ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

November 23rd, 12:45 pm

ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ

November 23rd, 12:30 pm

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರ ಭೂತಾನ್ ಭೇಟಿಯ ಸಫಲತೆ ಪಟ್ಟಿ

November 11th, 06:10 pm

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಸಾಂಸ್ಥಿಕಗೊಳಿಸಲು ಈ ತಿಳಿವಳಿಕೆ ಒಪ್ಪಂದವು ಸಹಕರಿಸುತ್ತದೆ. ಈ ಒಪ್ಪಂದವು ಸೌರಶಕ್ತಿ, ಪವನ ಶಕ್ತಿ, ಜೀವರಾಶಿ, ಇಂಧನ ಸಂಗ್ರಹಣೆ, ಹಸಿರು ಹೈಡ್ರೋಜನ್ ಮತ್ತು ಸಾಮರ್ಥ್ಯ ವರ್ಧನೆ ಮುಂತಾದ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಗುರಿಯನ್ನು ಹೊಂದಿದೆ.

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 08th, 08:30 pm

ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 07th, 11:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್‌ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.

ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

July 07th, 11:13 pm

ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬೊಲಿವಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 07th, 09:19 pm

ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೊಲಿವಿಯಾ ಬಹುರಾಷ್ಟ್ರೀಯ ರಾಜ್ಯದ ಅಧ್ಯಕ್ಷ ಘನತೆವೆತ್ತ ಲೂಯಿಸ್ ಆರ್ಸ್ ಕ್ಯಾಟಕೋರಾ ಅವರನ್ನು ಭೇಟಿ ಮಾಡಿದರು.

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 21st, 07:06 am

ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

June 21st, 06:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

June 16th, 02:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.

ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 15th, 11:10 pm

ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

May 20th, 04:42 pm

ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

May 20th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.

ಚಿಲಿ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಅನುವಾದ

April 01st, 12:31 pm

ಇದು ಅಧ್ಯಕ್ಷ ಬೋರಿಕ್ ಅವರ ಮೊದಲ ಭಾರತ ಭೇಟಿಯಾಗಿದೆ. ಭಾರತದ ಬಗ್ಗೆ ಅವರ ಬಲವಾದ ಸ್ನೇಹ ಪ್ರಜ್ಞೆ ಮತ್ತು ನಮ್ಮ ಸಂಬಂಧಗಳನ್ನು ಬಲಪಡಿಸುವ ಅವರ ಬದ್ಧತೆ ನಿಜವಾಗಿಯೂ ಅದ್ಭುತವಾಗಿದೆ. ಇದಕ್ಕಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಅವರನ್ನು ಮತ್ತು ಅವರ ಗೌರವಾನ್ವಿತ ನಿಯೋಗವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.