ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 19th, 11:32 pm
ನಿಮ್ಮೆಲ್ಲರೊಂದಿಗೆ ಮಾತನಾಡುವುದನ್ನು ನಾನು ನಿಜವಾಗಿಯೂ ಆನಂದಿಸಿದೆ. ದೇಶ ಎದುರಿಸುತ್ತಿರುವ ಪ್ರಸ್ತುತ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸಲು ದೇಶದ ಯುವ ಪೀಳಿಗೆ ಹಗಲು ರಾತ್ರಿ ಶ್ರಮಿಸುತ್ತಿದೆ ಎಂದು ನನಗೆ ಸಂತೋಷವಾಗಿದೆ. ಹಿಂದಿನ ಹ್ಯಾಕಥಾನ್ ಗಳಿಂದ ಪಡೆದ ಪರಿಹಾರಗಳು ತುಂಬಾ ಪರಿಣಾಮಕಾರಿಯಾಗಿವೆ. ಹ್ಯಾಕಥಾನ್ ಗಳಲ್ಲಿ ಭಾಗವಹಿಸಿದ ಅನೇಕ ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ ಅಪ್ ಗಳನ್ನು ಸಹ ಪ್ರಾರಂಭಿಸಿದ್ದಾರೆ. ಈ ಸ್ಟಾರ್ಟ್ ಅಪ್ ಗಳು ಮತ್ತು ಪರಿಹಾರಗಳು ಸರ್ಕಾರ ಮತ್ತು ಸಮಾಜಕ್ಕೆ ಸಹಾಯ ಮಾಡುತ್ತಿವೆ. ಇಂದು ಈ ಹ್ಯಾಕಥಾನ್ ನಲ್ಲಿ ಭಾಗವಹಿಸುವ ತಂಡಗಳು ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಪ್ರಧಾನಿ ಭಾಷಣ
December 19th, 09:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.ದೀಪಾವಳಿಯ ಶುಭ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳು ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ: ಪ್ರಧಾನಮಂತ್ರಿ
November 10th, 03:03 pm
ಹಲವಾರು ಸರ್ಕಾರಿ ಯೋಜನೆಗಳು ದೀಪಾವಳಿ ಶುಭ ಸಂದರ್ಭದಲ್ಲಿ ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಅವರು ಗೂಗಲ್ ಸಿ.ಇ.ಒ. ಶ್ರೀ ಸುಂದರ್ ಪಿಚೈ ಅವರೊಂದಿಗೆ ಸಂವಾದ ನಡೆಸಿದರು
October 16th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಗೂಗಲ್ ಮತ್ತು ಆಲ್ಫಾಬೆಟ್ ಸಿ.ಇ.ಒ. ಶ್ರೀ ಸುಂದರ್ ಪಿಚೈ ಅವರೊಂದಿಗೆ ವಿಡಿಯೊ ಮೂಲಕ (ವಾಸ್ತವಿಕವಾಗಿ ) ಸಂವಾದ ನಡೆಸಿದರು.ಪ್ರಧಾನಿ ನರೇಂದ್ರ ಮೋದಿಅವರ ಯೂಟ್ಯೂಬ್ ಜರ್ನಿ: ಜಾಗತಿಕ ಪ್ರಭಾವಕ್ಕೆ 15 ವರ್ಷಗಳು
September 27th, 11:29 pm
ನನ್ನ ಯೂಟ್ಯೂಬರ್ ಸ್ನೇಹಿತರೇ, ಇಂದು ಸಹ ಯೂಟ್ಯೂಬರ್ ಆಗಿ ನಿಮ್ಮ ನಡುವೆ ಇರಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ನಿಮ್ಮಂತೆಯೇ ಇದ್ದೇನೆ, ಯಾವುದೇ ಭಿನ್ನವಾಗಿಲ್ಲ. 15 ವರ್ಷಗಳಿಂದ ನಾನು ಯೂಟ್ಯೂಬ್ ಚಾನೆಲ್ ಮೂಲಕ ದೇಶ ಮತ್ತು ಪ್ರಪಂಚದೊಂದಿಗೆ ಸಂಪರ್ಕ ಹೊಂದಿದ್ದೇನೆ. ನಾನು ಯೋಗ್ಯ ಸಂಖ್ಯೆಯಲ್ಲಿ ಚಂದಾದಾರರನ್ನು ಸಹ ಹೊಂದಿದ್ದೇನೆ.ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯೂಟ್ಯೂಬ್ ಬಳಕೆದಾರರನ್ನು ಉದ್ದೇಶಿಸಿ ಮಾತನಾಡಿದರು
September 27th, 11:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಯೂಟ್ಯೂಬರ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಅವರು ಯೂಟ್ಯೂಬಿನಲ್ಲಿ ತಮ್ಮ 15 ವರ್ಷಗಳನ್ನು ಪೂರ್ಣಗೊಳಿಸಿದರು ಮತ್ತು ಮಾಧ್ಯಮದ ಮೂಲಕ ಜಾಗತಿಕ ಪ್ರಭಾವವನ್ನು ಸೃಷ್ಟಿಸುವ ತಮ್ಮ ಅನುಭವವನ್ನು ಹಂಚಿಕೊಂಡರು.PM Modi addresses the Nari Shakti Vandan Abhinandan Karyakram in Vadodara
September 27th, 03:39 pm
