ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ

January 18th, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ತಮಿಳುನಾಡಿನಲ್ಲಿ ಹಾಗೂ ಯುವಜನತೆಯ ಕಾರ್ಯಕ್ರಮದೊಂದಿಗೆ 2024 ವರ್ಷವನ್ನು ಪ್ರಾರಂಭಿಸಲು ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ

January 02nd, 05:27 pm

ತಮ್ಮ ಹೊಸ ವರ್ಷವನ್ನು ತಮಿಳುನಾಡಿನಲ್ಲಿ ಮತ್ತು ಯುವಜನತೆಯ ಸಾರ್ವಜನಿಕ ಕಾರ್ಯಕ್ರಮದೊಂದಿಗೆ ಪ್ರಾರಂಭಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 02nd, 12:30 pm

ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

January 02nd, 12:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.

​​​​​​​ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

January 02nd, 11:30 am

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 02nd, 10:59 am

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

2024ರ ಜನವರಿ 2 - 3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ

December 31st, 12:56 pm

2024ರ ಜನವರಿ 2ರಂದು, ಬೆಳಗ್ಗೆ ಸುಮಾರು 10:30 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ತಿರುಚಿರಾಪಳ್ಳಿಗೆ ತಲುಪುತ್ತಾರೆ. ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ವಿಮಾನಯಾನ, ರೈಲು, ರಸ್ತೆ, ತೈಲ ಮತ್ತು ಅನಿಲ, ಹಡಗು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 19,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.