ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ

January 17th, 08:27 am

“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು.

ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

October 17th, 10:05 am

ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು

October 17th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.

ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 29th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

"ನಾವು ರೈಲ್ವೆಗಳನ್ನು ಕೇವಲ ಸೇವೆಯಾಗಿ ಮಾತ್ರವಲ್ಲದೆ ಆಸ್ತಿಯಾಗಿಯೂ ಅಭಿವೃದ್ಧಿಪಡಿಸಿದ್ದೇವೆ: ಪ್ರಧಾನಿ ಮೋದಿ "

July 16th, 04:05 pm

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು.

ಗುಜರಾತ್‌ನಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

July 16th, 04:04 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು. ಅವರು ಗಾಂಧಿನಗರ ಕ್ಯಾಪಿಟಲ್ - ವಾರಾಣಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗಾಂಧಿನಗರ ಕ್ಯಾಪಿಟಲ್ ಮತ್ತು ವಾರೆಥಾ ನಡುವಿನ ಮೆಮು ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಮಂತ್ರಿ ಅವರಿಂದ ಗುಜರಾತ್ ನಲ್ಲಿ ನಾಳೆ ನಾನಾ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ

July 14th, 06:45 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಗುಜರಾತ್ ನ ನಾನಾ ರೈಲ್ವೆ ಯೋಜನೆಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಗುಜರಾತ್ ನ ವಿಜ್ಞಾನ ನಗರಿಯಲ್ಲಿ ಸ್ಥಾಪನೆಯಾಗಿರುವ ‘ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ’ ಹಾಗೂ ‘ನಿಸರ್ಗ ಉದ್ಯಾನ’ವನ್ನು ಅವರು ಇದೇ ಸಂದರ್ಭದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.

Social Media Corner for 8 October 2017

October 08th, 07:18 pm

Your daily dose of governance updates from Social Media. Your tweets on governance get featured here daily. Keep reading and sharing!

With Intensified Mission Indradhanush, we want to ensure better and healthy future for children: PM Modi

October 08th, 12:43 pm

Addressing a public meeting in his hometown, Shri Modi remarked, Coming back to one's home town and receiving such a warm welcome is special. Whatever I am today is due to the values I have learnt on this soil, among you all in Vadnagar.

ವಾದ್ ನಗರಕ್ಕೆ ಪ್ರಧಾನಿ ಭೇಟಿ, ಇಂದ್ರಧನುಷ್ ಕ್ಷಿಪ್ರ ಅಭಿಯಾನಕ್ಕೆ ಚಾಲನೆ, ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ

October 08th, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ತರುವಾಯ ಇದೇ ಮೊದಲಬಾರಿಗೆ ಇಂದು ತಮ್ಮ ಹುಟ್ಟೂರು ವಾದ್ ನಗರಕ್ಕೆ ಭೇಟಿ ನೀಡಿದರು.ಪ್ರಧಾನಮಂತ್ರಿಯವರನ್ನು ಸ್ವಾಗತಿಸಲು ಪುರಜನರು ರಸ್ತೆಯ ಇಕ್ಕೆಲದಲ್ಲಿ ಜಮಾಯಿಸಿದ್ದರು. ಪ್ರಧಾನಿ ಹತ್ಕೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ತಾವು ಬಾಲ್ಯದಲ್ಲಿ ಓದಿದ ಶಾಲೆಗೆ ಕೂಡ ಕೆಲ ಕಾಲ ಭೇಟಿ ನೀಡಿದ್ದರು.

PM Modi receives grand welcome in Vadnagar and offers prayers at Hatkeshwar Temple

October 08th, 12:06 pm

Prime Minister Shri Narendra Modi received a rousing reception in Vadnagar as he embarked on a roadshow in his hometown. Every nook and every corner of the town was choc-a-bloc with people to receive him.

2017ರ ಅಕ್ಟೋಬರ್ 7 ಮತ್ತು 8ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಿ

October 06th, 05:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2017ರ ಅಕ್ಟೋಬರ್ 7 ಮತ್ತು 8ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ.

ಮೋದಿ ಗುಜರಾತ್ ನಲ್ಲಿ ನೀರು ಸರಬರಾಜು ಯೋಜನೆಗಳನ್ನು ಪ್ರಧಾನಿ ಮೋದಿ ಸಮರ್ಪಿಸಿದ್ದಾರೆ

June 30th, 12:10 pm

ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಮೊಡಾಸದಲ್ಲಿ ನೀರು ಸರಬರಾಜು ಯೋಜನೆಗಳನ್ನು ಸಮರ್ಪಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ, ನಮ್ಮ ವಿವಿಧ ನೀರಾವರಿ ಯೋಜನೆಗಳ ಮೂಲಕ ಗುಜರಾತ್ ನಲ್ಲಿ ರೈತರು ನೀರನ್ನು ಪಡೆಯುತ್ತಿದ್ದಾರೆ ಎಂದು ನಾವು ಖಚಿತಪಡಿಸಿದ್ದೇವೆ ಎಂದು ಅವರು ಹೇಳಿದರು. ಅವರು ಫಾಸಲ್ ಬಿಮಾ ಯೋಜನೆ ಮತ್ತು ಇ-ನಾಮ್ ಬಗ್ಗೆ ಮಾತನಾಡಿದರು.