ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
November 25th, 08:11 pm
ಭಾರತದ ಸಂವಿಧಾನ ಅಂಗೀಕರಿಸಿ 75 ವರ್ಷಗಳು ಪೂರ್ಣಗೊಂಡಿರುವ ಮಹತ್ವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಸುಪ್ರೀಂ ಕೋರ್ಟ್‌ನ ಆಡಳಿತಾತ್ಮಕ ಕಟ್ಟಡ ಸಂಕೀರ್ಣ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಆಯೋಜಿಸಿರುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತೀಯ ನ್ಯಾಯಾಂಗದ(2023-24) ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi conveys best wishes to Justice Sanjiv Khanna on taking oath as Chief Justice of Supreme Court of India
November 11th, 01:34 pm
The Prime Minister, Shri Narendra Modi has conveyed his best wishes to Justice Sanjiv Khanna on taking oath as Chief Justice of Supreme Court of India.ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
August 31st, 10:30 am
ಈ ಸಮಾರಂಭವು ತುಂಬಾ ಗಂಭೀರವಾಗಿದೆ ಎಂದು ನನಗೆ ಅನಿಸುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜ್ಯೂಬಿಲಿ ಸಮಾರಂಭದಲ್ಲಿ ಭಾಗವಹಿಸಿದ್ದೆ ಮತ್ತು ಇಂದು ಸುಪ್ರೀಂ ಕೋರ್ಟ್‌ನ ಯಾತ್ರೆಯ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ 75 ವರ್ಷಗಳು ಕೇವಲ ಸಂಸ್ಥೆಯ ಪ್ರಯಾಣವಲ್ಲ; ಇದು ಭಾರತೀಯ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಪಯಣ! ಇದು ಪ್ರಜಾಪ್ರಭುತ್ವವಾಗಿ ಪಕ್ವಗೊಳ್ಳುತ್ತಿರುವ ಭಾರತದ ಪಯಣ! ಮತ್ತು ನಮ್ಮ ಸಂವಿಧಾನ ರಚನೆಕಾರರು ಮತ್ತು ನ್ಯಾಯಾಂಗದ ಅನೇಕ ಗಣ್ಯ ವ್ಯಕ್ತಿಗಳ ಕೊಡುಗೆಗಳು ಈ ಪ್ರಯಾಣದಲ್ಲಿ ಬಹಳ ಮಹತ್ವದ್ದಾಗಿದೆ. ಈ ಪ್ರಯಾಣವು ಲಕ್ಷಾಂತರ ನಾಗರಿಕರ ಕೊಡುಗೆಯನ್ನು ಒಳಗೊಂಡಿದೆ, ಅವರು ಪ್ರತಿ ಸಂದರ್ಭದಲ್ಲೂ ನ್ಯಾಯಾಂಗದಲ್ಲಿ ತಮ್ಮ ನಂಬಿಕೆಯನ್ನು ಅಚಲವಾಗಿ ಇಟ್ಟುಕೊಂಡಿದ್ದಾರೆ. ಭಾರತದ ಜನರು ಸುಪ್ರೀಂ ಕೋರ್ಟ್ ಅಥವಾ ನಮ್ಮ ನ್ಯಾಯಾಂಗವನ್ನು ಎಂದಿಗೂ ಅನುಮಾನಿಸಲಿಲ್ಲ. ಆದ್ದರಿಂದ, ಸುಪ್ರೀಂ ಕೋರ್ಟ್‌ನ ಈ 75 ವರ್ಷಗಳು ಪ್ರಜಾಪ್ರಭುತ್ವದ ತಾಯಿ ಎಂಬ ಭಾರತದ ಹೆಮ್ಮೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಸತ್ಯಮೇವ ಜಯತೇ, ನನೃತಂ (ಸತ್ಯವೇ ಜಯಿಸುತ್ತದೆ, ಸುಳ್ಳಲ್ಲ) ಎಂದು ಹೇಳುವ ನಮ್ಮ ಸಾಂಸ್ಕೃತಿಕ ಘೋಷಣೆಯನ್ನು ಇದು ಬಲಪಡಿಸುತ್ತದೆ. ರಾಷ್ಟ್ರವು 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಇದು ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲಿದೆ. ಆದ್ದರಿಂದ, ಈ ಕ್ಷಣದಲ್ಲಿ ಹೆಮ್ಮೆ, ವೈಭವ ಮತ್ತು ಸ್ಫೂರ್ತಿ ಇದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ಮತ್ತು ಇಡೀ ರಾಷ್ಟ್ರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಸಮಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜಿಲ್ಲಾ ನ್ಯಾಯಾಂಗ ಸಮ್ಮೇಳನಕ್ಕೂ ನನ್ನ ಶುಭ ಹಾರೈಕೆಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು
August 31st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯ 75ನೇ ವರ್ಷಾಚರಣೆಯ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಭಾರತದ ಸರ್ವೋಚ್ಚ ನ್ಯಾಯಾಲಯವು ಆಯೋಜಿಸಿರುವ ಎರಡು ದಿನಗಳ ಸಮ್ಮೇಳನವು ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಾದ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ, ಎಲ್ಲರಿಗೂ ಅಂತರ್ಗತ ನ್ಯಾಯಾಲಯಗಳು, ನ್ಯಾಯಾಂಗ ಭದ್ರತೆ ಮತ್ತು ನ್ಯಾಯಾಂಗ ಸ್ವಾಸ್ಥ್ಯ, ಪ್ರಕರಣ ನಿರ್ವಹಣೆ ಮತ್ತು ನ್ಯಾಯಾಂಗ ತರಬೇತಿಯಂತಹ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಿಸಲು ಐದು ಕೆಲಸದ ಅಧಿವೇಶನಗಳನ್ನು ಆಯೋಜಿಸುತ್ತದೆ.ಆಗಸ್ಟ್ 31ರಂದು ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ
August 30th, 04:15 pm
ಆಗಸ್ಟ್ 31, 2024 ರಂದು ಬೆಳಗ್ಗೆ 10 ಗಂಟೆಗೆ ದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಭಾರತದ ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯ 75 ವರ್ಷಗಳ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಲಿದ್ದಾರೆ.ಜಾಗರೂಕತೆಯ ನೈತಿಕ ಹೊಣೆಗಾರಿಕೆಯನ್ನು ನ್ಯಾಯಾಂಗವು ಸತತವಾಗಿ ನಿರ್ವಹಿಸುತ್ತಿದೆ: ಜೋಧಪುರದಲ್ಲಿ ಪ್ರಧಾನಿ ಮೋದಿ
August 25th, 05:00 pm
ಪ್ರಧಾನಿ ನರೇಂದ್ರ ಮೋದಿ ಅವರು ಜೋಧ್‌ಪುರದಲ್ಲಿ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಯಲ್ಲಿ ಪಾಲ್ಗೊಂಡರು, ಅಲ್ಲಿ ಅವರು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ನ್ಯಾಯಾಂಗದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಅವರು ಕಳೆದ 75 ವರ್ಷಗಳಲ್ಲಿ ಹೈಕೋರ್ಟ್‌ನ ಕೊಡುಗೆಗಳನ್ನು ಶ್ಲಾಘಿಸಿದರು ಮತ್ತು ಪ್ರವೇಶ ಮತ್ತು ದಕ್ಷತೆಯನ್ನು ಸುಧಾರಿಸಲು ಕಾನೂನು ವ್ಯವಸ್ಥೆಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು.ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 25th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದರು. ಅವರು ರಾಜಸ್ಥಾನ ಹೈಕೋರ್ಟ್ ವಸ್ತುಸಂಗ್ರಹಾಲಯವನ್ನೂ ಉದ್ಘಾಟಿಸಿದರು.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ
July 02nd, 09:58 pm
ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ
July 02nd, 04:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.