ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ

September 22nd, 12:06 pm

ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.

PM expresses happiness for Ms. Deepali Jhaveri and Mr. Ota on being awarded by Joto Fire Station, Japan

April 06th, 09:47 am

The Prime Minister, Shri Narendra Modi has expressed happiness for Ms. Deepali Jhaveri, an Indian resident in Japan, and Mr. Ota on being awarded by Joto Fire Station for rescuing a man giving him CPR and AED at Dandiya Masti 2022, Tokyo, last October.

ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

September 27th, 04:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದ ನಿಪ್ಪಾನ್ ಬುಡೋಕನ್ ನಲ್ಲಿ ಜಪಾನಿನ ಮಾಜಿ ಪ್ರಧಾನಮಂತ್ರಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಸರ್ಕಾರಗಳ ಮುಖ್ಯಸ್ಥರು ಸೇರಿದಂತೆ 100 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಜಪಾನ್ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 09:54 am

ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫುಮಿಯೋ ಕಿಶಿದಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಭಾರತ – ಜಪಾನ್ ಸಹಭಾಗಿತ್ವವನ್ನು ಬಲಪಡಿಸುವುದಲ್ಲದೇ ಭಾರತ – ಫೆಸಿಫಿಕ್ ವಲಯದಲ್ಲಿ ಸ್ವಾಯತ್ತ, ಮುಕ್ತ ಮತ್ತು ಎಲ್ಲವನ್ನೊಳಗೊಂಡ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮಾಜಿ ಪ್ರಧಾನಿ ಅಬೆ ಅವರು ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಪ್ರಧಾನಿ ಮೋದಿ ಜಪಾನ್‌ನ ಟೋಕಿಯೊಗೆ ಆಗಮಿಸಿದರು

September 27th, 03:49 am

ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಟೋಕಿಯೋಗೆ ಆಗಮಿಸಿದ್ದಾರೆ. ಅವರು ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ರಾಜ್ಯ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಕಿಶಿದಾ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಸರ್ಕಾರಿ ಗೌರವದೊಂದಿಗೆ ನೆರವೇರಲಿರುವ ಜಪಾನಿನ ಮಾಜಿ ಪ್ರಧಾನಮಂತ್ರಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ರಾತ್ರಿ ಟೋಕಿಯೊಗೆ ತೆರಳಲಿರುವ ಪ್ರಧಾನಮಂತ್ರಿ

September 26th, 06:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ಕಾರಿ ಗೌರವದೊಂದಿಗೆ ನೆರವೇರಲಿರುವ ಜಪಾನ್ ನ ಮಾಜಿ ಪ್ರಧಾನಮಂತ್ರಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ರಾತ್ರಿ ಜಪಾನ್ ನ ಟೋಕಿಯೋಗೆ ತೆರಳಲಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ - 2022ಕ್ಕೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳೊಂದಿಗೆ ಜುಲೈ 20ರಂದು ಪ್ರಧಾನ ಮಂತ್ರಿ ಸಂವಾದ

July 18th, 05:06 pm

ಕಾಮನ್‌ವೆಲ್ತ್ ಗೇಮ್ಸ್ (ಸಿಡಬ್ಲ್ಯುಜಿ)-2022ರಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ ನಡೆಸಲಿದ್ದಾರೆ. ಸಂವಾದದಲ್ಲಿ ಇಬ್ಬರು ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ.

44ನೇ ಚೆಸ್ ಒಲಿಂಪಿಯಾಡ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ.

June 19th, 05:01 pm

ಚೆಸ್ ಒಲಿಂಪಿಯಾಡ್‌ನ ಈ ಅಂತರಾಷ್ಟ್ರೀಯ ಸಮಾರಂಭದಲ್ಲಿ ಭಾಗವಹಿಸಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅಧ್ಯಕ್ಷ ಅರ್ಕೇಡಿ ಡ್ವೊರ್ಕೊವಿಚ್, ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷರೇ, ನಾನಾ ದೇಶಗಳ ರಾಯಭಾರಿಗಳೇ, ಹೈಕಮಿಷನರ್‌ಗಳೇ, ಚೆಸ್ ಮತ್ತು ಇತರ ಕ್ರೀಡಾ ಸಂಸ್ಥೆಗಳ ಪ್ರತಿನಿಧಿಗಳೇ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಎಲ್ಲಾ ಇತರೆ ಗಣ್ಯರೇ, ಚೆಸ್ ಒಲಿಂಪಿಯಾಡ್ ತಂಡದ ಸದಸ್ಯರು ಮತ್ತು ಇತರ ಚೆಸ್ ಆಟಗಾರರೇ, ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

PM launches historic torch relay for 44th Chess Olympiad

June 19th, 05:00 pm

Prime Minister Modi launched the historic torch relay for the 44th Chess Olympiad at Indira Gandhi Stadium, New Delhi. PM Modi remarked, We are proud that a sport, starting from its birthplace and leaving its mark all over the world, has become a passion for many countries.”

ಯುನೈಟೆಡ್ ಸ್ಟೇಟ್ ಆಫ್ ಅಮೆರಿಕಾದ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ಸಮಾಲೋಚನೆ

May 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಮೇ 2022ರಂದು ಟೋಕಿಯೋದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಅಧ್ಯಕ್ಷರ ಗೌರವಾನ್ವಿತ ಶ್ರೀ ಜೋಸೆಫ್ ಆರ್ ಬೈಡನ್ ಅವರೊಂದಿಗೆ ಆತ್ಮೀಯ ಮತ್ತು ಫಲಪ್ರದ ಚರ್ಚೆ ನಡೆಸಿದರು. ಈ ಸಭೆಯು ದ್ವಿಪಕ್ಷೀಯ ಪಾಲುದಾರಿಕೆಗೆ ಮತ್ತಷ್ಟು ಆಳ ಮತ್ತು ಚುರುಗೊಳಿಸಲು ಗಣನೀಯ ಫಲಿತಾಂಶಗಳಿಗೆ ಕಾರಣವಾಗಲಿದೆ.

ಭಾರತ ಸರ್ಕಾರ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಸರ್ಕಾರದ ನಡುವೆ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಒಪ್ಪಂದ

May 23rd, 06:25 pm

ಭಾರತ ಸರ್ಕಾರ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಸರ್ಕಾರಗಳು ಜಪಾನ್‌ನ ಟೋಕಿಯೊದಲ್ಲಿ ಇಂದು ಹೂಡಿಕೆ ಪ್ರೋತ್ಸಾಹ ಒಪ್ಪಂದಕ್ಕೆ (ಐಐಎ) ಸಹಿ ಹಾಕಿದವು. ಐಐಎಗೆ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಶ್ರೀ ವಿನಯ್ ಕ್ವಾತ್ರಾ ಮತ್ತು ಅಮೆರಿಕಾದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮ (ಡಿಎಫ್ ಸಿ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಸ್ಕಾಟ್ ನಾಥನ್ ಸಹಿ ಮಾಡಿದರು.

ಭಾರತ- ಪೆಸಿಫಿಕ್ ಆರ್ಥಿಕ ಚೌಕಟ್ಟು ಘೋಷಣೆ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಅನುವಾದ

