ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಸಿ.ಡಬ್ಲ್ಯೂ.ಜಿ -2022 ರಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 08th, 08:25 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿ.ಡಬ್ಲ್ಯೂ.ಜಿ ಯಲ್ಲಿ ಶ್ರೀಕಾಂತ್ ಕಿಡಂಬಿ ನಾಲ್ಕನೇ ಪದಕ ಗೆದ್ದಿರುವ ಬಗ್ಗೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್‌-2021ʼನಲ್ಲಿ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ್ ಅವರಿಗೆ ಪ್ರಧಾನಿ ಅಭಿನಂದನೆ

December 20th, 02:17 pm

ʻಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್‌-2021ʼನಲ್ಲಿ ಬೆಳ್ಳಿ ಪದಕ ಗೆದ್ದ ಕಿಡಂಬಿ ಶ್ರೀಕಾಂತ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಆಸ್ಟ್ರೇಲಿಯನ್ ಮುಕ್ತ ಸೂಪರ್ ಸೀರೀಸ್ ಪ್ರಶಸ್ತಿ ಗೆದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಗೆ ಅಭಿನಂದಿಸಿದ ಪ್ರಧಾನಿ

June 25th, 07:57 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಆಸ್ಟ್ರೇಲಿಯನ್ ಮುಕ್ತ ಸೂಪರ್ ಸೀರೀಸ್ ಪ್ರಶಸ್ತಿ ಗೆದ್ದ ಭಾರತದ ಬ್ಯಾಟ್ಮಿಂಟನ್ ಪಟು ಕಿಡಂಬಿ ಶ್ರೀಕಾಂತ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾ ಮುಕ್ತ ಪಂದ್ಯಾವಳಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರ ಗೆಲವು ನಮಗೆಲ್ಲರಿಗೂ ನಿಜಕ್ಕೂ ಹೆಮ್ಮೆ ತಂದಿದೆ. ಮತ್ತೊಂದು ಅಭೂತಪೂರ್ವ ಗೆಲುವಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ, ಎಂದು ಪ್ರಧಾನಿ ಹೇಳಿದ್ದಾರೆ.

1975 ರಲ್ಲಿ ತುರ್ತುಪರಿಸ್ಥಿತಿ ನಮ್ಮ ಪ್ರಜಾಪ್ರಭುತ್ವಕ್ಕೆ ಕರಾಳ ರಾತ್ರಿಯಾಗಿತ್ತು: ಮಾನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

June 25th, 12:21 pm

ಜೂನ್ 1975 ರಲ್ಲಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಕಠಿಣ ಅವಧಿಯಾಗಿದೆ ಎಂದು ಮನ್ ಕಿ ಬಾತ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಧ್ವನಿಯನ್ನು ಎತ್ತಿದ ಸಾವಿರಾರು ಜನರನ್ನು ಜನರು ಹೇಗೆ ತೆಗೆದುಕೊಂಡು ಹೋಗಿದ್ದಾರೆಂದು ಅವರು ಸುದೀರ್ಘವಾಗಿ ಮಾತನಾಡಿದರು. ಪ್ರಧಾನಿ ಮೋದಿ ಸ್ವಚ್ಛತೆಯ ಬಗ್ಗೆ ಒತ್ತು ನೀಡಿದರು , ಇತ್ತೀಚೆಗೆ ಯೋಗ, ಬಾಹ್ಯಾಕಾಶ ವಿಜ್ಞಾನ ಮತ್ತು ಕ್ರೀಡೆಗಳ ಹುರುಪಿನ ಮೂರನೇ ಅಂತರಾಷ್ಟ್ರೀಯ ದಿನದ ಬಗ್ಗೆ ಮಾತನಾಡುತ್ತಾ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು