ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ಜೈಪುರದ ಖೇಲ್ ಮಹಾಕುಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 05th, 05:13 pm

ಮೊದಲನೆಯದಾಗಿ, ಜೈಪುರ ಮಹಾಖೇಲ್ ಕ್ರೀಟಾಕೂಟದಲ್ಲಿ ಭಾಗವಹಿಸಿದ, ಪದಕಗಳನ್ನು ಗೆದ್ದ ಆಟಗಾರರು ಮತ್ತು ಪ್ರತಿಯೊಬ್ಬ ಆಟಗಾರರು, ತರಬೇತುದಾರರು ಮತ್ತು ಅವರ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಜೈಪುರದ ಆಟದ ಮೈದಾನಕ್ಕೆ ಬಂದಿರುವುದು ಕೇವಲ ಆಟವಾಡಲು ಅಲ್ಲ ಗೆಲ್ಲಲು ಮತ್ತು ಕಲಿಯಲು. ಮತ್ತು, ಕಲಿಕೆ ಇರುವಲ್ಲಿ, ಗೆಲುವು ತಾನೇತಾನಾಗಿ ಖಚಿತವಾಗುತ್ತದೆ. ಯಾವುದೇ ಆಟಗಾರನು ಸ್ಪರ್ಧೆಯಿಂದ ಬರಿಗೈಯಲ್ಲಿ ಹಿಂತಿರುಗುವುದಿಲ್ಲ.

ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು

February 05th, 12:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಇಂದು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಕಬ್ಬಡಿ ಪಂದ್ಯವನ್ನು ವೀಕ್ಷಿಸಿದರು. ಜೈಪುರ ಗ್ರಾಮಾಂತರದ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2017 ರಿಂದ ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಆಯೋಜಿಸುತ್ತಿದ್ದಾರೆ.

ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರ: ಹಿಮಾಚಲ ಪ್ರದೇಶದ ಸುಂದರ್ ನಗರದಲ್ಲಿ ಪ್ರಧಾನಿ ಮೋದಿ

November 05th, 05:00 pm

ಇಂದು ಪ್ರಧಾನಿ ನರೇಂದ್ರ ಮೋದಿ; ಹಿಮಾಚಲ ಪ್ರದೇಶದ ಸುಂದರ್ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂಡಿಯಿಂದಲೇ ಮೊದಲ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಮಂಡಿ ಜನತೆಗೆ ನೀಡಿದ ಭರವಸೆಯನ್ನು ಎತ್ತಿ ಹಿಡಿಯುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು. ಹವಾಮಾನ ವೈಪರೀತ್ಯದಿಂದಾಗಿ ಈ ಹಿಂದೆ ಮಂಡಿಯ ಜನರನ್ನು ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಸುಂದರ್ ನಗರ ಮತ್ತು ಸೋಲನ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

November 05th, 04:57 pm

ಇಂದು ಪ್ರಧಾನಿ ನರೇಂದ್ರ ಮೋದಿ; ಹಿಮಾಚಲ ಪ್ರದೇಶದ ಸುಂದರ್ ನಗರ ಮತ್ತು ಸೋಲನ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಹಿಮಾಚಲ ಪ್ರದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಕುರಿತು ಪ್ರಧಾನಿ ಮಾತನಾಡಿದರು.

ಕಾಮನ್‌ವೆಲ್ತ್ ಗೇಮ್ಸ್ - 2022ಕ್ಕೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳೊಂದಿಗೆ ಜುಲೈ 20ರಂದು ಪ್ರಧಾನ ಮಂತ್ರಿ ಸಂವಾದ

July 18th, 05:06 pm

ಕಾಮನ್‌ವೆಲ್ತ್ ಗೇಮ್ಸ್ (ಸಿಡಬ್ಲ್ಯುಜಿ)-2022ರಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ ನಡೆಸಲಿದ್ದಾರೆ. ಸಂವಾದದಲ್ಲಿ ಇಬ್ಬರು ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಪಾಲ್ಗೊಳ್ಳಲಿದ್ದಾರೆ.

44ನೇ ಚೆಸ್ ಒಲಿಂಪಿಯಾಡ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ.

June 19th, 05:01 pm

ಚೆಸ್ ಒಲಿಂಪಿಯಾಡ್‌ನ ಈ ಅಂತರಾಷ್ಟ್ರೀಯ ಸಮಾರಂಭದಲ್ಲಿ ಭಾಗವಹಿಸಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅಧ್ಯಕ್ಷ ಅರ್ಕೇಡಿ ಡ್ವೊರ್ಕೊವಿಚ್, ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷರೇ, ನಾನಾ ದೇಶಗಳ ರಾಯಭಾರಿಗಳೇ, ಹೈಕಮಿಷನರ್‌ಗಳೇ, ಚೆಸ್ ಮತ್ತು ಇತರ ಕ್ರೀಡಾ ಸಂಸ್ಥೆಗಳ ಪ್ರತಿನಿಧಿಗಳೇ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಎಲ್ಲಾ ಇತರೆ ಗಣ್ಯರೇ, ಚೆಸ್ ಒಲಿಂಪಿಯಾಡ್ ತಂಡದ ಸದಸ್ಯರು ಮತ್ತು ಇತರ ಚೆಸ್ ಆಟಗಾರರೇ, ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

PM launches historic torch relay for 44th Chess Olympiad

June 19th, 05:00 pm

Prime Minister Modi launched the historic torch relay for the 44th Chess Olympiad at Indira Gandhi Stadium, New Delhi. PM Modi remarked, We are proud that a sport, starting from its birthplace and leaving its mark all over the world, has become a passion for many countries.”

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಸಂದೇಶದ ಕನ್ನಡ ಅನುವಾದ

April 24th, 06:31 pm

ಬೆಂಗಳೂರು ನಗರವೇ ದೇಶದ ಯುವಕರ ಅಸ್ಮಿತೆಯಾಗಿದೆ. ಬೆಂಗಳೂರು ವೃತ್ತಿಪರರ ಹೆಮ್ಮೆಯಾಗಿದೆ. ಡಿಜಿಟಲ್ ಇಂಡಿಯಾ ಕೇಂದ್ರವಾದ ಬೆಂಗಳೂರಿನಲ್ಲಿ ಖೇಲೋ ಇಂಡಿಯಾವನ್ನು ಸಂಘಟಿಸುವುದು ಬಹಳ ಮಹತ್ವದ್ದಾಗಿದೆ. ನವೋದ್ಯಮಗಳ ಜಗತ್ತಿನಲ್ಲಿ ಕ್ರೀಡೆಗಳ ಈ ಸಮ್ಮಿಳನವು ನಿಜವಾಗಿಯೂ ಅದ್ಭುತವಾಗಿದೆ! ಬೆಂಗಳೂರಿನಲ್ಲಿ ನಡೆಯುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಈ ಸುಂದರ ನಗರದ ಶಕ್ತಿಯನ್ನು ಆಗಾಧಗೊಳಿಸುತ್ತದೆ ಮತ್ತು ದೇಶದ ಯುವಕರು ಸಹ ಹೊಸ ಉತ್ಸಾಹದೊಂದಿಗೆ ಮರಳಲಿದ್ದಾರೆ. ಈ ಆಟಗಳನ್ನು ಆಯೋಜಿಸಿದ್ದಕ್ಕಾಗಿ ನಾನು ಕರ್ನಾಟಕ ಸರ್ಕಾರವನ್ನು ಅಭಿನಂದಿಸುತ್ತೇನೆ. ಜಾಗತಿಕ ಸಾಂಕ್ರಾಮಿಕ ರೋಗದ ಎಲ್ಲಾ ಸವಾಲುಗಳ ನಡುವೆ, ಈ ಆಟವು ಭಾರತದ ಯುವಕರ ದೃಢ ನಿರ್ಧಾರ ಮತ್ತು ಉತ್ಸಾಹಕ್ಕೆ ಉದಾಹರಣೆಯಾಗಿದೆ. ನಿಮ್ಮ ಪ್ರಯತ್ನ ಮತ್ತು ಧೈರ್ಯಕ್ಕೆ ನಾನು ವಂದಿಸುತ್ತೇನೆ. ಇಂದು ಈ ಯೌವ್ವನದ ಮನೋಭಾವವು ದೇಶವನ್ನು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ವೇಗದಲ್ಲಿ ಮುನ್ನಡೆಸುತ್ತಿದೆ.

ʻಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟʼ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಸಂದೇಶ

April 24th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ’ದ ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. ಭಾರತದ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯನಾಯ್ಡು ಅವರು ಇಂದು ಬೆಂಗಳೂರಿನಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಮೋದಿಯವರ ಮೆಚ್ಚುಗೆ ತನಗೆ ಹೇಗೆ ಸ್ಫೂರ್ತಿ ನೀಡುತ್ತದೆ ಎಂಬುದರ ಕುರಿತು ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಮಾತನಾಡಿದ್ದಾರೆ

March 29th, 01:51 pm

ಪಿವಿ ಸಿಂಧು ಅವರು ವೀಡಿಯೊವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ನಿರಂತರ ಬೆಂಬಲ ಮತ್ತು ಮೆಚ್ಚುಗೆಯು ದೇಶಕ್ಕಾಗಿ ಹೆಚ್ಚಿನದನ್ನು ಮಾಡಲು ಹೇಗೆ ಸ್ಫೂರ್ತಿಯಾಗಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ. ಅವರು 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಮೊದಲು ಮತ್ತು ನಂತರ ಮತ್ತು ಪದ್ಮಭೂಷಣವನ್ನು ಸ್ವೀಕರಿಸುವಾಗ ಪಿಎಂ ಮೋದಿಯೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು ಮತ್ತು ಅವರನ್ನು 'ಅತ್ಯಂತ ಸ್ಮರಣೀಯ' ಎಂದು ಕರೆದರು.

ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ

March 12th, 06:40 pm

ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.

ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 02nd, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

January 02nd, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ಜನರಿಗೆ ಪ್ರಧಾನಮಂತ್ರಿ ಕರೆ

September 19th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಉಡುಗೊರೆ ಮತ್ತು ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಆ ಹರಾಜಿನಿಂದ ಬಂದ ಹಣವನ್ನು ನಮಾಮಿ ಗಂಗಾ ಉಪಕ್ರಮಕ್ಕೆ ಬಳಸಲಾಗುವುದು ಎಂದು ಹೇಳಿದ್ದಾರೆ.

ಶಿಕ್ಷಕ್ ಪರ್ವ್ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 07th, 10:31 am

ಶಿಕ್ಷಕ ಪರ್ವದ ಈ ಪ್ರಮುಖ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಸೇರಿರುವ, ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಧರ್ಮೇಂದ್ರ ಪ್ರಧಾನ್ ಜೀ, ಶ್ರೀಮತಿ ಅನ್ನಪೂರ್ಣ ದೇವಿ ಜೀ, ಡಾ. ಸುಭಾಷ್ ಸರ್ಕಾರ್ ಜೀ, ಡಾ. ರಾಜಕುಮಾರ್ ರಂಜನ್ ಸಿಂಗ್ ಜೀ, ದೇಶದ ವಿವಿಧ ರಾಜ್ಯಗಳ ಗೌರವಾನ್ವಿತ ಶಿಕ್ಷಣ ಸಚಿವರೇ, ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಯಾರಿಸಿದ ಸಮಿತಿಯ ಅಧ್ಯಕ್ಷರಾಗಿರುವ ಡಾ. ಕಸ್ತೂರಿ ರಂಗನ್ ಜೀ ಅವರೇ, ಅವರ ತಂಡದ ಎಲ್ಲಾ ಗೌರವಾನ್ವಿತ ಸದಸ್ಯರೇ, ಎಲ್ಲಾ ಪ್ರಾಂಶುಪಾಲರೇ, ಶಿಕ್ಷಕರೇ ಮತ್ತು ದೇಶದ ವಿವಿಧೆಡೆಯ ವಿದ್ಯಾರ್ಥಿಗಳೇ!.

