ಫೆಬ್ರವರಿ 17, ತಮಿಳುನಾಡಿನಲ್ಲಿ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

February 15th, 08:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 17ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮಿಳುನಾಡಿನ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ರಾಷ್ಟ್ರಕ್ಕೆ ಸಮರ್ಪಿಸುವರು. ಪ್ರಧಾನಮಂತ್ರಿ ಅವರು ರಾಮನಾಥಪುರಂ-ತೂತುಕುಡಿ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಮನಲಿಯ ಚೆನ್ನೈ ಪೆಟ್ರೋಲಿಯಂ ನಿಗಮ ನಿಯಮಿತದ ಗ್ಯಾಸೋಲಿನ್ ಡೆಸುಲ್ಫರೈಸೇಷನ್ ಘಟಕವನ್ನು ರಾಷ್ಟ್ರಕ್ಕೆ ಅರ್ಪಿಸುವರು. ಅವರು ನಾಗಪಟ್ಟಣನಲ್ಲಿ ಕಾವೇರಿ ಬೇಸಿನ್ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಈ ಯೋಜನೆಗಳಿಂದ ಭಾರೀ ಪ್ರಮಾಣದಲ್ಲಿ ಸಾಮಾಜಿಕ-ಆರ್ಥಿಕ ಪ್ರಯೋಜನಗಳಾಗುವ ಜೊತೆಗೆ ದೇಶ ಊರ್ಜ ಆತ್ಮನಿರ್ಭರ ಭಾರತ ನಿರ್ಮಾಣ ನಿಟ್ಟಿನಲ್ಲಿ ಸಾಗಲು ಉತ್ತೇಜನ ನೀಡುತ್ತದೆ. ತಮಿಳುನಾಡಿನ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 14th, 11:31 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ

February 14th, 11:30 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.

ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 12th, 06:10 pm

2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.