ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ
September 23rd, 12:11 am
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಅನುರ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾ ಜೊತೆಗೆ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವ ಭರವಸೆಯನ್ನು ಪ್ರಧಾನ ಮಂತ್ರಿಗಳು ವ್ಯಕ್ತಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಶ್ರೀಲಂಕಾದ ಅಧ್ಯಕ್ಷ
June 05th, 10:11 pm
ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಶ್ರೀ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ಅಭಿನಂದನೆ ಸಲ್ಲಿಸಿದರು.ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ
April 02nd, 12:30 pm
2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ ್ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ ್ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ
April 02nd, 12:00 pm
2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ್‍ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ್‍ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
February 12th, 01:30 pm
ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!ಮಾರಿಷನ್ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 12th, 01:00 pm
ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಶ್ರೀ ಪ್ರವೀಂದ್ ಜುಗ್ನಾಥ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುನೈಫೈಡ್ ಪೇಮೆಂಟ್ ಇಂಟರ್ಪೇಸ್ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಯುಪಿಐ ಸೇವೆ ಪ್ರಾರಂಭವನ್ನು ಪ್ರಧಾನಿ ಮೋದಿ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜಗನ್ನಾಥ್ ಸಾಕ್ಷಿ.
February 11th, 03:13 pm
ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಮತ್ತು ಮಾರಿಷಸ್‌ನಲ್ಲಿ ರುಪೇ ಕಾರ್ಡ್ ಸೇವೆ ಆರಂಭಿಸಲಾಗುವುದು ಮತ್ತು ಇದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೀಲಂಕಾದ ಅಧ್ಯಕ್ಷ, ಶ್ರೀ. ರಾನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ, ಶ್ರೀ ಪ್ರವಿಂದ್ ಜುಗ್ನೌತ್ ಅವರು ಸಾಕ್ಷಿಯಾಗಲಿದ್ದಾರೆ. 12 ಫೆಬ್ರವರಿ 2024 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮ ಆರಂಭವಾಗಲಿದೆ.ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಗೆಲುವನ್ನು ಶ್ಲಾಘಿಸಿದ ಪ್ರಧಾನಿ
November 02nd, 10:51 pm
ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಗೋವಾದಲ್ಲಿ ನಡೆದ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿನ ಪ್ರಧಾನಮಂತ್ರಿ ಅವರ ಭಾಷಣ
October 26th, 10:59 pm
ಗೋವಾದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಪಿ.ಎಸ್. ಶ್ರೀಧರನ್ ಪಿಳ್ಳೈ ಜೀ, ಜನಪ್ರಿಯ ಮತ್ತು ಕ್ರಿಯಾತ್ಮಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೀ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ವೇದಿಕೆಯಲ್ಲಿ ಉಪಸ್ಥಿತರಿರುವ ಪ್ರತಿನಿಧಿಗಳು, ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಜೀ, ಎಲ್ಲಾ ಆಟಗಾರರು, ಸಹಾಯಕ ಸಿಬ್ಬಂದಿ, ಇತರ ಅಧಿಕಾರಿಗಳು ಮತ್ತು ದೇಶದ ಮೂಲೆ ಮೂಲೆಯಲ್ಲಿರುವ ಯುವ ಸ್ನೇಹಿತರು, ಭಾರತೀಯ ಕ್ರೀಡಾ ಉತ್ಸವದ ಭವ್ಯ ಪ್ರಯಾಣವು ಈಗ ಗೋವಾವನ್ನು ತಲುಪಿದೆ. ಎಲ್ಲೆಡೆ ಬಣ್ಣಗಳು, ಅಲೆಗಳು ಮತ್ತು ಉತ್ಸಾಹವಿದೆ. ಗೋವಾದ ಗಾಳಿಯಲ್ಲಿ ಏನೋ ವಿಶೇಷವಿದೆ. 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕಾಗಿ ನಿಮ್ಮೆಲ್ಲರಿಗೂ ಶುಭಾಶಯಗಳು, ಅನೇಕ ಅಭಿನಂದನೆಗಳು.ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
October 26th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದ ಮಡಗಾಂವ್ ನಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ಸಣ್ಣ ಹಡಗು(ದೋಣಿ) ಸೇವೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 14th, 08:15 am
ಈ ಮಹತ್ವದ ಸುಸಂದರ್ಭದಲ್ಲಿ ನಿಮ್ಮೊಂದಿಗೆ ಸೇರಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ಕಡವು ಅಥವಾ ಸಣ್ಣ ಹಡಗು ಅಥವಾ ದೋಣಿಯ ಸೇವಾರಂಭವು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ
October 14th, 08:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಸಂದೇಶದ ಮೂಲಕ ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 21st, 12:13 pm
ಭಾರತದಲ್ಲಿ ಅಧ್ಯಕ್ಷ ವಿಕ್ರಮಸಿಂಘೆ ಮತ್ತು ಅವರ ನಿಯೋಗವನ್ನು ಇಂದು ನಾನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಅಧ್ಯಕ್ಷ ವಿಕ್ರಮಸಿಂಘೆ ಅವರು ಅಧಿಕಾರದಲ್ಲಿ ಒಂದು ವರ್ಷ ಪೂರೈಸುತ್ತಿದ್ದಾರೆ. ಈ ಸಂದರ್ಭದಲ್ಲಿ, ನಮ್ಮೆಲ್ಲರ ಪರವಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಕಳೆದ ಒಂದು ವರ್ಷವು ಶ್ರೀಲಂಕಾದ ಜನರಿಗೆ ಸವಾಲುಗಳಿಂದ ತುಂಬಿದೆ. ಆಪ್ತ ಸ್ನೇಹಿತರಂತೆ ಸದಾ, ನಾವು ಈ ಬಿಕ್ಕಟ್ಟಿನ ಸಮಯದಲ್ಲಿ ಶ್ರೀಲಂಕಾದ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಮತ್ತು ಈ ಸವಾಲಿನ ಸಂದರ್ಭಗಳನ್ನು ಎದುರಿಸಿದ ಧೈರ್ಯಕ್ಕಾಗಿ ನಾನು ಶ್ರೀಲಂಕಾದ ಜನರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.