22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ
July 09th, 09:54 pm
1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಮಂತ್ರಿ
July 09th, 08:12 pm
ಕ್ರೆಮ್ಲಿನ್ ನ ಸೇಂಟ್ ಆಂಡ್ರ್ಯೂ ಹಾಲ್ ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ರವರು ಭಾರತ-ರಷ್ಯಾ ಸಂಬಂಧಗಳ ಉತ್ತಮಗೊಳಿಸುವಿಕೆಗೆ ನೀಡಿದ ಕೊಡುಗೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ದಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು 2019ರಲ್ಲಿ ಘೋಷಿಸಲಾಗಿತ್ತು.ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
May 22nd, 12:14 pm
ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.