Prime Minister Narendra Modi addressed the Nari Shakti Vandan Abhinandan Karyakram in Vadodara. Speaking at the event, PM Modi said, “Ever since the day the 'Narishakti Vandan Adhiniyam' was passed by the Parliament, I was eager to visit Gujarat and especially Vadodara. Vadodara has taken care of me in my life, like a mother takes care of her child. Therefore, today I have come especially to meet my mothers and sisters of Vadodara.”PM Modi addresses the Nari Shakti Vandan Abhinandan Karyakram in Ahmedabad
September 26th, 07:53 pm
Addressing the Nari Shakti Vandan Abhinandan Karyakram in Ahmedabad, Prime Minister Narendra Modi hailed the passage of the Nari Shakti Vandan Adhiniyam, seeking to reserve 33% of seats in Lok Sabha and state Assemblies for women. Speaking to the women in the event, PM Modi said, “Your brother has done one more thing in Delhi to increase the trust with which you had sent me to Delhi. Nari Shakti Vandan Adhiniyam, i.e. guarantee of increasing representation of women from Assembly to Lok Sabha.”ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆ ನಾಯಕರ ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 22nd, 10:42 pm
ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.ಬ್ರಿಕ್ಸ್ ವಾಣಿಜ್ಯ ವೇದಿಕೆ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆ
August 22nd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 22 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ವಾಣಿಜ್ಯ ವೇದಿಕೆಯ ನಾಯಕರ ಸಂವಾದದಲ್ಲಿ ಭಾಗವಹಿಸಿದರು.ಜಿ20 ಡಿಜಿಟಲ್ ಆರ್ಥಿಕತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಪಠ್ಯ
August 19th, 11:05 am
ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಡಿಜಿಟಲ್ ರೂಪಾಂತರವು ಅಭೂತಪೂರ್ವವಾಗಿದೆ. ಇದು 2015ರಲ್ಲಿ ನಮ್ಮ ಡಿಜಿಟಲ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸುವುದರೊಂದಿಗೆ ಆರಂಭವಾಯಿತು. ನಾವೀನ್ಯತೆಯಲ್ಲಿ ನಮ್ಮ ಅಚಲ ನಂಬಿಕೆಯಿಂದ ಇದು ಶಕ್ತಿಯುತವಾಗಿದೆ. ತ್ವರಿತ ಅನುಷ್ಠಾನಕ್ಕೆ ನಮ್ಮ ಬದ್ಧತೆಯಿಂದ ಇದು ಚಾಲಿತವಾಗಿದೆ. ಮತ್ತು, ಇದು ಯಾರನ್ನೂ ಹಿಂದೆ ಬಿಡದೆ ನಮ್ಮ ಒಳಗೊಳ್ಳುವಿಕೆಯ ಮನೋಭಾವದಿಂದ ಪ್ರೇರೇಪಿಸಲ್ಪಟ್ಟಿದೆ. ಈ ರೂಪಾಂತರದ ಪ್ರಮಾಣ, ವೇಗ ಮತ್ತು ವ್ಯಾಪ್ತಿ ಕಲ್ಪನೆಗೂ ಮೀರಿದ್ದಾಗಿದೆ. ಇಂದು, ಭಾರತವು 850 ದಶಲಕ್ಷಕ್ಕೂ ಹೆಚ್ಚು ಇಂಟರ್ನೆಟ್ ಬಳಕೆದಾರರನ್ನು ಹೊಂದಿದೆ, ಇದು ವಿಶ್ವದ ಅಗ್ಗದ ಡೇಟಾ ವೆಚ್ಚಗಳನ್ನು ಆನಂದಿಸುತ್ತಿದೆ. ಆಡಳಿತವನ್ನು ಹೆಚ್ಚು