ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ
October 14th, 05:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಮತ್ತೊಂದು ಸೆಮಿಕಂಡಕ್ಟರ್ (ಅರೆವಾಹಕ) ಘಟಕಕ್ಕೆ ಕ್ಯಾಬಿನೆಟ್ ಅನುಮೋದನೆ
September 02nd, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಗುಜರಾತ್ನ ಸನಂದ್ನಲ್ಲಿ ಅರೆವಾಹಕ ಘಟಕವನ್ನು ಸ್ಥಾಪಿಸುವ ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್ನ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಅರೆವಾಹಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.ಹೂಡಿಕೆ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯ ಚೊಚ್ಚಲ ಸಭೆ ನಡೆಸಿದ ಭಾರತ-ಸೌದಿ ಅರೇಬಿಯಾ
July 28th, 11:37 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಡಾ.ಪಿ.ಕೆ. ಮಿಶ್ರಾ ಮತ್ತು ಸೌದಿ ಇಂಧನ ಸಚಿವ ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಸಹ ಅಧ್ಯಕ್ಷತೆಯಲ್ಲಿ ಹೂಡಿಕೆಗಳ ಕುರಿತ ಭಾರತ-ಸೌದಿ ಅರೇಬಿಯಾ ಉನ್ನತ ಮಟ್ಟದ ಕಾರ್ಯಪಡೆಯ ಮೊದಲ ಸಭೆಯು ಇಂದು ವರ್ಚುವಲ್ ಮಾದರಿಯಲ್ಲಿ ನಡೆಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ
June 17th, 07:44 pm
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಶ್ರೀ.ಜೇಕ್ ಸಲಾವನ್ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 11:30 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜೀ, ರಾಜೀವ್ ಚಂದ್ರಶೇಖರ್ ಜೀ, ಅಸ್ಸಾಂ ಮತ್ತು ಗುಜರಾತ್ ಮುಖ್ಯಮಂತ್ರಿಗಳು, ಟಾಟಾ ಗ್ರೂಪ್ ನ ಅಧ್ಯಕ್ಷ ಶ್ರೀ ಎನ್ ಚಂದ್ರಶೇಖರನ್, ಸಿಜಿ ಪವರ್ ಅಧ್ಯಕ್ಷ ವೆಲ್ಲಯನ್ ಸುಬ್ಬಯ್ಯ ಜೀ ಮತ್ತು ಕೇಂದ್ರ, ರಾಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಇತರ ಎಲ್ಲ ಗಣ್ಯರು. ಮಹಿಳೆಯರೇ ಮತ್ತು ಮಹನೀಯರೇ!'ಇಂಡಿಯಾಸ್ ಟೆಕ್ಡೆ: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ
March 13th, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕ್ಷಿತ್ ಭಾರತ್' ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗುಜರಾತ್ನ ಧೋಲೆರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (ಡಿಎಸ್ಐಆರ್) ಅರೆವಾಹಕ ಫ್ಯಾಬ್ರಿಕೇಷನ್ ಸೌಲಭ್ಯ, ಅಸ್ಸಾಂನ ಮೋರಿಗಾಂವ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಟೆಸ್ಟ್ (ಒಎಸ್ಎಟಿ) ಸೌಲಭ್ಯ ಮತ್ತು ಗುಜರಾತ್ನ ಸನಂದ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಪರೀಕ್ಷೆ (ಒಎಸ್ಎಟಿ) ಸೌಲಭ್ಯವನ್ನು ಇಂದು ಉದ್ಘಾಟಿಸಲಾಯಿತು.ಭಾರತ ಸೆಮಿಕಂಡಕ್ಟರ್ ಮಿಷನ್ ಗೆ ಭಾರೀ ಬೆಂಬಲ: ಇನ್ನೂ ಮೂರು ಸೆಮಿಕಂಡಕ್ಟರ್ ಘಟಕಗಳಿಗೆ ಸಂಪುಟದ ಅನುಮೋದನೆ
February 29th, 03:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಭಾರತದಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್ ಪ್ಲೇ ಅಭಿವೃದ್ಧಿ ಪೂರಕ ವ್ಯವಸ್ಥೆಗಳ ಅಡಿಯಲ್ಲಿ ಮೂರು ಸೆಮಿಕಂಡಕ್ಟರ್ ಘಟಕಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಎಲ್ಲಾ ಮೂರು ಘಟಕಗಳು ಮುಂದಿನ 100 ದಿನಗಳಲ್ಲಿ ನಿರ್ಮಾಣವನ್ನು ಪ್ರಾರಂಭಿಸುತ್ತವೆ.ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 7ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 27th, 10:56 am
ಇಂಡಿಯಾ ಮೊಬೈಲ್ ಕಾಂಗ್ರೆಸ್ ನ ಏಳನೇ ಆವೃತ್ತಿಯಲ್ಲಿ ನಿಮ್ಮೊಂದಿಗೆ ಇರುವುದು ಸ್ವತಃ ಒಂದು ಆಹ್ಲಾದಕರ ಅನುಭವವಾಗಿದೆ. 21 ನೇ ಶತಮಾನದ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ಈ ಘಟನೆಯು ಲಕ್ಷಾಂತರ ಜನರ ಹಣೆಬರಹವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ನಾವು ಭವಿಷ್ಯದ ಬಗ್ಗೆ ಮಾತನಾಡುವ ಸಮಯವಿತ್ತು, ಅದು ಮುಂದಿನ ದಶಕ, ಅಥವಾ 20-30 ವರ್ಷಗಳ ನಂತರ, ಅಥವಾ ಮುಂದಿನ ಶತಮಾನ. ಆದರೆ ಇಂದು, ಪ್ರತಿದಿನ ತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಗಳಿಂದಾಗಿ, ' ಭವಿಷ್ಯವು ಇಲ್ಲಿ ಮತ್ತು ಈಗ ಇದೆ ' ಎಂದು ನಾವು ಹೇಳುತ್ತೇವೆ. ಕೆಲವೇ ನಿಮಿಷಗಳ ಹಿಂದೆ, ನಾನು ಇಲ್ಲಿನ ಪ್ರದರ್ಶನದಲ್ಲಿ ಕೆಲವು ಮಳಿಗೆಗಳಿಗೆ ಭೇಟಿ ನೀಡಿದ್ದೆ. ಈ ಪ್ರದರ್ಶನದಲ್ಲಿ ನಾನು ಅದೇ ಭವಿಷ್ಯವನ್ನು ನೋಡಿದೆ. ಟೆಲಿಕಾಂ, ತಂತ್ರಜ್ಞಾನ, ಸಂಪರ್ಕ, 6 ಜಿ, ಎಐ(ಕೃತಕ ಬುದ್ದಿಮತ್ತೆ), ಸೈಬರ್ ಭದ್ರತೆ, ಅರೆವಾಹಕಗಳು, ಡ್ರೋನ್ ಗಳು, ಬಾಹ್ಯಾಕಾಶ ಕ್ಷೇತ್ರ, ಆಳ ಸಮುದ್ರ ಪರಿಶೋಧನೆ, ಹಸಿರು ತಂತ್ರಜ್ಞಾನ ಅಥವಾ ಇತರ ಕ್ಷೇತ್ರಗಳು ಆಗಿರಲಿ, ಮುಂಬರುವ ಸಮಯವು ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಮತ್ತು ಯುವ ಪೀಳಿಗೆಯು ದೇಶದ ಭವಿಷ್ಯವನ್ನು ಮುನ್ನಡೆಸುತ್ತಿದೆ, ನಮ್ಮ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂಬುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ.ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ(ಐಎಂಸಿ) 7ನೇ ಆವೃತ್ತಿಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿಗಳು
October 27th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ 7ನೇ ಆವೃತ್ತಿಗೆ (ಐಎಂಸಿ-2023) ಚಾಲನೆ ನೀಡಿದರು. ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023ರ ಅಕ್ಟೋಬರ್ 27 ರಿಂದ 29 ರವರೆಗೆ 'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ವಿಷಯಾಧಾರಿತವಾಗಿ ನಡೆಯಲಿದೆ. ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಯೂಸ್ ಕೇಸ್ ಲ್ಯಾಬ್'ಗಳನ್ನು (5ಜಿ ಬಳಕೆ ಪ್ರಯೋಗಾಲಯ) ಪ್ರದಾನ ಮಾಡಿದರು.ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆ ನಾಯಕರ ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 22nd, 10:42 pm
ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.ಬ್ರಿಕ್ಸ್ ವಾಣಿಜ್ಯ ವೇದಿಕೆ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆ
August 22nd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 22 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ವಾಣಿಜ್ಯ ವೇದಿಕೆಯ ನಾಯಕರ ಸಂವಾದದಲ್ಲಿ ಭಾಗವಹಿಸಿದರು.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 21st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.ಭಾರತಕ್ಕೆ ಜರ್ಮನಿಯ ಚಾನ್ಸಲರ್ ಭೇಟಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೀಡಿದ ಪತ್ರಿಕಾ ಹೇಳಿಕೆಯ ಅನುವಾದ
February 25th, 01:49 pm
ನಾನು ನಮ್ಮಮಿತ್ರ ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಆಹ್ವಾನಿಸುತ್ತೇನೆ. ಚಾನ್ಸಲರ್ ಶೋಲ್ಜ್ ಹಲವು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು 2012ರಲ್ಲಿ ಭಾರತಕ್ಕೆ ಮೊದಲು ಭೇಟಿ ನೀಡಿದ್ದಾಗ ಹ್ಯಾಂಬರ್ಗ್ ನ ಮೇಯರ್ ಒಬ್ಬರ ಮೊದಲ ಭೇಟಿಯಾಗಿತ್ತು. ಹಾಗಾಗಿ ಅವರು ಭಾರತ-ಜರ್ಮನಿಯ ಸಂಬಂಧಗಳ ಸಾಮರ್ಥ್ಯವನ್ನು ಬಹಳ ಹಿಂದೆಯೇ ಅರ್ಥೈಸಿಕೊಂಡಿದ್ದಾರೆ.Double engine government is committed to the development of Arunachal Pradesh: PM Modi in Itanagar
November 19th, 09:40 am
PM Modi inaugurated Donyi Polo Airport, Itanagar and dedicated 600 MW Kameng Hydro Power Station to the nation. “Our government worked by considering the villages in the border areas as the first village of the country. This has resulted in making the development of the Northeast a priority for the government,” the PM remarked addressing a gathering at the inaugural event.