`ಶಿಕ್ಷಕ್ ಪರ್ವ’ದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 07th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಡೆದ ʻಶಿಕ್ಷಕ್ ಪರ್ವ್ʼ ಉದ್ಘಾಟನಾ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಭಾರತೀಯ ಸಂಜ್ಞೆ ಭಾಷಾ ನಿಘಂಟು (ಶ್ರವಣ ದೋಷವುಳ್ಳವರಿಗೆ ಸಾರ್ವತ್ರಿಕ ಕಲಿಕಾ ವಿನ್ಯಾಸಕ್ಕೆ ಅನುಗುಣವಾಗಿ ಆಡಿಯೋ ಮತ್ತು ಪಠ್ಯ ಸಂಯೋಜಿತ ಸಂಜ್ಞೆ ಭಾಷೆಯ ವೀಡಿಯೊ), ಟಾಕಿಂಗ್ ಬುಕ್ಸ್ (ದೃಷ್ಟಿಹೀನರಿಗೆ ಆಡಿಯೋಬುಕ್‌ಗಳು) ಅನ್ನು ಪ್ರಧಾನಿ ಬಿಡುಗಡೆ ಮಾಡಿದರು. ಇದೇ ವೇಳೆ ʻಸಿಬಿಎಸ್‌ಇʼಯ ಶಾಲಾ ಗುಣಮಟ್ಟ ಭರವಸೆ ಮತ್ತು ಮೌಲ್ಯಮಾಪನ ಚೌಕಟ್ಟು, ʻನಿಪುಣ್‌ ಭಾರತ್ʼ ಮತ್ತು ʻವಿದ್ಯಾಂಜಲಿʼ ಪೋರ್ಟಲ್‌ಗಾಗಿ ʻನಿಷ್ಠಾʼ ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೂ (ಶಾಲಾ ಅಭಿವೃದ್ಧಿಗಾಗಿ ಶಿಕ್ಷಣ ಸ್ವಯಂಸೇವಕರು / ದಾನಿಗಳು / ಸಿಎಸ್ಆರ್ ಕೊಡುಗೆದಾರರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ) ಚಾಲನೆ ನೀಡಿದರು.

ಭಾರತೀಯ ಕ್ರೀಡಾ ಇತಿಹಾಸದಲ್ಲಿ, ಟೋಕಿಯೋ ಪ್ಯಾರಾಲಿಂಪಿಕ್ಸ್ ಗೆ ಸದಾ ವಿಶೇಷ ಸ್ಥಾನ ಇರುತ್ತದೆ: ಪ್ರಧಾನಮಂತ್ರಿ

September 05th, 04:21 pm

ಭಾರತದ ಕ್ರೀಡಾ ಇತಿಹಾಸದಲ್ಲಿ ಟೋಕಿಯೋ ಪ್ಯಾರಾಲಿಂಪಿಕ್ಸ್ ಗೆ ಸದಾ ವಿಶೇಷ ಸ್ಥಾನ ಇರುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ನಮ್ಮ ತಂಡದಲ್ಲಿದ್ದ ಎಲ್ಲ ಸದಸ್ಯರೂ ಚಾಂಪಿಯನ್ನರಷ್ಟೇ ಅಲ್ಲ, ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ಅವರು ಹೇಳಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಗರಾಜ್ ಅಧಾನಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ

September 04th, 10:54 am

ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಗರಾಜ್ ಅಧಾನ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.