There is no losing in sports, only winning or learning: PM Modi
November 01st, 07:00 pm
PM Modi interacted with and addressed India's Asian Para Games contingent at Major Dhyan Chand National Stadium, in New Delhi. The programme is an endeavor by the Prime Minister to congratulate the athletes for their outstanding achievement at the Asian Para Games 2022 and to motivate them for future competitions. Addressing the para-athletes, the Prime Minister said, You bring along new hopes and renewed enthusiasm whenever you come here.ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡ ಉದ್ದೇಶಿಸಿ ಪ್ರಧಾನ ಮಂತ್ರಿಯ ಭಾಷಣ
November 01st, 04:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಏಷ್ಯಾ ಪ್ಯಾರಾ ಗೇಮ್ಸ್-2022 ತಂಡದೊಂದಿಗೆ ಸಂವಾದ ನಡೆಸಿ, ಅವರನ್ನು ಉದ್ದೇಶಿಸಿ ಮಾತನಾಡಿದರು. ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ವೈಯಕ್ತಿಕ ಪ್ರಯತ್ನವಾಗಿದೆ.ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 14th, 10:34 pm
ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ
October 14th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.ಅಮೇಥಿ ಸಂಸದ್ ಖೇಲ್ ಪ್ರತಿಯೋಗಿತಾ 2023 ರ ಸಮಾರೋಪದಲ್ಲಿ ಪ್ರಧಾನಮಂತ್ರಿ ಅವರ ವೀಡಿಯೊ ಸಂದೇಶದ ಕನ್ನಡ ಅನುವಾದ
October 13th, 01:00 pm
ಅಮೇಥಿಯಲ್ಲಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರಿಗೆ ಶುಭಾಶಯಗಳು! ಅಮೇಥಿಯಲ್ಲಿ ನಡೆದ ಅಮೇಥಿ ಸಂಸದ್ ಖೇಲ್-ಕೂಡ್ ಪ್ರತಿಯೋಗಿತದ ಸಮಾರೋಪದಲ್ಲಿ ನಿಮ್ಮೊಂದಿಗೆ ಇರುವುದು ನನಗೆ ತುಂಬಾ ವಿಶೇಷವಾಗಿದೆ. ಈ ತಿಂಗಳು ನಮ್ಮ ದೇಶದಲ್ಲಿ ಕ್ರೀಡೆಗೆ ಶುಭವಾಗಿದೆ. ನಮ್ಮ ಕ್ರೀಡಾಪಟುಗಳು ಏಷ್ಯನ್ ಕ್ರೀಡಾಕೂಟದಲ್ಲಿ ಶತಕ ಪದಕಗಳನ್ನು ಗಳಿಸಿದ್ದಾರೆ. ಈ ಕ್ರೀಡಾಕೂಟಗಳಲ್ಲಿಯೂ ಅಮೇಥಿಯ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸಂಸದ್ ಖೇಲ್-ಕೂಡ್ ಪ್ರತಿಯೋಗಿತದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನು ನಾನು ಅಭಿನಂದಿಸುತ್ತೇನೆ. ಈ ಸ್ಪರ್ಧೆಯು ಒದಗಿಸಿದ ಹೊಸ ಶಕ್ತಿ ಮತ್ತು ವಿಶ್ವಾಸವನ್ನು ನೀವು ಅನುಭವಿಸುತ್ತಿರಬಹುದು, ಮತ್ತು ನೀವು ಮಾತ್ರವಲ್ಲ, ಪ್ರದೇಶದಾದ್ಯಂತದ ಜನರು ಸಹ ಇದನ್ನು ಅನುಭವಿಸುತ್ತಿದ್ದಾರೆ, ಮತ್ತು ಅದರ ಬಗ್ಗೆ ಕೇಳಿದಾಗ ನನಗೂ ಅನಿಸುತ್ತದೆ. ನಾವು ಈ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಬೇಕು ಮತ್ತು ಪೋಷಿಸಬೇಕು, ಅದಕ್ಕೆ ನೀರು ಹಾಕಬೇಕು ಮತ್ತು ಅದನ್ನು ಬೆಳೆಯಲು ಬಿಡಬೇಕು. ಕಳೆದ 25 ದಿನಗಳಲ್ಲಿ ನೀವು ಅನುಭವಿಸಿದ ಅನುಭವಗಳು ನಿಮ್ಮ ಕ್ರೀಡಾ ವೃತ್ತಿಜೀವನಕ್ಕೆ ಮಹತ್ವದ ಆಸ್ತಿಯಾಗಿದೆ. ಇಂದು, ಶಿಕ್ಷಕರಾಗಿ, ಮೇಲ್ವಿಚಾರಕರಾಗಿ, ಶಾಲಾ ಮತ್ತು ಕಾಲೇಜು ಪ್ರತಿನಿಧಿಯಾಗಿ ಪಾತ್ರ ವಹಿಸಿದ ಮತ್ತು ಈ ಭವ್ಯ ಅಭಿಯಾನದ ಮೂಲಕ ಈ ಯುವ ಕ್ರೀಡಾಪಟುಗಳನ್ನು ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಒಂದು ಲಕ್ಷಕ್ಕೂ ಹೆಚ್ಚು ಕ್ರೀಡಾಪಟುಗಳು, ವಿಶೇಷವಾಗಿ ಅಂತಹ ಸಣ್ಣ ಪ್ರದೇಶದಲ್ಲಿ ಒಟ್ಟುಗೂಡಿರುವುದು ಗಮನಾರ್ಹ ಸಾಧನೆಯಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಅಮೇಥಿಯ ಸಂಸತ್ ಸದಸ್ಯೆ ಸ್ಮೃತಿ ಇರಾನಿ ಅವರಿಗೆ ನಾನು ವಿಶೇಷ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಅಮೇಠಿ ಸಂಸದ್ ಖೇಲ್ ಪ್ರತಿಯೋಗಿತಾ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಿದರು
October 13th, 12:40 pm
ಅಮೇಠಿ ಸಂಸದ್ ಖೇಲ್ ಪ್ರತಿಯೋಗಿತಾ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.ବାରଣାସୀରେ ଅନ୍ତର୍ଜାତୀୟ କ୍ରିକେଟ ଷ୍ଟାଡିୟମର ଶିଳାନ୍ୟାସ ସମାରୋହରେ ପ୍ରଧାନମନ୍ତ୍ରୀଙ୍କ ଅଭିଭାଷଣ
September 23rd, 02:11 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರುಗಳೇ, ಪ್ರತಿನಿಧಿಗಳೇ, ಕ್ರೀಡಾ ಜಗತ್ತಿನ ಗಣ್ಯ ಅತಿಥಿಗಳೇ ಮತ್ತು ಕಾಶಿಯ ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
September 23rd, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 30 ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಆಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ವಾರಣಾಸಿಯ ಗಂಜಾರಿ, ರಜತಲಾಬ್ ನಲ್ಲಿ ಸುಮಾರು 450 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.3ನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 25th, 10:16 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಜಿ, ನನ್ನ ಸಂಪುಟ ಸಹೋದ್ಯೋಗಿ ನಿಸಿತ್ ಪ್ರಮಾಣಿಕ್ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಜಿ, ಇಲ್ಲಿರುವ ಇತರೆ ಗಣ್ಯರು, ಮತ್ತು ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಅಭಿನಂದನೆಗಳು. ಇಂದು ಉತ್ತರ ಪ್ರದೇಶವು ದೇಶಾದ್ಯಂತ ಇರುವ ಯುವ ಕ್ರೀಡಾ ಪ್ರತಿಭೆಗಳ ಸಂಗಮ ಸ್ಥಳವಾಗಿದೆ. ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ 4,000 ಆಟಗಾರರಲ್ಲಿ ಹೆಚ್ಚಿನವರು ವಿವಿಧ ರಾಜ್ಯಗಳು ಮತ್ತು ಪ್ರದೇಶಗಳಿಂದ ಬಂದವರಾಗಿದ್ದಾರೆ. ನಾನು ಉತ್ತರ ಪ್ರದೇಶದ ಸಂಸದ. ನಾನು ಉತ್ತರ ಪ್ರದೇಶದ ಜನರ ಪ್ರತಿನಿಧಿ. ಹಾಗಾಗಿ, ಉತ್ತರ ಪ್ರದೇಶದ ಸಂಸತ್ ಸದಸ್ಯನಾಗಿ, 'ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್'ನಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಎಲ್ಲ ಕ್ರೀಡಾಪಟುಗಳಿಗೆ ನಾನು ವಿಶೇಷವಾಗಿ ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ.ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನ 3ನೇ ಆವೃತ್ತಿಯನ್ನು ಆರಂಭಿಸುವುದಾಗಿ ಘೋಷಿಸಿದ ಪ್ರಧಾನ ಮಂತ್ರಿ