ದಕ್ಷ, ಅಂತರ್ಗತ, ವೇಗ ಮತ್ತು ಪಾರದರ್ಶಕವಾಗಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ. ನಮ್ಮ ವಿಶಿಷ್ಟ ಡಿಜಿಟಲ್ ಗುರುತಿನ ವೇದಿಕೆಯಾದ ಆಧಾರ್ ನಮ್ಮ ಒಂದು ಬಿಲಿಯನ್ ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿದೆ. ಭಾರತದಲ್ಲಿ ಆರ್ಥಿಕ ಸೇರ್ಪಡೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಾವು ಜನ್ ಧನ್ ಬ್ಯಾಂಕ್ ಖಾತೆಗಳು, ಆಧಾರ್ ಮತ್ತು ಮೊಬೈಲ್ ಎಂಬ JAM ತ್ರಿಮೂರ್ತಿಗಳ ಶಕ್ತಿಯನ್ನು ಬಳಸಿದ್ದೇವೆ. ಪ್ರತಿ ತಿಂಗಳು, ನಮ್ಮ ತ್ವರಿತ ಪಾವತಿ ವ್ಯವಸ್ಥೆಯಾದ ಯುಪಿಐನಲ್ಲಿ ಸುಮಾರು 10 ಶತಕೋಟಿ ರೂ. ವಹಿವಾಟುಗಳು ನಡೆಯುತ್ತವೆ. ಜಾಗತಿಕ ನೈಜ ಸಮಯದ ಪಾವತಿಗಳಲ್ಲಿ ಶೇ.45 ಕ್ಕಿಂತ ಹೆಚ್ಚು ಭಾರತದಲ್ಲಿ ನಡೆಯುತ್ತದೆ. ನೇರ ಪ್ರಯೋಜನಗಳು ಸರ್ಕಾರದ ಬೆಂಬಲದ ವರ್ಗಾವಣೆಯು ಸೋರಿಕೆಯನ್ನು ತಡೆಯುತ್ತಿದೆ ಮತ್ತು 33 ಶತಕೋಟಿ ಡಾಲರ್ ಗಳನ್ನು ಉಳಿಸಿದೆ. ಕೋವಿನ್ ಪೋರ್ಟಲ್ಜಿ-20 ಡಿಜಿಟಲ್ ಆರ್ಥಿಕ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
August 19th, 09:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಡಿಜಿಟಲ್ ಆರ್ಥಿಕತೆ ಕುರಿತ ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 15th, 01:47 am
ಸುಂದರ ನಗರವಾದ ಪ್ಯಾರಿಸ್ ನಲ್ಲಿ ಈ ಆತ್ಮೀಯ ಸ್ವಾಗತಕ್ಕಾಗಿ ನಾನು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಫ್ರಾನ್ಸ್ ನ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ದಿನವನ್ನು ವಿಶ್ವದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಂತಹ ಮೌಲ್ಯಗಳ ಸಂಕೇತವೆಂದು ಪರಿಗಣಿಸಲಾಗಿದೆ. ಈ ಮೌಲ್ಯಗಳು ನಮ್ಮ ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಸಂಬಂಧಗಳ ಅಡಿಪಾಯವೂ ಆಗಿವೆ. ಇಂದು, ಈ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿರಲು ನನಗೆ ಗೌರವವಿದೆ. ಭಾರತೀಯ ಸಶಸ್ತ್ರ ಪಡೆಗಳ ಎಲ್ಲಾ ಮೂರು ಸೇವೆಗಳ ತುಕಡಿಗಳು ಈ ಸಂದರ್ಭಕ್ಕೆ ಅನುಗ್ರಹ ಮತ್ತು ಘನತೆಯನ್ನು ಹೆಚ್ಚಿಸಲು ಭಾಗವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ನಾವು ಭಾರತೀಯ ರಫೇಲ್ ವಿಮಾನದ ಹಾರಾಟಕ್ಕೆ ಸಾಕ್ಷಿಯಾಗಿದ್ದೇವೆ ಮತ್ತು ನಮ್ಮ ನೌಕಾ ಹಡಗು ಸಹ ಫ್ರಾನ್ಸ್ ಬಂದರಿನಲ್ಲಿತ್ತು. ಸಮುದ್ರ, ಭೂಮಿ ಮತ್ತು ವಾಯು ಕ್ಷೇತ್ರಗಳಲ್ಲಿ ನಮ್ಮ ಹೆಚ್ಚುತ್ತಿರುವ ಸಹಕಾರಕ್ಕೆ ಸಾಕ್ಷಿಯಾಗುವುದು ಒಂದು ಅದ್ಭುತ ದೃಶ್ಯವಾಗಿತ್ತು. ನಿನ್ನೆ, ಅಧ್ಯಕ್ಷ ಮ್ಯಾಕ್ರನ್ ನನಗೆ ಫ್ರಾನ್ಸ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಗೌರವವು 1.4 ಶತಕೋಟಿ ಭಾರತೀಯರ ಗೌರವವಾಗಿದೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಅಮೇರಿಕಾದಲ್ಲಿರುವ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು
June 24th, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 23, 2023 ರಂದು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.