ರಾಜಸ್ಥಾನದ ಚಿತ್ತೋರ್ಗಢದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

October 02nd, 11:58 am

ಇಂದು ನಾವು ಸ್ಪೂರ್ತಿದಾಯಕ ವ್ಯಕ್ತಿಗಳಾದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಗಳನ್ನು ಸ್ಮರಿಸುತ್ತೇವೆ. ನಿನ್ನೆ, ಅಕ್ಟೋಬರ್ 1 ರಂದು, ರಾಜಸ್ಥಾನ ಸೇರಿದಂತೆ ಇಡೀ ದೇಶವು ಸ್ವಚ್ಛತೆಯ ಕಡೆಗೆ ಮಹತ್ವದ ಉಪಕ್ರಮವನ್ನು ಪ್ರಾರಂಭಿಸಿತು. ಸ್ವಚ್ಛತಾ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸಿದ್ದಕ್ಕಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಸುಮಾರು 7,000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು

October 02nd, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಸುಮಾರು 7,000 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ʻಮೆಹ್ಸಾನಾ - ಭಟಿಂಡಾ – ಗುರುದಾಸ್‌ಪುರ ಅನಿಲ ಪೈಪ್‌ನ್ʼ, ಅಬು ರಸ್ತೆಯಲ್ಲಿರುವ ʻಎಚ್‌ಪಿಸಿಎಲ್‌ʼನ ಎಲ್‌ಪಿಜಿ ಸ್ಥಾವರ, ಐಒಸಿಎಲ್‌ನ ಅಜ್ಮೀರ್ ಬಾಟ್ಲಿಂಗ್ ಸ್ಥಾವರದಲ್ಲಿ ಹೆಚ್ಚುವರಿ ಸಂಗ್ರಹಣೆ ಘಟಕ, ರೈಲ್ವೆ ಮತ್ತು ರಸ್ತೆ ಯೋಜನೆಗಳು, ನಾಥದ್ವಾರದಲ್ಲಿ ಪ್ರವಾಸೋದ್ಯಮ ಸೌಲಭ್ಯಗಳು ಮತ್ತು ಕೋಟಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಶಾಶ್ವತ ಕ್ಯಾಂಪಸ್ ಈ ಯೋಜನೆಗಳಲ್ಲಿ ಸೇರಿವೆ.

ಅಕ್ಟೋಬರ್ 2ರಂದು ಚಿತ್ತೋರ್‌ಗಢ ಮತ್ತು ಗ್ವಾಲಿಯರ್‌ಗೆ ಭೇಟಿ ನೀಡಲಿರುವ ಪ್ರಧಾನಿ

October 01st, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್ 2ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಸುಮಾರು 7,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಮಂತ್ರಿಯವರು ಗ್ವಾಲಿಯರ್ ತಲುಪಲಿದ್ದು, ಅಲ್ಲಿ ಅವರು ಸುಮಾರು 19,260 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ.