ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ಟುಟಿಕೋರಿನ್ ಅಂತರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

September 16th, 02:00 pm

ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ಸರ್ಬಾನಂದ ಸೋನೋವಾಲ್ ಜೀ, ಶಾಂತನು ಠಾಕೂರ್ ಜೀ, ತೂತ್ತುಕೋಡಿ ಬಂದರಿನ ಅಧಿಕಾರಿಗಳು ಮತ್ತು ಉದ್ಯೋಗಿಗಳು, ಇತರ ಗೌರವಾನ್ವಿತ ಅತಿಥಿಗಳು , ಸಹೋದರರು ಮತ್ತು ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಟುಟಿಕೋರಿನ್ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಉದ್ಘಾಟನಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು

September 16th, 01:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟುಟಿಕೋರಿನ್ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಉದ್ಘಾಟನಾ ಕಾರ್ಯಕ್ರಮವನ್ನು ವಿಡಿಯೋ ಸಂದೇಶದ ಮೂಲಕ ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತದ ಪಯಣದಲ್ಲಿ ಇಂದು ಮಹತ್ವದ ಮೈಲಿಗಲ್ಲಾಗಿದೆ ಎಂದ ಅವರು ಹೊಸ ಟುಟಿಕೋರಿನ್ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಅನ್ನು 'ಭಾರತದ ಸಾಗರ ಮೂಲಸೌಕರ್ಯದ ಹೊಸ ನಕ್ಷತ್ರ' ಎಂದು ಶ್ಲಾಘಿಸಿದರು. ವಿ.ಓ. ಚಿದಂಬರನಾರ್ ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಅದರ ಪಾತ್ರವನ್ನು ವಿವರಿಸಿದ ಪ್ರಧಾನಿ, “14 ಮೀಟರ್‌ ಗಿಂತಲೂ ಹೆಚ್ಚು ಆಳವಾದ ಡ್ರಾಫ್ಟ್‌ ಮತ್ತು 300 ಮೀಟರ್ ಉದ್ದದ ಬರ್ತ್‌ ನೊಂದಿಗೆ, ಈ ಟರ್ಮಿನಲ್ ವಿ.ಓ. ಚಿದಂಬರನಾರ್ ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೊಸ ಟರ್ಮಿನಲ್ ಬಂದರಿನಲ್ಲಿ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಭಾರತಕ್ಕೆ ವಿದೇಶಿ ವಿನಿಮಯವನ್ನು ಉಳಿಸುತ್ತದೆ ಎಂದು ಅವರು ಹೇಳಿದರು. ಅವರು ಹೊಸ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಗಾಗಿ ತಮಿಳುನಾಡಿನ ಜನತೆಗೆ ಅಭಿನಂದನೆ ಸಲ್ಲಿಸಿದರು ಮತ್ತು ಎರಡು ವರ್ಷಗಳ ಹಿಂದೆ ತಮ್ಮ ಭೇಟಿಯ ಸಮಯದಲ್ಲಿ ಪ್ರಾರಂಭಿಸಲಾದ ವಿ.ಓ. ಚಿದಂಬರನಾರ್ ಬಂದರಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ನೆನಪಿಸಿಕೊಂಡರು. ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಟರ್ಮಿನಲ್‌ ನ ಪ್ರಮುಖ ಸಾಧನೆಗಳಲ್ಲಿ ಒಂದಾದ ಲಿಂಗ ವೈವಿಧ್ಯತೆಯು ಅದರ ಬದ್ಧತೆಯಾಗಿದೆ ಎಂದು ಅವರು ಒತ್ತಿ ಹೇಳಿದರು, 40 ಪ್ರತಿಶತದಷ್ಟು ಉದ್ಯೋಗಿಗಳು ಮಹಿಳೆಯರಾಗಿದ್ದಾರೆ, ಇದು ಸಮುದ್ರ ವಲಯದಲ್ಲಿ ಮಹಿಳಾ ನಾಯಕತ್ವದ ಬೆಳವಣಿಗೆಯನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು.