ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.ಸ್ಪೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 28-29, 2024)
October 28th, 06:30 pm
ಏರ್ ಬಸ್ ಸ್ಪೇನ್ ನ ಸಹಯೋಗದೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ವಡೋದರಾದಲ್ಲಿ ನಿರ್ಮಿಸಿರುವ ಸಿ295 ವಿಮಾನಗಳ ಅಂತಿಮ ಜೋಡಣಾ ವ್ಯವಸ್ಥೆ (ಅಸೆಂಬ್ಲಿ ಲೈನ್) ಘಟಕದ ಜಂಟಿ ಉದ್ಘಾಟನೆ.ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 26th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.