May 23rd, 05:25 pm

ಇಂದಿನ ಈ ಮಹತ್ವದ ಸಮಾರಂಭದಲ್ಲಿ ನಿಮ್ಮೆಲ್ಲರ ಜೊತೆಗೂಡಿರುವುದು ನನಗೆ ಸಂತೋಷವನ್ನು ಉಂಟು ಮಾಡಿದೆ. ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟಿನ ಪ್ರದೇಶವನ್ನು ಜಾಗತಿಕ ಆರ್ಥಿಕ ಬೆಳವಣಿಗೆಯ ಎಂಜಿನ್‌ ಅನ್ನಾಗಿ ಮಾಡುವ ನಮ್ಮ ಸಾಮೂಹಿಕ ಇಚ್ಛೆಯ ಘೋಷಣೆಯಾಗಿದೆ. ಈ ಪ್ರಮುಖ ಉಪಕ್ರಮಕ್ಕಾಗಿ ನಾನು ಅಧ್ಯಕ್ಷ ಬೈಡೆನ್ ಅವರಿಗೆ ತುಂಬಾ ಧನ್ಯವಾದವನ್ನು ಸಲ್ಲಿಸಲು ಬಯಸುತ್ತೇನೆ. ಇಂಡೋ-ಪೆಸಿಫಿಕ್ ಪ್ರದೇಶವು ಉತ್ಪಾದನೆ, ಆರ್ಥಿಕ ಚಟುವಟಿಕೆ, ಜಾಗತಿಕ ವ್ಯಾಪಾರ ಮತ್ತು ಹೂಡಿಕೆಯ ಕೇಂದ್ರವಾಗಿದೆ. ಶತಮಾನಗಳಿಂದ ಇಂಡೋ-ಪೆಸಿಫಿಕ್ ಪ್ರದೇಶದ ವ್ಯಾಪಾರದ ಹರಿವಿಗೆ ಭಾರತವು ಪ್ರಮುಖ ಕೇಂದ್ರವಾಗಿದೆ ಎಂಬುದಕ್ಕೆ ಇತಿಹಾಸವೇ ಸಾಕ್ಷಿ ಆಗಿದೆ. ಪ್ರಪಂಚದ ಅತ್ಯಂತ ಹಳೆಯ ವಾಣಿಜ್ಯ ಬಂದರು ಭಾರತದ ನನ್ನ ತವರು ರಾಜ್ಯ ಗುಜರಾತ್‌ನ ಲೋಥಾಲ್‌ನಲ್ಲಿತ್ತು ಎಂಬುದು ಉಲ್ಲೇಖಾರ್ಹ. ಆದ್ದರಿಂದ, ಪ್ರದೇಶದ ಆರ್ಥಿಕ ಸವಾಲುಗಳಿಗೆ ನಾವು ಸಾಮಾನ್ಯ ಮತ್ತು ಸೃಜನಾತ್ಮಕ ಪರಿಹಾರಗಳನ್ನು ಕಂಡುಹಿಡಿಯುವುದು ಅತ್ಯಗತ್ಯ.

ಟೋಕಿಯೊದಲ್ಲಿನ ವ್ಯಾಪಾರ ದುಂಡುಮೇಜಿನ ಸಭೆಯ ಅಧ್ಯಕ್ಷ ತೆ ವಹಿಸಿದ ಪ್ರಧಾನಮಂತ್ರಿ

May 23rd, 04:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 23ರಂದು ಟೋಕಿಯೊದಲ್ಲಿಜಪಾನಿನ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷ ತೆ ವಹಿಸಿದ್ದರು.

ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ಚೌಕಟ್ಟನ್ನು ಉದ್ಘಾಟಿಸಲು ನಡೆದ ಕಾರ್ಯಕ್ರಮದಲ್ಲಿಪ್ರಧಾನಮಂತ್ರಿ ಅವರು ಭಾಗವಹಿಸಿದರು

May 23rd, 02:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿಇಂದು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ಚೌಕಟ್ಟು (ಐ.ಪಿ.ಇ.ಎಘ್‌)ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್‌ ಆರ್‌.ಬೈಡೆನ್‌ ಮತ್ತು ಜಪಾನ್‌ ಪ್ರಧಾನಿ ಗೌರವಾನ್ವಿತ ಶ್ರೀ ಕಿಶಿಡಾ ಫುಮಿಯೊ ಮತ್ತು ಇತರ ಪಾಲುದಾರ ರಾಷ್ಟ್ರಗಳಾದ ಆಸ್ಪ್ರೇಲಿಯಾ, ಬ್ರೂನೈ, ಇಂಡೋನೇಷ್ಯಾ, ಕೊರಿಯಾ ಗಣರಾಜ್ಯ, ಮಲೇಷ್ಯಾ, ನ್ಯೂಜಿಲ್ಯಾಂಡ್‌, ಫಿಲಿಪೈನ್ಸ್‌, ಸಿಂಗಾಪುರ, ಥಾಯ್ಲೆಂಡ್‌ ಮತ್ತು ವಿಯೆಟ್ನಾಂನ ನಾಯಕರು ಉಪಸ್ಥಿತರಿದ್ದರು.

