ಸ್ವಚ್ಛ ಭಾರತ ಅಭಿಯಾನದ 10 ವರ್ಷಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
October 02nd, 09:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತವನ್ನು ಸ್ವಚ್ಛಗೊಳಿಸುವ ಮತ್ತು ಸುಧಾರಿತ ನೈರ್ಮಲ್ಯ ಸೌಲಭ್ಯಗಳನ್ನು ಖಾತ್ರಿಪಡಿಸುವ ಮಹತ್ವದ ಸಾಮೂಹಿಕ ಪ್ರಯತ್ನವಾದ ಸ್ವಚ್ಛ ಭಾರತ ಅಭಿಯಾನದ 10 ವರ್ಷಗಳನ್ನು ಪೂರ್ಣಗೊಳಿಸಿರುವುದನ್ನು ಶ್ಲಾಘಿಸಿದ್ದಾರೆ.ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ
September 30th, 08:59 pm
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.Inspired by Gandhi Ji's vision, we are building a clean, healthy, prosperous and strong New India: PM
October 02nd, 08:04 pm
PM Modi declared rural India free from open defecation. Making a strong pitch to shun single-use plastic, the PM said, Sanitation, conservation of environment and animals were close to Gandhi Ji's heart. Plastic is a major threat to all of them. We have to achieve the goal of eradicating single use plastic from the country by 2022.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸ್ವಚ್ಛ ಭಾರತ ದಿನ ಉದ್ಘಾಟನೆ
October 02nd, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಹಮದಾಬಾದ್ ನಲ್ಲಿಂದು ಸ್ವಚ್ಛ ಭಾರತ ದಿನ 2019 ಉದ್ಘಾಟಿಸಿದರು. ಇದೇ ವೇಳೆ ಅವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನದ ನೆನಪಿಗಾಗಿ ಅಂಚೆ ಚೀಟಿ ಮತ್ತು ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ಅವರು ಸ್ವಚ್ಛ ಭಾರತ್ ಪುರಸ್ಕಾರವನ್ನು ವಿಜೇತರಿಗೆ ವಿತರಿಸಿದರು. ಇದಕ್ಕೂ ಮುನ್ನ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಅವರು, ಮಾಗನ್ ನಿವಾಸ್(ಚರಕ ಗ್ಯಾಲರಿ)ಗೆ ಭೇಟಿ ನೀಡಿದರು ಮತ್ತು ಅಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿದರು.