ಜಾರ್ಖಂಡ್ ನ ಟಾಟಾನಗರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

September 15th, 11:30 am

ಜಾರ್ಖಂಡ್ ರಾಜ್ಯಪಾಲ ಶ್ರೀ ಸಂತೋಷ್ ಗಂಗ್ವಾರ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜೀ, ಅನ್ನಪೂರ್ಣ ದೇವಿ ಜೀ ಮತ್ತು ಸಂಜಯ್ ಸೇಠ್ ಜೀ, ಸಂಸದ ವಿದ್ಯುತ್ ಮಹತೋ ಜೀ, ರಾಜ್ಯ ಸರ್ಕಾರದ ಸಚಿವ ಇರ್ಫಾನ್ ಅನ್ಸಾರಿ ಜೀ, ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಜೀ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ಅಧ್ಯಕ್ಷ ಸುದೇಶ್ ಮಹತೋ ಜೀ, ಶಾಸಕರು, ಇತರ ಗೌರವಾನ್ವಿತ ಅತಿಥಿಗಳು, ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ಟಾಟಾನಗರದಲ್ಲಿ 660 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು

September 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್ ನ ಟಾಟಾನಗರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 660 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು 32 ಸಾವಿರ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಇದಕ್ಕೂ ಮುನ್ನ ಶ್ರೀ ನರೇಂದ್ರ ಮೋದಿ ಅವರು ಟಾಟಾನಗರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಆರು ವಂದೇ ಭಾರತ್ ರೈಲುಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.

ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ

September 14th, 09:53 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್‌ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್‌ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.