Today the youth of India is full of new confidence, succeeding in every sector: PM Modi

December 23rd, 11:00 am

PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.

PM Modi distributes more than 71,000 appointment letters to newly appointed recruits

December 23rd, 10:30 am

PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.

ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

December 17th, 12:05 pm

ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!

ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 13th, 02:10 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು

December 13th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.

ಅಹಮದಾಬಾದ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ

December 09th, 01:30 pm

ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!

ಗುಜರಾತ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

December 09th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ರಾಮಕೃಷ್ಣ ಮಠದಲ್ಲಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದ ಜಿ ಮಹಾರಾಜ್, ಭಾರತ ಮತ್ತು ವಿದೇಶಗಳ ರಾಮಕೃಷ್ಣ ಮಠ ಮತ್ತು ಮಿಷನ್ ನ ಪೂಜ್ಯ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರೆ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿದರು. ಶ್ರೀ ಮೋದಿ ಅವರು ಶಾರದಾ ದೇವಿ, ಗುರುದೇವ ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿದರು. ಇಂದಿನ ಕಾರ್ಯಕ್ರಮವನ್ನು ಶ್ರೀಮತ್ ಸ್ವಾಮಿ ಪ್ರೇಮಾನಂದ ಮಹಾರಾಜರ ಜನ್ಮದಿನದಂದು ಆಯೋಜಿಸಲಾಗಿದ್ದು, ಅವರಿಗೂ ನಮನ ಸಲ್ಲಿಸಿದರು.

ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 07th, 05:52 pm

ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.

ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

December 07th, 05:40 pm

ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 16th, 10:15 am

100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

November 16th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್‌ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.

ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.

ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

November 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

ಹತ್ತು ವರ್ಷಗಳಲ್ಲಿ ಸ್ವಚ್ಛ ಭಾರತ ಅಭಿಯಾನದ ರೂಪಾಂತರಕಾರಿ ಪರಿಣಾಮಗಳ ಬಗ್ಗೆ‌ ಪ್ರಧಾನಮಂತ್ರಿ ಮಾಹಿತಿ

October 03rd, 08:52 am

ಸ್ವಚ್ಛ ಭಾರತ ಅಭಿಯಾನವು ಕಳೆದ 10 ವರ್ಷಗಳಲ್ಲಿ ಬೀರಿರುವ ಪರಿಣಾಮಕಾರಿ ಪರಿವರ್ತನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳಕು ಚೆಲ್ಲಿದ್ದಾರೆ.

ಸಾಮೂಹಿಕ ಪ್ರಯತ್ನಗಳಿಂದ ಸಮಾಜದ ಪರಿವರ್ತನೆಗೆ ಅದ್ಭುತ ಕೆಲಸ ಮಾಡಬಹುದು: ಪ್ರಧಾನಮಂತ್ರಿ

October 03rd, 08:50 am

ಸಾಮೂಹಿಕ ಪ್ರಯತ್ನಗಳಿಂದ ಸಮಾಜದ ಪರಿವರ್ತನೆಗೆ ಅದ್ಬುತವಾದ ಕೆಲಸಗಳನ್ನು ಮಾಡಬಹುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್ ನಲ್ಲಿ ಸ್ವಚ್ಛತೆಯನ್ನು ಹೆಚ್ಚು ಚರ್ಚಿಸಲಾಗಿದೆ: ಪ್ರಧಾನಮಂತ್ರಿ

October 02nd, 05:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮನ್ ಕಿ ಬಾತ್ ನಲ್ಲಿ ಸ್ವಚ್ಚತೆಯು ಹೆಚ್ಚು ಚರ್ಚಿಸಲ್ಪಟ್ಟ ವಿಷಯಗಳಲ್ಲಿ ಒಂದಾಗಿದೆ ಎಂದು ಒತ್ತಿಹೇಳಿದ್ದಾರೆ.

ಸ್ವಚ್ಛ ಭಾರತ ಅಭಿಯಾನವು 140 ಕೋಟಿ ಭಾರತೀಯರಿಂದ ನಡೆಸಲ್ಪಡುವ ಅಸಾಧಾರಣ ಆಂದೋಲನವಾಗಿದೆ: ಪ್ರಧಾನಮಂತ್ರಿ

October 02nd, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಪೂರ್ಣಗೊಳಿಸಿದ ಈ ಸಂದರ್ಭದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಶ್ಲಾಘಿಸಿದ್ದಾರೆ. ಈ ಅಭಿಯಾನವು 140 ಕೋಟಿ ಭಾರತೀಯರಿಂದ ನಡೆಸಲ್ಪಡುವ ಅಸಾಧಾರಣ ಆಂದೋಲನವಾಗಿದೆ ಎಂದು ಹೇಳಿದ್ದಾರೆ.