ಎನ್‌ಇಸಿ ಕಾರ್ಪೊರೇಶನ್‌ನ ಅಧ್ಯಕ್ಷರಾದ ಡಾ. ನೊಬುಹಿರೊ ಎಂಡೊ ಅವರೊಂದಿಗೆ ಪ್ರಧಾನ ಮಂತ್ರಿಯವರ ಮಾತುಕತೆ

May 23rd, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 23 ಮೇ 2022 ರಂದು ಟೋಕಿಯೊದಲ್ಲಿ ಎನ್‌ಇಸಿ ಕಾರ್ಪೊರೇಶನ್‌ನ ಅಧ್ಯಕ್ಷ ಡಾ. ನೊಬುಹಿರೊ ಎಂಡೊ ಅವರನ್ನು ಭೇಟಿಯಾದರು. ಭಾರತದ ದೂರಸಂಪರ್ಕ ವಲಯದಲ್ಲಿ, ವಿಶೇಷವಾಗಿ ಚೆನ್ನೈ-ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (ಸಿಎಎನ್‌ಐ) ಮತ್ತು ಕೊಚ್ಚಿ-ಲಕ್ಷದ್ವೀಪ ದ್ವೀಪಗಳು (ಕೆಎಲ್‌ಐ) ಒಎಫ್‌ಸಿ ಯೋಜನೆಗಳನ್ನು ಕೈಗೊಳ್ಳುವಲ್ಲಿ ಎನ್‌ಇಸಿ ಸಂಸ್ಥೆಯ ಪಾತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಉತ್ಪಾದಕತೆ ಸಂಬಂಧಿತ ಉತ್ತೇಜನ (ಪಿಎಲ್‌ಐ) ಯೋಜನೆಯಡಿ ಇರುವ ಹೂಡಿಕೆ ಅವಕಾಶಗಳನ್ನು ಅವರು ಎತ್ತಿ ತೋರಿಸಿದರು.

ಜಪಾನ್‌ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

May 22nd, 12:16 pm

ಜಪಾನ್‌ ಪ್ರಧಾನಿ ಘನತೆವೆತ್ತ ಶ್ರೀ ಫುಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ನಾನು 2022ರ ಮೇ 23 ಹಾಗು 24ರಂದು ಜಪಾನಿನ ಟೋಕಿಯೋಗೆ ಭೇಟಿ ನೀಡಲಿದ್ದೇನೆ.

ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

April 24th, 11:30 am

ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.

ದೆಹಲಿಯಲ್ಲಿ ಇಂದಿನಿಂದ 2 ದಿನಗಳ ಕಾಲ ಭಾರತ-ಜಪಾನ್ 14ನೇ ವಾರ್ಷಿಕ ಶೃಂಗಸಭೆ

March 17th, 08:29 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನ ಮಂತ್ರಿ ಶ್ರೀ ಕಿಶಿದಾ ಫುಮಿಯೊ ಅವರು 14ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂದಿನಿಂದ 2 ದಿನಗಳ ಅಧಿಕೃತ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಉಭಯ ನಾಯಕರು ನಡೆಸುತ್ತಿರುವ ಭಾರತದಲ್ಲಿನ ಚೊಚ್ಚಲ ಶೃಂಗಸಭೆ ಇದಾಗಿದೆ. ಈ ಮೊದಲಿನ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ 2018 ಅಕ್ಟೋಬರ್ ನಲ್ಲಿ ಟೋಕಿಯೊದಲ್ಲಿ ಜರುಗಿತ್ತು.

ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ

September 09th, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.

ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!

September 09th, 10:00 am

2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.