May 25th, 07:06 pm
ಪಿಐಬಿ ದೆಹಲಿ ಮೇ 25: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2023ನ್ನು(KIUG) ಆರಂಭಿಸುವುದಾಗಿ ಘೋಷಿಸಿದರು. 21 ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸುವ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 4,750ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಲಿದ್ದಾರೆ.ಮಣಿಪುರದ ಇಂಫಾಲ್‌ನಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರ 'ಚಿಂತನ ಶಿಬಿರ' ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 24th, 10:10 am
ಕಾರ್ಯಕ್ರಮದಲ್ಲಿ ಭಾಗವಹಿಸಿರುವ ನನ್ನ ಸಚಿವ ಸಂಪುಟ ಸಹೋದ್ಯೋಗಿ ಅನುರಾಗ್ ಠಾಕೂರ್ ಜಿ, ಎಲ್ಲಾ ರಾಜ್ಯಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರೆ, ಇಲ್ಲಿ ನೆರೆದಿರುವ ಎಲ್ಲಾ ಗಣ್ಯರು, ಮಹಿಳೆಯರು ಮತ್ತು ಸಜ್ಜನರೆ,ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವಿರ್' ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 10:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವೀರ್' ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಬಸ್ತಿಯಲ್ಲಿ 2 ನೇ ಸಂಸದ್ ಖೇಲ್ ಮಹಾಕುಂಭ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 04:39 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ನಮ್ಮ ಯುವ ಸ್ನೇಹಿತ ಹರೀಶ್ ದ್ವಿವೇದಿ ಜೀ, ವಿವಿಧ ಕ್ರೀಡಾಪಟುಗಳು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯ ಯುವಕರನ್ನು ನಾನು ಎಲ್ಲೆಡೆ ನೋಡಬಹುದು. ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಬಸ್ತಿ ಜಿಲ್ಲೆಯಲ್ಲಿ 2022-23ನೇ ಸಾಲಿನ ಸಾನ್ಸದ್ ಖೇಲ್ ಮಹಾಕುಂಭದ ಎರಡನೇ ಹಂತವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿಮಂತ್ರಿಗಳು
January 18th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಾನ್ಸದ್ ಖೇಲ್ ಮಹಾಕುಂಭ 2022-23ರ ಎರಡನೇ ಹಂತವನ್ನು ಉದ್ಘಾಟಿಸಿದರು. ಸಾನ್ಸದ್ ಖೇಲ್ ಮಹಾಕುಂಭವನ್ನು 2021ರಿಂದ ಬಸ್ತಿ ಜಿಲ್ಲೆಯ ಸಂಸದ ಶ್ರೀ ಹರೀಶ್ ದ್ವಿವೇದಿಯವರು ಬಸ್ತಿ ಜಿಲ್ಲೆಯಲ್ಲಿ ಆಯೋಜಿಸುತ್ತಿದ್ದಾರೆ. ಖೇಲ್ ಮಹಾಕುಂಭವು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಖೋ ಖೋ, ಬ್ಯಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್ ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದಲ್ಲದೆ, ಖೇಲ್ ಮಹಾಕುಂಭದಲ್ಲಿ ಪ್ರಬಂಧ ಬರೆಯುವುದು, ಚಿತ್ರಕಲೆ, ರಂಗೋಲಿ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.