದಿಸಿದರು.ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ
November 05th, 10:22 pm
ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಕೊಮೊರೊಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರು ಸಭೆ ನಡೆಸಿದರು
September 10th, 05:20 pm
ದೆಹಲಿಯಲ್ಲಿ 10 ಸೆಪ್ಟೆಂಬರ್ 2023 ರಂದು ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೊಮೊರೊಸ್ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಜಲಿ ಅಸ್ಸೋಮಾನಿ ಅವರ ಜೊತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆ ನಡೆಸಿದರುಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ-ಅಮೇರಿಕ ಜಂಟಿ ಹೇಳಿಕೆ
September 09th, 09:11 pm
ನಾವು ಹಂಚಿಕೊಳ್ಳುವ ಪ್ರಪಂಚಕ್ಕೆ ಪರಿಹಾರಗಳನ್ನು ನೀಡಲು ಅಂತಾರರಾಷ್ಟ್ರೀಯ ಆರ್ಥಿಕ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಿರುವ ಜಿ 20 ಯಲ್ಲಿ ನಮ್ಮ ಸಹಭಾಗಿತ್ವದ ಬದ್ಧತೆಯನ್ನು ಪುನರುಚ್ಚರಿಸಲು ನಾವು, ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮತ್ತು ಅಮೇರಿಕದ ನಾಯಕರು, ನವದೆಹಲಿಯಲ್ಲಿ ಜಿ 20 ನಾಯಕರ ಶೃಂಗಸಭೆಯ ವೇದಿಕೆಯಲ್ಲಿ ಭೇಟಿಯಾಗಿದ್ದೇವೆ.ಬೆಂಗಳೂರಿನ ಇಸ್ರೋ ಕೇಂದ್ರದಿಂದ ಮರಳಿದ ನಂತರ ದೆಹಲಿಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಆಂಗ್ಲ ಅನುವಾದ
August 26th, 01:18 pm
ಇಂದು ಬೆಳಿಗ್ಗೆ ನಾವು ಬೆಂಗಳೂರಿಗೆ ಭೇಟಿ ನೀಡಿದ್ದೆ. ನಾನು ಬೆಳಿಗ್ಗೆಯೇ ಇಲ್ಲಿಗೆ ಆಗಮಿಸಿದೆ ಮತ್ತು ದೇಶಕ್ಕಾಗಿ ಅದ್ಭುತ ಸಾದನೆಯನ್ನು ಮಾಡಿದ ವಿಜ್ಞಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಹಾಗಾಗಿ ನಾನು ಇಂದು ಬೆಳಗಿನ ಜಾವವೇ ಬೆಂಗಳೂರಿಗೆ ಹೋಗಿದ್ದೆ. ಆದರೆ ಸುರ್ಯೋದಯಕ್ಕೂ ಮುನ್ನವೇ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಜನರು ಚಂದ್ರಯಾನದ ಯಶಸ್ಸುನ್ನು ಸಂಭ್ರಮಿಸಿದ ರೀತಿ ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿತ್ತು. ಮತ್ತು ಈಗ ಸೂರ್ಯನು ತೀವ್ರವಾದ ಬಿಸಿಲಿನಲ್ಲಿ ಸುಡುತ್ತಿದ್ದಾನೆ, ಅದು ಚರ್ಮವನ್ನೂ ಸಹ ಸುಡುತ್ತದೆ.ಇಲ್ಲಿಗೆ ಬಂದಿರುವ ನಿಮ್ಮೊಂದಿಗೆ ಈ ತೀವ್ರವಾದ ಬಿಸಿಲಿನಲ್ಲಿ ಚಂದ್ರಯಾನದ ಯಶಸ್ಸಿನ ಸಂತೋಷದಲ್ಲಿ ಪಾಲ್ಗೊಳ್ಳಲು ಮತ್ತು ಆಚರಣೆಯ ಆನಂದ ಹಂಚಿಕೊಳ್ಳುವ ಸೌಭಾಗ್ಯ ನನಗೆ ದೊರೆತಿದೆ. ಅದಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ.ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿಯವರಿಗೆ ನಾಗರಿಕರಿಂದ ಭವ್ಯ ಸ್ವಾಗತ
August 26th, 12:33 pm
ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ʻಚಂದ್ರಯಾನ -3ʼ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದ ಹಿನ್ನೆಲೆಯಲ್ಲಿ ಇಸ್ರೋ ತಂಡದೊಂದಿಗೆ ಸಂವಹನ ನಡೆಸಿದ ನಂತರ ಪ್ರಧಾನಿ ಮೋದಿ ಇಂದು ಬೆಂಗಳೂರಿನಿಂದ ದೆಹಲಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ನ 4 ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ತೆರಳಿದ್ದರು. ಶ್ರೀ ಜೆ.ಪಿ. ನಡ್ಡಾ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು. ಪ್ರಧಾನಿಯವರ ವಿದೇಶಿ ಭೇಟಿಯ ಯಶಸ್ಸಿಗಾಗಿ ಹಾಗೂ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಗಾಗಿ ಪ್ರಧಾನ ಮಂತ್ರಿಗಳನ್ನು ನಡ್ಡಾ ಅವರು ಸನ್ಮಾನಿಸಿದರು.ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಫಲಪ್ರದ ಪ್ರವಾಸದ ನಂತರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ
August 26th, 10:08 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 4 ದಿನಗಳ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಫಲಪ್ರದ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ, ನಂತರ ಗ್ರೀಸ್‌ಗೆ ಭೇಟಿ ನೀಡಿದರು. ಪ್ರಧಾನ ಮಂತ್ರಿ ಅವರು ವಿವಿಧ ದ್ವಿಪಕ್ಷೀಯ ಸಭೆಗಳನ್ನು ಮತ್ತು ಸ್ಥಳೀಯ ಚಿಂತಕರ ಗುಂಪಿನೊಂದಿಗೆ ಸಭೆಗಳನ್ನು ನಡೆಸಿದರು. ಮೋದಿ ಅವರು ಎರಡೂ ದೇಶಗಳಲ್ಲಿ ಇರುವ ರೋಮಾಂಚಕ ಭಾರತೀಯ ಸಮುದಾಯವನ್ನು ಭೇಟಿ ಮಾಡಿದರು. ಮೂಲಕ ಚಂದ್ರಯಾನ-3 ಮೂನ್ ಲ್ಯಾಂಡರ್ ಲ್ಯಾಂಡಿಂಗ್ ಅನ್ನು ವೀಡಿಯೊ ಕಾನ್ಫರೆನ್ಸ್ ವೀಕ್ಷಿಸಿದ್ದ ಪ್ರಧಾನಿ ಅವರು, ಇಂದು ಇಸ್ರೋ ತಂಡದೊಂದಿಗೆ ಸಂವಾದ ನಡೆಸಲು ಬೆಂಗಳೂರಿಗೆ ಬಂದಿಳಿದರು.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ರಾಷ್ಟ್ರಗಳಿಗೆ ಭೇಟಿ ನೀಡಿ ಭಾರತಕ್ಕೆ ಹಿಂದಿರುಗಿದ ತಕ್ಷಣ, ಆಗಸ್ಟ್ 26 ರಂದು ಬೆಂಗಳೂರಿನಲ್ಲಿ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ.
August 25th, 08:10 pm
ಆಗಸ್ಟ್ 26 , 2೦23 ರಂದು ಬೆಳಿಗ್ಗೆ 7:15 ರ ಸುಮಾರಿಗೆ ಬೆಂಗಳೂರಿನಲ್ಲಿ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐ.ಎಸ್.ಟಿ.ಆರ್.ಎ.ಸಿ) ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ ನಂತರ ತಕ್ಷಣವೇ ಬೆಂಗಳೂರು ತಲುಪಲಿದ್ದಾರೆ.ಮೊಜಾಂಬಿಕ್ ಗಣರಾಜ್ಯ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಮಾತುಕತೆ
August 24th, 11:56 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊಜಾಂಬಿಕ್ ಗಣರಾಜ್ಯದ ಅಧ್ಯಕ್ಷ ಫಿಲಿಪ್ ಜಸಿಂಟೊ ನ್ಯುಸಿ ಅವರನ್ನು ನಿನ್ನೆ ಆಗಸ್ಟ್ 24ರಂದು ಜೋಹಾನ್ಸ್‌ಬರ್ಗ್‌ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯ ಕೊನೆಯಲ್ಲಿ ಭೇಟಿ ಮಾಡಿದರು.ದಕ್ಷಿಣ ಆಫ್ರಿಕಾದ ಪ್ರಸಿದ್ಧ ತಳಿಶಾಸ್ತ್ರಜ್ಞ ಮತ್ತು ಅಕಾಡೆಮಿ ಆಫ್ ಆಫ್ ಸೈನ್ಸ್ ನ ಸಿಇಒ ಡಾ. ಹಿಮ್ಲಾ ಸೂಡ್ಯಾಲ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
August 24th, 11:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣಾ ಆಫ್ರಿಕಾದ ಪ್ರಸಿದ್ಧ ತಳಿಶಾಸ್ತ್ರಜ್ಞ ಮತ್ತು ಅಕಾಡೆಮಿ ಆಫ್ ಆಫ್ ಸೈನ್ಸ್ ನ ಸಿಇಒ ಡಾ. ಹಿಮ್ಲಾ ಸೂಡ್ಯಾಲ್ ಅವರನ್ನು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ 2023 ಆಗಸ್ಟ್ 24 ರಂದು ಭೇಟಿ ಮಾಡಿದರು.ಖ್ಯಾತ ರಾಕೆಟ್ ವಿಜ್ಞಾನಿ ಮತ್ತು ಗ್ಯಾಲಕ್ಟಿಕ್ ಎನರ್ಜಿ ವೆಂಚರ್ಸ್ ನ ಸಂಸ್ಥಾಪಕ ಶ್ರೀ ಸಿಯಾಬುಲೆಲಾ ಕ್ಸುಝಾ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
August 24th, 11:32 pm
ಖ್ಯಾತ ರಾಕೆಟ್ ವಿಜ್ಞಾನಿ ಮತ್ತು ಗ್ಯಾಲಕ್ಟಿಕ್ ಎನರ್ಜಿ ವೆಂಚರ್ಸ್ ನ ಸಂಸ್ಥಾಪಕರಾದ ಶ್ರೀ ಸಿಯಾಬುಲೆಲಾ ಕ್ಸುಝಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಆಗಸ್ಟ್ 24 ರಂದು ಜೋಹಾನ್ಸ್ ಬರ್ಗ್ ನಲ್ಲಿ ಭೇಟಿ ಮಾಡಿದರು.ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
August 24th, 11:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಇಥಿಯೋಪಿಯಾ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅಲಿ ಅವರನ್ನು ಭೇಟಿ ಮಾಡಿದರು.ಸೆನೆಗಲ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
August 24th, 11:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಸೆನೆಗಲ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಮ್ಯಾಕಿ ಸಾಲ್ ಅವರನ್ನು ಭೇಟಿ ಮಾಡಿದರು.