ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುಡಿಸೆಂಬರ್ 17-18ರಂದು ಸೂರತ್ ಮತ್ತು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಿ
December 16th, 10:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17 ಮತ್ತು 18ರಂದು ಗುಜರಾತ್‌ನ ಸೂರತ್ ಮತ್ತು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 17ರಂದು ಬೆಳಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಸೂರತ್ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11:15ಕ್ಕೆ ಪ್ರಧಾನಮಂತ್ರಿಯವರು ʻಸೂರತ್ ಡೈಮಂಡ್ ಬೋರ್ಸ್ʼ ಅನ್ನು ಉದ್ಘಾಟಿಸಲಿದ್ದಾರೆ. ನಂತರ ವಾರಣಾಸಿಗೆ ಪ್ರಯಾಣ ಬೆಳೆಸಲಿರುವ ಅವರು, ಮಧ್ಯಾಹ್ನ 3:30ರ ಸುಮಾರಿಗೆ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:15ರ ಸುಮಾರಿಗೆ ಅವರು ʻನಮೋ ಘಾಟ್ʼನಲ್ಲಿ ʻಕಾಶಿ ತಮಿಳು ಸಂಗಮಂ-2023ʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.