ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ಮನ್ ಕಿ ಬಾತ್: ‘ಮೇರಾ ಪೆಹ್ಲಾ ವೋಟ್ – ದೇಶ್ ಕೆ ಲಿಯೇ’...ಪ್ರಥಮ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

February 25th, 11:00 am

ನನ್ನ ಪ್ರೀತಿಯ ದೇಶವಾಸಿಗಳಿಗೆ ನಮಸ್ಕಾರ. ‘ಮನದ ಮಾತು’ ೧೧೦ನೇ ಸಂಚಿಕೆಗೆ ಸುಸ್ವಾಗತ. ಎಂದಿನಂತೆ, ಈ ಬಾರಿಯೂ ನಿಮ್ಮ ಸಾಕಷ್ಟು ಸಲಹೆಗಳು, ಮಾಹಿತಿ ಮತ್ತು ಟೀಕೆ ಟಿಪ್ಪಣಿಗಳನ್ನು ನಾವು ಸ್ವೀಕರಿಸಿದ್ದೇವೆ. ಮತ್ತು ಎಂದಿನಂತೆ, ಈ ಬಾರಿಯೂ ಸಹ ಸಂಚಿಕೆಯಲ್ಲಿ ಯಾವ ವಿಷಯಗಳನ್ನು ಸೇರಿಸಬೇಕು ಎಂಬುದು ಸವಾಲಾಗಿದೆ. ನನಗೆ ಧನಾತ್ಮಕತೆಯ ಬಹಳಷ್ಟು ಮಾಹಿತಿ ದೊರೆತಿವೆ. ಇವುಗಳಲ್ಲಿ ಇತರರಿಗೆ ಭರವಸೆಯ ಆಶಾ ಕಿರಣವನ್ನು ಮೂಡಿಸುವ ಮೂಲಕ ಅವರ ಜೀವನ ಸುಧಾರಿಸುವಲ್ಲಿ ಶ್ರಮಿಸುತ್ತಿರುವ ಅನೇಕ ದೇಶವಾಸಿಗಳ ಉಲ್ಲೇಖವಿದೆ.

Chhattisgarh is going to be Congress-free soon: PM Modi in Mungeli

November 13th, 12:00 pm

Ahead of the Assembly Election, PM Modi addressed an emphatic rally in Mungeli, Chhattisgarh. He said, “It is clear in the 1st phase of polling that Chhattisgarh is going to be Congress-free soon.” He added that he is thankful to the youth and the women of the state who voted in favor of the state’s development. PM Modi stated, “Victory for BJP in Chhattisgarh means rapid development, fulfilling dreams of youth, empowerment of women, and an end to rampant corruption.”

PM Modi addresses emphatic election rallies in Mungeli and Mahasamund, Chhattisgarh

November 13th, 11:20 am

Ahead of the Assembly Election, PM Modi addressed two massive public meetings in Mungeli and Mahasamund, Chhattisgarh. He said, “It is clear in the 1st phase of polling that Chhattisgarh is going to be Congress-free soon.” He added that he is thankful to the youth and the women of the state who voted in favor of the state’s development. PM Modi stated, “Victory for BJP in Chhattisgarh means rapid development, fulfilling dreams of youth, empowerment of women, and an end to rampant corruption.”

​​​​​​​ತಾಂಜಾನಿಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ

October 09th, 12:00 pm

ಮೊದಲನೆಯದಾಗಿ, ನಾನು ಅಧ್ಯಕ್ಷರಿಗೆ ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಇದು ತಾಂಜಾನಿಯಾದ ಅಧ್ಯಕ್ಷರಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ. ಆದರೆ ಅವರು ಭಾರತ ಮತ್ತು ಅದರ ಜನರೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ.

15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 23rd, 03:30 pm

15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.

ಜಿ20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

July 28th, 09:01 am

ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ನಗರವಾದ ಚೆನ್ನೈಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ! ಮಾಮಲ್ಲಪುರಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವನ್ನು ಸಂದರ್ಶಿಸಲು ನಿಮಗೆ ಸ್ವಲ್ಪ ಸಮಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಉತ್ತಮ ಸೌಂದರ್ಯದೊಂದಿಗೆ, ಇದೊಂದು ಭೇಟಿ ನೀಡಲೇಬೇಕಾದ ತಾಣವಾಗಿದೆ.

ಚೆನ್ನೈನಲ್ಲಿ `ಜಿ-20 ಪರಿಸರ ಮತ್ತು ಹವಾಮಾನ ಸಚಿವರ ಸಭೆ'ಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

July 28th, 09:00 am

ಚೆನ್ನೈಗೆ ಗಣ್ಯರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈ ನಗರವು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿದೆ ಎಂದರು. ʻಯುನೆಸ್ಕೋʼ ವಿಶ್ವ ಪರಂಪರೆಯ ತಾಣವಾಗಿರುವ ಮಾಮಲ್ಲಪುರಂನ 'ನೋಡಲೇಬೇಕಾದ' ತಾಣವನ್ನು ಅನ್ವೇಷಿಸುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು. ಅಲ್ಲಿನ ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಅದರ ಅದ್ಭುತ ಸೌಂದರ್ಯವನ್ನು ಅನುಭವಿಸುವಂತೆ ಉತ್ತೇಜಿಸಿದರು.

ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ಟೈಮ್ಸ್ ಆಫ್ ಇಂಡಿಯಾ ಸಮೂಹದ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

June 01st, 10:26 am

ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ 'ಟೈಮ್ಸ್ ಆಫ್ ಇಂಡಿಯಾ' ಸಮೂಹದ ಪ್ರಯತ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ನ ಹುಲಿಗೆ ಸಂಬಂಧಪಟ್ಟ ರಾಷ್ಟ್ರಗೀತೆಯ ವಿಡಿಯೋವನ್ನು ಅವರು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.

PM shares highlights from Bandipur and Mudumalai Tiger Reserves

April 09th, 10:31 pm

The Prime Minister has shared highlights from his visit to Bandipur and Mudumalai Tiger Reserves. He also acknowledged the hardwork of all forest officials, guards, tiger reserve frontline staff and everyone else working on tiger conservation.

PM expresses optimism on encouraging numbers of tiger census

April 09th, 10:28 pm

The Prime Minister, Shri Narendra Modi has expressed optimism on the encouraging numbers of tiger census.

ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ದಕ್ಷಿಣ ಪ್ರವಾಸದ ಮುಖ್ಯಾಂಶಗಳು

April 09th, 05:53 pm

ಪಿಎಂ ಮೋದಿ ಅವರ ದಕ್ಷಿಣ ಪ್ರವಾಸವು ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ಮೂರು ರಾಜ್ಯಗಳ ಆಕ್ಷನ್-ಪ್ಯಾಕ್ಡ್ ಪ್ರವಾಸವನ್ನು ಒಳಗೊಂಡಿದೆ. ಅವರು ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸುಮಾರು ರೂ.ಗಳ ವಿವಿಧ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. 19,000 ಕೋಟಿ. ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಬಂಡೀಪುರ ಮತ್ತು ಮುದುಮಲೈ ವನ್ಯಜೀವಿ ಅಭಯಾರಣ್ಯಗಳಿಗೆ ಪ್ರಧಾನಿ ಭೇಟಿ ಈ ಪ್ರವಾಸದ ವಿಶೇಷ ಹೈಲೈಟ್ ಆಗಿದೆ.

​​​​​​​ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

April 09th, 01:00 pm

ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!

ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ

April 09th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.

PM lauds the efforts of tiger conservationists on the occasion of International Tiger Day

July 29th, 02:41 pm

The Prime Minister, Shri Narendra Modi has lauded the efforts of tiger conservationists on the occasion of International Tiger Day

ಅಂತಾರಾಷ್ಟ್ರೀಯ ಹುಲಿ ದಿನದಂದು ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಿ

July 29th, 10:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಶುಭ ಕೋರಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

December 27th, 11:30 am

ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.

ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

December 22nd, 11:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಆಡಳಿತ ಕಟ್ಟಡ ಮತ್ತು ಕಾಲೇಜು ಉದ್ಘಾಟನೆ ವೇಳೆ ಪ್ರಧಾನಿಯವರ ಭಾಷಣದ ಕನ್ನಡ ರೂಪಾಂತರ

August 29th, 12:31 pm

ನಮ್ಮ ದೇಶದ ಕೃಷಿ ಸಚಿವರಾದ ಶ್ರೀ ನರೇಂದ್ರ ಸಿಂಗ್ ಥೋಮರ್ ಅವರೇ, ನನ್ನ ಮಂತ್ರಿ ಮಂಡಳದ ಇತರ ಸಚಿವರುಗಳೇ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಇತರ ಅತಿಥಿಗಳೇ, ಎಲ್ಲ ವಿದ್ಯಾರ್ಥಿ ಮಿತ್ರರೇ ಮತ್ತು ದೇಶದ ವಿವಿಧ ಭಾಗಗಳಿಂದ ವರ್ಚುವಲ್ ಸಮಾರಂಭದಲ್ಲಿ ಸಂಪರ್ಕಿತರಾಗಿರುವ ನನ್ನ ಎಲ್ಲ ಸಹೋದರ ಮತ್ತು ಸಹೋದರಿಯರೇ, ರಾಣಿ ಲಕ್ಷ್ಮೀಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ನೂತನ ಕಾಲೇಜು ಮತ್ತು ಆಡಳಿತ ಕಟ್ಟಡಕ್ಕಾಗಿ ನಾನು ತಮ್ಮೆಲ್ಲರಿಗೂ ನನ್ನ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇಲ್ಲಿಂದ ಪದವಿ ಪಡೆದ ಬಳಿಕ ಯುವ ಸಹೋದ್ಯೋಗಿಗಳು ಕೃಷಿ ಕ್ಷೇತ್ರದ ಸಬಲೀಕರಣಕ್ಕಾಗಿ ಶ್ರಮಿಸಲಿದ್ದಾರೆ.

ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಆಡಳಿತ ಕಟ್ಟಡ ಮತ್ತು ಕಾಲೇಜು ಉದ್ಘಾಟಿಸಿದ ಪ್ರಧಾನಿ

August 29th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರ ಪ್ರದೇಶದ ಝಾನ್ಸಿಯ ರಾಣಿ ಲಕ್ಷ್ಮೀ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಆಡಳಿತ ಕಟ್ಟಡ ಮತ್ತು ಕಾಲೇಜು ಉದ್ಘಾಟಿಸಿದರು. ಅವರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.