
PM pays tribute to the resilience of Partition survivors on Partition Horrors Remembrance Day
August 14th, 08:52 am
Prime Minister Shri Narendra Modi today observed Partition Horrors Remembrance Day, solemnly recalling the immense upheaval and pain endured by countless inpiduals during one of the most tragic chapters in India’s history.
ದೇಶಭಕ್ತ ಭಾರತೀಯರ ಶೌರ್ಯಕ್ಕೆ ಕಾಕೋರಿಯ ಶತಮಾನೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ
August 09th, 02:59 pm
ಕಾಕೋರಿ ಘಟನೆಯ 100ನೇ ವರ್ಷಾಚರಣೆಯ ಅಂಗವಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಭಾರತೀಯರ ಶೌರ್ಯ ಮತ್ತು ದೇಶಭಕ್ತಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ಸಲ್ಲಿಸಿದ್ದಾರೆ.
ಪಿಂಗಲಿ ವೆಂಕಯ್ಯ ಅವರ ಜನ್ಮದಿನದಂದು ಅವರಿಗೆ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ
August 02nd, 02:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಪಿಂಗಲಿ ವೆಂಕಯ್ಯ ಅವರ ಜನ್ಮ ದಿನದಂದು ಅವರಿಗೆ ಗೌರವ ಸಲ್ಲಿಸಿದರು, ಅವರು ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ನೀಡುವಲ್ಲಿ ಅವರ ಪಾತ್ರಕ್ಕಾಗಿ ಸ್ಮರಣೀಯರು. #HarGharTiranga ಅಭಿಯಾನ ಬಲಪಡಿಸಲು ಮತ್ತು ತ್ರಿವರ್ಣ ಧ್ವಜ ಹಾರಿಸಲು ಜನರನ್ನು ಪ್ರೇರೇಪಿಸುತ್ತಾ, ಶ್ರೀ ಮೋದಿ ಅವರು ತ್ರಿವರ್ಣ ಧ್ವಜದೊಂದಿಗೆ ತಮ್ಮ ಸೆಲ್ಫಿ ಅಥವಾ ಫೋಟೋಗಳನ್ನು harghartiranga.com ನಲ್ಲಿ ಹಂಚಿಕೊಳ್ಳಲು ಮನವಿ ಮಾಡಿದರು.ಪ್ರಧಾನಮಂತ್ರಿ ಅವರು ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಗೌರವ ಸಮರ್ಪಿಸಿದರು
July 31st, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತ ಮಾತೆಯ ಅಮರ ಪುತ್ರ ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಅವರಿಗೆ ಗೌರವ ಸಮರ್ಪಿಸಿದರು.ಪ್ರಧಾನಮಂತ್ರಿ ಅವರು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ನಿಮಿತ್ತ ಅವರಿಗೆ ಗೌರವ ಸಮರ್ಪಿಸಿದರು
July 23rd, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ನಿಮಿತ್ತ ಅವರಿಗೆ ಗೌರವ ಸಮರ್ಪಿಸಿದರು. “ಭಾರತದ ಸ್ವಾತಂತ್ರ್ಯ ಪಯಣದಲ್ಲಿ ಅವರ ಪಾತ್ರ ಬಹಳ ಮೌಲ್ಯಯುತವಾಗಿದೆ ಹಾಗೂ ನ್ಯಾಯದ ಪರ ಧೈರ್ಯ ಮತ್ತು ದೃಢ ನಂಬಿಕೆಯಿಂದ ನಿಲ್ಲಲು ಯುವಜನರಿಗೆ ಪ್ರೇರೇಪಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಪ್ರಧಾನಮಂತ್ರಿ ಅವರು ಲೋಕಮಾನ್ಯ ತಿಲಕ್ ಜಯಂತಿಯಂದು ಗೌರವ ನಮನ ಸಲ್ಲಿಸಿದರು
July 23rd, 09:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಗೌರವ ನಮನ ಸಲ್ಲಿಸಿದರು. ಅವರು ಅಚಲ ಸಂಕಲ್ಪದಿಂದ ಭಾರತದ ಸ್ವಾತಂತ್ರ್ಯ ಚಳುವಳಿಯ ಕಿಚ್ಚನ್ನು ಹೊತ್ತಿಸಿದ ಪ್ರವರ್ತಕ ನಾಯಕರಾಗಿದ್ದರು ಎಂದು ಶ್ರೀ ಮೋದಿ ಹೇಳಿದ್ದಾರೆ.ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ
July 19th, 09:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಬ್ರಿಟಿಷ್ ಆಡಳಿತವನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧ ಎಂದು ಶ್ರೀ ಪಾಂಡೆಯವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿ ಶ್ಲಾಘಿಸಿದರು.ರಾಮ್ ವಿಲಾಸ್ ಪಾಸ್ವಾನ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು
July 05th, 08:00 pm
ಕೇಂದ್ರ ಸರ್ಕಾರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜಯಂತಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಸಮಾಜದ ದೀನದಲಿತರು, ಹಿಂದುಳಿದ ವರ್ಗಗಳು ಮತ್ತು ಸವಲತ್ತುಗಳ ವಂಚಿತರ ಹಕ್ಕುಗಳಿಗೆ ರಾಮ್ ವಿಲಾಸ್ ಪಾಸ್ವಾನ್ ಅವರ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳು ಸ್ಮರಿಸಿದ್ದಾರೆ.ಅಕ್ರಾದ ನುಕ್ರುಮಾ ಸ್ಮಾರಕ ಉದ್ಯಾನವನದಲ್ಲಿ ಪ್ರಧಾನಮಂತ್ರಿ ಗೌರವ ನಮನ
July 03rd, 03:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘಾನಾ ರಾಷ್ಟ್ರದ ಅಕ್ರಾದಲ್ಲಿರುವ ನುಕ್ರುಮಾ ಸ್ಮಾರಕ ಉದ್ಯಾನವನಕ್ಕೆ ಭೇಟಿ ನೀಡಿ, ಘಾನಾದ ಸಂಸ್ಥಾಪಕ ಅಧ್ಯಕ್ಷರು ಮತ್ತು ಆಫ್ರಿಕಾದ ಸ್ವಾತಂತ್ರ್ಯ ಚಳವಳಿಯ ನೇತಾರರಾದ ಡಾ. ಕ್ವಾಮೆ ನುಕ್ರುಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಘಾನಾದ ಉಪಾಧ್ಯಕ್ಷರಾದ ಮಾನ್ಯ ಪ್ರೊ. ನಾನಾ ಜೇನ್ ಒಪೊಕು-ಅಗ್ಯೆಮಾಂಗ್ ಅವರು ಪ್ರಧಾನಮಂತ್ರಿ ಅವರ ಜೊತೆಗಿದ್ದರು. ಸ್ವಾತಂತ್ರ್ಯ, ಏಕತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಡಾ. ಉನ್ ಕ್ರುಮಾ ಅವರ ದೀರ್ಘಕಾಲ ಉಳಿಯುವ ಕೊಡುಗೆಗಳ ಗೌರವಾರ್ಥ ಪ್ರಧಾನಮಂತ್ರಿ ಅವರು ಪುಷ್ಪಗುಚ್ಛವನ್ನಿರಿಸಿ ಒಂದು ಕ್ಷಣ ಮೌನ ಆಚರಿಸಿದರು.ಹುಲ್ ದಿವಸದ ಸಂದರ್ಭದಲ್ಲಿ ಬುಡಕಟ್ಟು ವೀರರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
June 30th, 02:28 pm
ಹುಲ್ ದಿವಸದ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಬುಡಕಟ್ಟು ಸಮುದಾಯದ ಅದಮ್ಯ ಧೈರ್ಯ ಮತ್ತು ಅಸಾಧಾರಣ ಶೌರ್ಯಕ್ಕೆ ಹೃತ್ಪೂರ್ವಕವಾಗಿ ಗೌರವ ಸಲ್ಲಿಸಿದರು. ಐತಿಹಾಸಿಕವಾದ ಸಂತಾಲ್ ದಂಗೆಯನ್ನು ಸ್ಮರಿಸುವ ಮೂಲಕ, ಪ್ರಧಾನ ಮಂತ್ರಿಯವರು ಪೂಜ್ಯ ಸ್ವಾತಂತ್ರ್ಯ ಹೋರಾಟಗಾರರಾದ ಸಿಡೋ-ಕನ್ಹು, ಚಾಂದ್-ಭೈರವ ಮತ್ತು ಫುಲೋ-ಜಾನೋ ಅವರ ಪರಂಪರೆಯನ್ನು ಮುಂದುವರೆಸಿ ವಸಾಹತುಶಾಹಿ ದಬ್ಬಾಳಿಕೆಯನ್ನು ಧಿಕ್ಕರಿಸಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಅಸಂಖ್ಯಾತ ಇತರ ಧೈರ್ಯಶಾಲಿ ಬುಡಕಟ್ಟು ಹುತಾತ್ಮರಿಗೂ ಗೌರವಸಲ್ಲಿಸಿದರು.ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
June 28th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಪ್ರಧಾನಮಂತ್ರಿ ಗೌರವ ನಮನ
June 23rd, 09:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಅವರಿಗೆ ಗೌರವ ನಮನ ಸಮರ್ಪಿಸಿದರು.ಸಂತ ಕಬೀರ ದಾಸ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
June 11th, 10:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ಕಬೀರ ದಾಸ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಸಾಮಾಜಿಕ ಸಾಮರಸ್ಯ ಮತ್ತು ಸುಧಾರಣೆಗೆ ಕಬೀರದಾಸರು ತಮ್ಮ ಜೀವನ ಮುಡಿಪಾಗಿಟ್ಟಿದ್ದರು ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.ಭಗವಾನ್ ಬಿರ್ಸಾ ಮುಂಡಾ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
June 09th, 01:30 pm
ಇಂದು ಹುತಾತ್ಮರ ದಿನದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಮಹಾರಾಣಾ ಪ್ರತಾಪ್ ಜಯಂತಿ ಪ್ರಯುಕ್ತ ಪ್ರಧಾನಮಂತ್ರಿಗಳಿಂದ ಗೌರವ ಸಲ್ಲಿಕೆ
May 09th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಯೋಧ ಮಹಾರಾಣಾ ಪ್ರತಾಪ್ ಅವರ ಜಯಂತಿಯಂದು ಅವರಿಗೆ ಅತ್ಯಂತ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ಮಂಗಳಕರವಾದ ಪರ್ಕಾಶ್ ಪುರಬ್ ನ ಸುಸಂದರ್ಭದಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 18th, 12:26 pm
ಪ್ರಧಾನಮಂತ್ರಿಯವರು ಇಂದು ಮಂಗಳಕರವಾದ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದರು. ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಅಚಲವಾಗಿ ನಿರತರಾಗಿದ್ದ ಶ್ರೀ ಗುರು ತೇಗ್ ಬಹದ್ದೂರ್ ಅವರ ಜೀವನವು ಧೈರ್ಯ ಮತ್ತು ಸಹಾನುಭೂತಿಯ ಸೇವೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಗೌರವ ನಮನ
April 14th, 09:16 am
ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವ ನಮನ ಸಲ್ಲಿಸಿದರು. ಬಾಬಾಸಾಹೇಬ್ ಅವರ ತತ್ವಗಳು ಮತ್ತು ಆದರ್ಶಗಳು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ದೃಢತೆ ಮತ್ತು ವೇಗವನ್ನು ನೀಡಲಿವೆ ಎಂದು ಅವರು ಹೇಳಿದರು.ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಪ್ರಯುಕ್ತ, ಪ್ರಧಾನಮಂತ್ರಿಯಿಂದ ಗೌರವ ನಮನ
April 05th, 09:04 am
ಇಂದು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.