ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.