ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಅಹಮದಾಬಾದ್ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ
December 09th, 01:30 pm
ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!ಗುಜರಾತ್ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ರಾಮಕೃಷ್ಣ ಮಠದಲ್ಲಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದ ಜಿ ಮಹಾರಾಜ್, ಭಾರತ ಮತ್ತು ವಿದೇಶಗಳ ರಾಮಕೃಷ್ಣ ಮಠ ಮತ್ತು ಮಿಷನ್ ನ ಪೂಜ್ಯ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರೆ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿದರು. ಶ್ರೀ ಮೋದಿ ಅವರು ಶಾರದಾ ದೇವಿ, ಗುರುದೇವ ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿದರು. ಇಂದಿನ ಕಾರ್ಯಕ್ರಮವನ್ನು ಶ್ರೀಮತ್ ಸ್ವಾಮಿ ಪ್ರೇಮಾನಂದ ಮಹಾರಾಜರ ಜನ್ಮದಿನದಂದು ಆಯೋಜಿಸಲಾಗಿದ್ದು, ಅವರಿಗೂ ನಮನ ಸಲ್ಲಿಸಿದರು.ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಪ್ರಧಾನಮಂತ್ರಿ ಭೇಟಿ
December 08th, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ 10:30 ರ ಸುಮಾರಿಗೆ ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ (ಜೆಇಸಿಸಿ) ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಪಾಣಿಪತ್ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಗೆ ಅವರು ಎಲ್ಐಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.ನವೆಂಬರ್ 25 ರಂದು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
November 24th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಉದ್ಘಾಟಿಸಲಿದ್ದಾರೆ ಮತ್ತು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025 ಅನ್ನು ನವೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭಿಸಲಿದ್ದಾರೆ.Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ
November 20th, 07:52 am
G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 20th, 01:40 am
ಇಂದಿನ ಅಧಿವೇಶನದ ವಿಷಯವು ಬಹಳ ಪ್ರಸ್ತುತವಾಗಿದೆ ಮತ್ತು ಮುಂದಿನ ಪೀಳಿಗೆಯ ಭವಿಷ್ಯದೊಂದಿಗೆ ನಿಕಟ ಸಂಬಂಧ ಹೊಂದಿದೆ. ನವದೆಹಲಿ ಜಿ -20 ಶೃಂಗಸಭೆಯಲ್ಲಿ, ಎಸ್ ಡಿಜಿಗಳ ಸಾಧನೆಯನ್ನು ವೇಗಗೊಳಿಸಲು ನಾವು ವಾರಣಾಸಿ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದ್ದೇವೆ.ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ 20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 20th, 01:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ-20 ಶೃಂಗಸಭೆಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ನವದೆಹಲಿ ಜಿ-20 ಶೃಂಗಸಭೆಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸಲು ಮತ್ತು 2030ರ ವೇಳೆಗೆ ಇಂಧನ ದಕ್ಷತೆಯ ದರವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಈ ಸುಸ್ಥಿರ ಅಭಿವೃದ್ಧಿ ಆದ್ಯತೆಗಳನ್ನು ಮುಂದಕ್ಕೆ ತೆಗೆದುಕೊಳ್ಳುವ ಬ್ರೆಜಿಲ್ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.ಸಾಮೂಹಿಕ ಪ್ರಯತ್ನಗಳು ಸ್ವಚ್ಛತೆ ಮತ್ತು ಆರ್ಥಿಕ ವಿವೇಕ ಎರಡನ್ನೂ ಉತ್ತೇಜಿಸುವ ಜೊತೆಗೆ ಸುಸ್ಥಿರ ಫಲಿತಾಂಶ ನೀಡಬಲ್ಲದು: ಪ್ರಧಾನಮಂತ್ರಿ
November 10th, 01:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶೇಷ ಅಭಿಯಾನ 4.0 ಅನ್ನು ಇಂದು ಶ್ಲಾಘಿಸಿದ್ದಾರೆ. ಇದು ಭಾರತದ ಅತ್ಯಂತ ದೊಡ್ಡ ಅಭಿಯಾನವಾಗಿದ್ದು, ಇದರಡಿ ಬಳಸದ ವಸ್ತು (ಸ್ಕ್ರ್ಯಾಪ್) ಅನ್ನು ವಿಲೇವಾರಿ ಮಾಡುವ ಮೂಲಕ ರಾಜ್ಯದ ಬೊಕ್ಕಸಕ್ಕೆ (2021 ರಿಂದ) ರೂ 2,364 ಕೋಟಿ ಸೇರಿದಂತೆ ಗಣನೀಯ ಫಲಿತಾಂಶಗಳನ್ನು ಸಾಧಿಸಲಾಗಿದೆ. ಸಾಮೂಹಿಕ ಪ್ರಯತ್ನಗಳು ಸ್ವಚ್ಛತೆ ಮತ್ತು ಆರ್ಥಿಕ ವಿವೇಕ ಎರಡನ್ನೂ ಉತ್ತೇಜಿಸುವುದಲ್ಲದೇ ಸುಸ್ಥಿರ ಫಲಿತಾಂಶ ನೀಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.