ಡಿಸೆಂಬರ್ 17-18ರಂದು ಸೂರತ್ ಮತ್ತು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಿ
December 16th, 10:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17 ಮತ್ತು 18ರಂದು ಗುಜರಾತ್‌ನ ಸೂರತ್ ಮತ್ತು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 17ರಂದು ಬೆಳಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಸೂರತ್ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11:15ಕ್ಕೆ ಪ್ರಧಾನಮಂತ್ರಿಯವರು ʻಸೂರತ್ ಡೈಮಂಡ್ ಬೋರ್ಸ್ʼ ಅನ್ನು ಉದ್ಘಾಟಿಸಲಿದ್ದಾರೆ. ನಂತರ ವಾರಣಾಸಿಗೆ ಪ್ರಯಾಣ ಬೆಳೆಸಲಿರುವ ಅವರು, ಮಧ್ಯಾಹ್ನ 3:30ರ ಸುಮಾರಿಗೆ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:15ರ ಸುಮಾರಿಗೆ ಅವರು ʻನಮೋ ಘಾಟ್ʼನಲ್ಲಿ ʻಕಾಶಿ ತಮಿಳು ಸಂಗಮಂ-2023ʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.