ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಮಹಾರಾಷ್ಟ್ರದ ಥಾಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 05th, 04:35 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜಿ, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವೀಸ್ ಜಿ ಮತ್ತು ಶ್ರೀ ಅಜಿತ್ ಪವಾರ್ ಜಿ, ರಾಜ್ಯ ಸರ್ಕಾರದ ಸಚಿವರೇ, ಸಂಸದರೇ, ವಿಧಾನಸಭಾ ಸದಸ್ಯರೇ, ಇತರ ಹಿರಿಯ ಗಣ್ಯರೇ ಮತ್ತು ನನ್ನ ಮಹಾರಾಷ್ಟ್ರದ ಆತ್ಮೀಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಥಾಣೆಯಲ್ಲಿ ಸುಮಾರು 32,800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 05th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಥಾಣೆಯಲ್ಲಿ ಸುಮಾರು 32,800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಅಕ್ಟೋಬರ್ 5ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 04th, 05:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 5 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:15 ರ ಸುಮಾರಿಗೆ ಅವರು ಪೊಹರಾದೇವಿಯ ಜಗದಂಬಾ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ. ವಾಶಿಮ್ ನಲ್ಲಿ ಸಂತ ಸೇವಾಲಾಲ್ ಮಹಾರಾಜ್ ಮತ್ತು ಸಂತ ರಾಮರಾವ್ ಮಹಾರಾಜ್ ಅವರ ಸಮಾಧಿಗಳಿಗೂ ಅವರು ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ಬೆಳಗ್ಗೆ 11.30ಕ್ಕೆ ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಸಾರುವ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ಸುಮಾರು 23,300 ಕೋಟಿ ರೂ.ಗಳ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಮಂತ್ರಿ ಅವರು ಥಾಣೆಯಲ್ಲಿ 32,800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬಿಕೆಸಿ ಮೆಟ್ರೋ ನಿಲ್ದಾಣದಿಂದ ಬಿಕೆಸಿಯಿಂದ ಮುಂಬೈನ ಆರೆ ಜೆವಿಎಲ್ಆರ್ ಗೆ ಚಲಿಸುವ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬಿಕೆಸಿ ಮತ್ತು ಸಾಂತಾಕ್ರೂಜ್ ನಿಲ್ದಾಣಗಳ ನಡುವಿನ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ.