3 ನೇ ವಾಯ್ಸ್ ಆಫ್ ಗ್ಲೋಬಲ್ ಶೃಂಗಸಭೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಸಮಾರೋಪ ಭಾಷಣದ ಇಂಗ್ಲೀಷ್ ಅನುವಾದ
August 17th, 12:00 pm
ನಿಮ್ಮ ಮೌಲ್ಯಯುತ ಚಿಂತನೆಗಳು ಮತ್ತು ಸಲಹೆಗಳಿಗೆ ಕೃತಜ್ಞನಾಗಿದ್ದೇನೆ. ನೀವೆಲ್ಲರೂ ನಮ್ಮ ಸಾಮಾನ್ಯ ಕಳವಳ ಮತ್ತು ನಿರೀಕ್ಷೆಗಳ ಬಗ್ಗೆ ಬೆಳಕು ಚೆಲ್ಲಿದ್ದೀರಿ. ನಿಮ್ಮ ಅಭಿಪ್ರಾಯಗಳಿಂದ ಜಾಗತಿಕ ದಕ್ಷಿಣ ವಲಯ ಏಕತೆಯಿಂದ ಇದೆ ಎಂಬುದು ಸ್ಪಷ್ಟವಾಗಿದೆ. ನಿಮ್ಮ ಸಲಹೆಗಳು ನಮ್ಮ ಸಮಗ್ರ ಪಾಲ್ಗೊಳ್ಳುವಿಕೆಯನ್ನು ಪ್ರತಿಬಿಂಬಿಸಿದೆ. ಇಂದು ನಮ್ಮ ಚರ್ಚೆಗಳು ನಾವು ಪರಸ್ಪರ ಅರ್ಥಮಾಡಿಕೊಂಡು ಮುನ್ನಡೆಯಲು ಶಿಲಾನ್ಯಾಸ ನೆರವೇರಿಸಿದಂತಾಗಿದೆ. ನಮ್ಮ ಸಾಮಾನ್ಯ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಇದು ತಮಗೆಲ್ಲರಿಗೂ ದೊರೆತ ಅವಕಾಶವಾಗಿದೆ ಎಂಬ ವಿಶ್ವಾಸ ತಮ್ಮದಾಗಿದೆ.ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್ ಅವತರಿಣಿಕೆ
August 17th, 10:00 am
ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.